ಮ್ಯೂಸಿಕಲ್ ಲವ್ ಸ್ಟೋರಿಯ “ಮೈಸೂರು” . ಇದು ಅನಿವಾಸಿ ಕನ್ನಡಿಗನ ಪ್ರೇಮಕಥೆ.

Published on

608 Views
Advertisement

ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು. ‌ಈಗ ಇದೇ ಹೆಸರಿನ ಚಿತ್ರವೊಂದು ಸಿದ್ದವಾಗುತ್ತಿದ್ದು, ಚಿತ್ರೀಕರಣ ಪೂರ್ಣವಾಗಿದೆ.

“ಮೈಸೂರು” ಇದು ಹೊರ ರಾಜ್ಯದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗನ ಪ್ರೇಮಕಥೆ.‌ ಮ್ಯೂಸಿಕಲ್ ಲವ್ ಸ್ಟೋರಿ ಯೂ ಹೌದು.

Advertisement

ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಉಡುಪಿ, ಭುವನೇಶ್ವರ್, ಪೂರಿ, ಕಟಕ್ ಮುಂತಾದ ಕಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ.

ಕಿರುತೆರೆಯ ವಿವಿಧ ಭಾಗಗಳಲ್ಲಿ ಕಾರ್ಯ ನಿರ್ವಹಿಸಿರುವ ವಾಸುದೇವ ರೆಡ್ಡಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಎಸ್ ಆರ್ ಕಂಬೈನ್ಸ್ ಲಾಂಛನದಲ್ಲಿ ವಾಸುದೇವ ರೆಡ್ಡಿ ನಿರ್ಮಾಣವನ್ನು ಮಾಡಿದ್ದಾರೆ.
ಜಗದೀಶ್ (ಜೆ.ಕೆ), ಕೆ.ಆರ್.ಅಪ್ಪಾಜಿ(ಕೊಡವತ್ತಿ) ಈ ಚಿತ್ರದ ಸಹ‌ ನಿರ್ಮಾಪಕರು.

Advertisement

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗುತ್ತಿದೆ.

ಸಂವಿತ್ ಈ ಚಿತ್ರದ ನಾಯಕ. ತೆಲುಗು, ಬಂಗಾಳಿ, ಭೋಜಪುರಿ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಇವರಿಗೆ ಕನ್ನಡದಲ್ಲಿ ಮೊದಲ ಚಿತ್ರ. ಪೂಜಾ ಈ ಚಿತ್ರದ ನಾಯಕಿ. ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದ ವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement


ರಘು ಶಾಸ್ತ್ರಿ, ರವಿಶಂಕರ್ ನಾಗ್, ಅನಿತಕೃಷ್ಣ ಬರೆದಿರುವ ಹಾಡುಗಳಿಗೆ ರಮಣಿ ಸುಂದರೇಶನ್, ಅನಿತಕೃಷ್ಣ, ವಿಜಯ್ ರಾಜ್ ಸಂಗೀತ ನೀಡಿದ್ದಾರೆ.
ಕೃಷ್ಣ ಮಳವಳ್ಳಿ ಸಂಭಾಷಣೆ ಬರೆದಿದ್ದಾರೆ. ಭಾಸ್ಕರ್ ವಿ ರೆಡ್ಡಿ ಛಾಯಾಗ್ರಹಣ, ಸಿದ್ದು ಭಗತ್ ಸಂಕಲನ ಹಾಗೂ ಸ್ಟಾರ್ ನಾಗಿ, ಮೈಸೂರು ರಾಜು, ಸುಧಾಕರ್ ವಸಂತ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

“ಮೈಸೂರು” ಚಿತ್ರದಲ್ಲಿ ಎರಡು ಸಾಹಸ ಸನ್ನಿವೇಶಗಳಿದ್ದು, ಶ್ರೀಕಾಂತ್ ಸಾಹಸ ನಿರ್ದೇಶನ ಮಾಡಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com