ನನ್ನಮ್ಮ ಸೂಪರ್ ಸ್ಟಾರ್’ ಖ್ಯಾತಿಯ ಸಮನ್ವಿ ಅಪಘಾತದಲ್ಲಿ ಸಾವು

Published on

883 Views
Advertisement

ಬೆಂಗಳೂರು: ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ನಗರದ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳ್ತಿದ್ದಾಗ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್​​ಗೆ ರವಾನೆ ಮಾಡಿದ್ದು, ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತಂತೆ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com