ಮೋಜಿತೋ ಮೋಷನ್ ಪೋಸ್ಟರ್ ಬಿಡುಗಡೆ

Published on

159 Views

ಮೋಜಿತೋ ಮೋಷನ್ ಪೋಸ್ಟರ್ ಬಿಡುಗಡೆ

ಸೈಂಟಿಫಿಕ್ ಥ್ರಿಲ್ಲರ್ ಕಥಾಹಂದರವನ್ನು ಹೊಂದಿರುವ ಮೋಜಿತೋ ಚಲನಚಿತ್ರದ ಮೋಷನ್ ಪೋಸ್ಟರ್‍ನ್ನು ನಟಿ ರಾಗಿಣಿ ದ್ವಿವೇದಿ ಅವರು ಬಿಡುಗಡೆಗೊಳಿಸಿದರು. ವೇಣುಗೋಪಾಲ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ಮಹಿಳಾ ಪ್ರಧಾನ ಕಥಾನಕವಿದ್ದು, ಅಮಿತಾ ರಂಗನಾಥ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೈನ್ಸ್ ಫಿಕ್ಷನ್ ಚಿತ್ರಗಳು ಕನ್ನಡದಲ್ಲಿ ತೀರಾ ವಿರಳ. ಅಂಥಾ ಎಳೆ ಇಟ್ಟುಕೊಂಡು ನಿರ್ದೇಶಕ ವೇಣುಗೋಪಾಲ್ ಈ ಚಿತ್ರವನ್ನು ತಯಾರಿಸುತ್ತಿದ್ದಾರೆ.

ಕನ್ನಡ ಹಾಗೂ ತಮಿಳು ಸೇರಿ ದ್ವಿಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಮನುಷ್ಯನ ಮನಸ್ಸು ಹಾಗೂ ಮೆದುಳಿನ ನಡುವೆ ನಡೆಯುವ ಸಂಘರ್ಷದ ಕಥೆಯನ್ನು ಹೇಳಲಾಗುತ್ತಿದೆ. ಈಗಾಗಲೇ ಈ ಚಿತ್ರದ ಮೊದಲಹಂತದ ಚಿತ್ರೀಕರಣದಲ್ಲಿ ಸುಮಾರು 20ರಷ್ಟು ಭಾಗದ ಚಿತ್ರೀಕರಣವನ್ನು ಮಾಡಲಾಗಿದ್ದು, ಉಳಿದ ಬಹುತೇಕ ಭಾಗದ ಚಿತ್ರೀಕರಣವನ್ನು ಗ್ರೀನ್‍ಮ್ಯಾಟ್‍ನಲ್ಲಿಯೇ ಚಿತ್ರೀಕರಿಸಬೇಕಾಗಿರುವುದರಿಂದ ಅಂಥಾ ಸ್ಟುಡಿಯೋಗಾಗಿ ಹುಡುಕಾಟ ನಡೆಸಲಾಗಿದೆ. ವಿಶೇಷವಾಗಿ ಈ ಚಿತ್ರದ ವಿಎಫ್‍ಎಕ್ಸ್‍ನ್ನು ನ್ಯೂಜಿಲ್ಯಾಂಡ್‍ನ ಸ್ಕೈಬ್ಲ್ಯೂ ಸ್ಟುಡಿಯೋದಲ್ಲಿ ನಡೆಸಲಾಗುವುದು. ದ್ವಿಭಾಷಾ ಚಲನಚಿತ್ರ ಇದಾಗಿರುವುದರಿಂದ ಕನ್ನಡ ಹಾಗೂ ತಮಿಳಿನ ಹಲವಾರು ಪ್ರಮುಖ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತಮಿಳಿನ ಸಮುದ್ರಖನಿ ಅವರು ಈ ಚಿತ್ರದ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಹಾಕ್ ಐ ಇಂಕ್ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶ್ರೀಕಾಂತ್ ಅವರ ಸಂಕಲನ ಹಾಗೂ ಮುಜಾಹಿದ್ ರಾಜಾ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Sorry, no posts matched your criteria.

