‘ಪೆಟ್ರೋಮ್ಯಾಕ್ಸ್’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ
ಸತೀಶ್ ನೀನಾಸಂ ನಟನೆಯ ವಿಜಯ್ ಪ್ರಸಾದ್ ನಿರ್ದೇಶನದ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಪೂರ್ಣಗೊಳಿಸಿದ್ದರು. ಇಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ‘ಪೆಟ್ರೋಮ್ಯಾಕ್ಸ್’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡುವ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದೆ ತಂಡ.

ಸತೀಶ್ ನೀನಾಸಂ ಜೊತೆ ಹರಿಪ್ರಿಯಾ ನಾಯಕಿಯಾಗಿ ನಟಿಸಿದ್ದು, ನಟಿ ಕಾರುಣ್ಯ ರಾಮ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದಾರೆ.
Advertisement
Advertisement