‘ನಮ್​ ಕನಸ ಕನ್ನಡ …’ – ‘ಆಕಾಶವಾಣಿ ಮೈಸೂರು ಕೇಂದ್ರ’ದಿಂದ ಇನ್ನೊಂದು ಹಾಡು

Published on

529 Views
Advertisement

ಸತೀಶ್​ ಬತ್ತುಲ ನಿರ್ದೇಶನದ ‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರದಿಂದ ಇನ್ನೊಂದು ಹೊಸ ಹಾಡು ಹೊರಬಿದ್ದಿದೆ. ‘ನಮ್​ ಕನಸ ಕನ್ನಡ …’ ಎಂದು ಸಾಗುವ ಈ ಹಾಡಿಗೆ ಎಲ್.ಎನ್.ಸೂರ್ಯ ಸಾಹಿತ್ಯ ರಚಿಸಿದ್ದು, ಜನಾರ್ದನ್​ ಮತ್ತು ಸಿ.ಎಚ್.ಶ್ರೀಕೃತಿ ಧ್ವನಿಯಾಗಿದ್ದಾರೆ. ಕಾರ್ತಿಕ್ ಕೊಡಕಂಡ್ಲ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡು ಇದೀಗ ಯೂಟ್ಯೂಬ್​ನ ಮಿಥುನ ಮ್ಯೂಸಿಕ್​ ಚಾನಲ್​ನಲ್ಲಿ ಇತ್ತೀಚೆಗೆ ಬಿಡುಗಡೆಯಾಗಿ ಕೇಳುಗರಿಂದ ಮೆಚ್ಚುಗೆ ಪಡೆಯುತ್ತಿದೆ.

Advertisement

‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರವನ್ನು ‘ಜಬರ್ದಸ್ತ್’ ಖ್ಯಾತಿಯ ಸತೀಶ್ ಬತ್ತುಲ ನಿರ್ದೇಶಿಸಿದ್ದಾರೆ. ಶಿವಕುಮಾರ್, ಅಕ್ಷತಾ ಶ್ರೀಧರ್ ಮತ್ತು ಅರ್ಚನಾ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವನ್ನು ಮಿಥುನಾ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೈನ್ಸ್ ಸ್ಟುಡಿಯೋಸ್​ನಡಿ ಎಂ.ಎಂ. ಅರ್ಜುನ್ ಮತ್ತು ಕಮಲ್ ಮೇಡಗೋಣಿ ನಿರ್ಮಿಸುತ್ತಿದ್ದಾರೆ. ಇದೊಂದು ರೊಮ್ಯಾಂಟಿಕ್​ ಥ್ರಿಲ್ಲರ್​ ಚಿತ್ರವಾಗಿದ್ದು, ಏಕಕಾಲದಲ್ಲಿ ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂನಲನಲ್ಲಿ ಸದ್ಯದಲ್ಲೇ ಬಿಡುಗಡೆಯಾಗುತ್ತಿದೆ.

Advertisement

ಈ ಪ್ಯಾನ್​ ಇಂಡಿಯಾ ಚಿತ್ರದ ಬಗ್ಗೆ ಕುರಿತು ಮಾತನಾಡುವ ನಿರ್ಮಾಪಕರಾದ ಎಂ.ಎಂ.ಅರ್ಜುನ್ ಮತ್ತು ಕಮಲ್ ಮೇಡಗೋಣಿ, ‘ನಿರ್ದೇಶಕ ಸತೀಶ್ ಅವರ ನಿರೂಪಣೆ ನಮಗೆ ಇಷ್ಟವಾಯಿತು. ಚಿತ್ರವನ್ನು ಬಹಳ ಚೆನ್ನಾಗಿ ರೂಪಿಸಿದ್ದಾರೆ ಅವರು. ನಿರ್ಮಾಪಕನಾಗಿ ನಾನು ನನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ ಎಂಬ ನಂಬಿಕೆ ಇದೆ. ಇದೊಂದು ಯೂನಿವರ್ಸಲ್ ಕಥೆಯಾದ್ದರಿಂದ ಪ್ಯಾನ್​-ಇಂಡಿಯಾ ಚಿತ್ರವನ್ನಾಗಿ ಬಿಡುಗಡೆ ಮಾಡುತ್ತಿದ್ದೇವೆ. ಇದು ಚಿತ್ರದ ಎರಡನೇ ಹಾಡಾಗಿದ್ದು, ಇದಕ್ಕೂ ಮುನ್ನ ‘ನಿನ್ನ ನೋಡಿದ …’ ಎಂಬ ಹಾಡು ಬಿಡುಗಡೆಯಾಗಿದೆ. ಶೀಘ್ರದಲ್ಲೇ ನಮ್ಮ ಸಿನಿಮಾದ ಬಿಡುಗಡೆ ದಿನಾಂಕವನ್ನು ಪ್ರಕಟಿಸುತ್ತೇವೆ’ ಎನ್ನುತ್ತಾರೆ.

Advertisement

ಇದೊಂದು ವಿಭಿನ್ನ ಲವ್ ಎಂಟರ್‌ಟೈನರ್ ಎನ್ನುವ ನಿರ್ದೇಶಕ ಸತೀಶ್ ಬತ್ತುಲ, ‘ಇದೊಂದು ವಿಭಿನ್ನ ಕಥೆ ಇರುವ ಚಿತ್ರ. ನಿರ್ಮಾಪಕರ ಬೆಂಬಲವು ನಮ್ಮನ್ನು ಇಲ್ಲಿಯವರೆಗೆ ಕರೆದೊಯ್ದಿದೆ. ಈ ಪ್ಯಾನ್ ಇಂಡಿಯಾ ಚಿತ್ರವನ್ನು ಎಲ್ಲೂ ರಾಜಿ ಮಾಡಿಕೊಳ್ಳದೆ ನಿರ್ಮಿಸಲಾಗಿದೆ. ನಮ್ಮ ಸಿನಿಮಾದಲ್ಲಿ ಅನುಭವಿ ತಂತ್ರಜ್ಞರು ಕೆಲಸ ಮಾಡಿದ್ದು, ಸಂಗೀತ, ಹಿನ್ನೆಲೆ ಸಂಗೀತ ಮತ್ತು ಛಾಯಾಗ್ರಹಣ ಅದ್ಭುವಾಗಿ ಮೂಡಿಬಂದಿದೆ’ ಎನ್ನುತ್ತಾರೆ.

‘ಆಕಾಶವಾಣಿ ಮೈಸೂರು ಕೇಂದ್ರ’ ಚಿತ್ರದಲ್ಲಿ ಶಿವಕುಮಾರ್, ಹುಮೇ ಚಂದ್, ಅಕ್ಷತಾ ಶ್ರೀಧರ್, ಅರ್ಚನಾ, ಮಾಧವಿ ಲತಾ ಮುಂತಾದವರು ನಟಿಸಿದ್ದು, ಆರೀಫ್​​ ಲಲಾನಿ ಅವರ ಛಾಯಾಗ್ರಹಣ ಮತ್ತು ಕಾರ್ತಿಕ್ ಕೊಡಕಂಡ್ಲ ಅವರ ಸಂಗೀತ ಈ ಚಿತ್ರಕ್ಕಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com