More Buzz

Trailers 5 months ago

Rudra Garuda Purana Official Teaser Starring Rishi, Priyanka

Trailers 5 months ago

Pepe Kannada Movie Trailer Starring Vinay Rajkumar

BuzzKollywood Buzz 5 months ago

The GOAT Movie: Trailer ಗೂ ಟ್ರೈಲರ್ ರಿಲೀಸ್ ಮಾಡಿದ ವಿಜಯ್ ನಟನೆಯ ಚಿತ್ರತಂಡ

Buzz 5 months ago

Daali Pictures: ವಿದ್ಯಾಪತಿ ಮೂಲಕ ಕರಾಟೆ ಕಿಂಗ್ ಆದ ನಾಗಭೂಷಣ, ಪ್ರೊಮೋ ಬಗ್ಗೆ ಸಿಕ್ತು ಬಿಗ್ ಅಪ್ ಡೇಟ್

BuzzTrailers 5 months ago

Laughing Buddha Trailer – ಪ್ರಮೋದ್ ಶೆಟ್ರ ಡೊಳ್ಳೊಟ್ಟೆ ಪೊಲೀಸ್ ಪಾತ್ರ ನೋಡಿದ್ರಾ? ಟ್ರೈಲರ್ ಇಲ್ಲಿದೆ ನೋಡಿ.

Buzz 5 months ago

Samarjith Lankesh: ಇಂದ್ರಜಿತ್ ಲಂಕೇಶ್ ಮಗನ ಜೊತೆ ಹುಚ್ಚೆದ್ದು ಕುಣಿದು ‘ಕಿಸ್’ ಕೊಟ್ಟ ಉಪೇಂದ್ರ – ವೈರಲ್ ವಿಡಿಯೋ ಇಲ್ಲಿದೆ!

Buzz 5 months ago

Abhishek Aishwarya Divorce – ನಾವು ಡಿವೋರ್ಸ್ ಪಡೆಯಲಿದ್ದೇವೆ ಎಂದ ಅಭಿಷೇಕ್‌ ಬಚ್ಚನ್ ವಿಡಿಯೋ ವೈರಲ್ – ಅಸಲಿಯತ್ತೇನು?

Buzz 5 months ago

Tharun Sonal Marriage: ಸಪ್ತಪದಿ ತುಳಿಯಲಿರುವ ತರುಣ್ – ಸೋನಲ್, ನಟಿ ನಿರ್ದೇಶಕ ಜೋಡಿಗೆ ಹಲವಾರು ಗಣ್ಯರ ಆಶೀರ್ವಾದ

Buzz 5 months ago

Bheema Movie Review: ಫುಲ್ ಆಕ್ಷನ್, ಸ್ಟಾರ್ಟ್ ಟು ಎಂಡ್ ಸಖತ್ ಮಾಸ್ – ದುನಿಯಾ ವಿಜಿ ಭೀಮ ಥಿಯೇಟರ್ ಕಿಂಗ್

BuzzTollywood Buzz 6 months ago

Naga Chaithanya – Shobhitha Dhulipala: ದೀರ್ಘಕಾಲದ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಸಮಂತಾ ಮಾಜಿ ಪತಿ ನಾಗಚೈತನ್ಯ

BuzzTollywood Buzz 6 months ago

Mr.Bachchan ಆದ ರವಿತೇಜ – ಚಿತ್ರದ ಟ್ರೈಲರ್ ನಲ್ಲಿ ‘ಮಾಸ್ ಮಹಾರಾಜ’ನ ಕಮಾಲ್

BuzzShort Films 6 months ago

Kanjoos Kubera Short Film Official Video: ಕಂಜ್ಯೂಸ್ ಕುಬೇರ ಕನ್ನಡ ಕಿರುಚಿತ್ರ ನೋಡಿ.

Copyright ©2025 . All Rights Reserved. privacy | terms Whatsapp: 9538193653 Email: hello@flixoye.com