ಭಾರ್ಗವ್ ಕೃಷ್ಣ ಅಭಿನಯದ “ಓಂ ಶಿವಂ” ಲಿರಿಕಲ್ ಸಾಂಗ್ ಬಿಡುಗಡೆ

Published on

607 Views
Advertisement

ಕನ್ನಡ ಚಿತ್ರರಂಗದಲ್ಲಿ ಹೊಸ ನಾಯಕನಟನ ಆಗಮನವಾಗುತ್ತಿದೆ. ಭಾರ್ಗವ್ ಕೃಷ್ಣ ಅವರ ಚೊಚ್ಚಲ ಚಿತ್ರ “ಓಂ ಶಿವಂ” ನ ಲಿರಿಕಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಭಾರ್ಗವ್ ಅವರ ಅಜ್ಜಿ, ತಾತ ಈ ಹಾಡನ್ನು ಬಿಡುಗಡೆ ಮಾಡಿ ಮೊಮ್ಮಗನ ಮೊದಲ ಚಿತ್ರಕ್ಕೆ ಶುಭ ಹಾರೈಸಿದರು. ಅವರ ತಂದೆ ಕೃಷ್ಣ ಕೆ.ಎನ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

Advertisement

ನಿರ್ಮಾಪಕ ಕೃಷ್ಣ ಮಾತನಾಡುವಾಗ, “ಆಲ್ವಿನ್ ಒಳ್ಳೆಯ ಕಥೆ ಸಿದ್ದ ಮಾಡಿಕೊಂಡು ಬಂದು ಅದನ್ನು ಪ್ರಸ್ತಾಪಿಸಿದರು. ನಾನು ಕಥೆ ಚೆನ್ನಾಗಿದೆ, ಆದರೆ ನಾಯಕನನ್ನು ಹುಡುಕಿ ಚಿತ್ರ ಆರಂಭಿಸೋಣ ಎಂದೆ. ಆಲ್ವಿನ್ ನನ್ನ ಮಗ ಭಾರ್ಗವ್ ಅವರನ್ನೇ ನಾಯಕನಾಗಿ ಆಯ್ಕೆ ಮಾಡುವುದಾಗಿ ಹೇಳಿದಾಗ ನನಗೆ ಸಂತೋಷವಾಯಿತು. ಈಗ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ” ಎಂದು ತಿಳಿಸಿದರು.

Advertisement

ನಿರ್ದೇಶಕ ಆಲ್ವಿನ್, “ಓಂ ಶಿವಂ” ನನ್ನ ಎರಡನೇ ಚಿತ್ರ, ಇದು ಲವ್ ಜಾನರ್‌ನಲ್ಲಿದೆ ಆದರೆ ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿವೆ. ಈ ಚಿತ್ರಕ್ಕೆ ಇಪ್ಪತ್ತೊಂದು ವಯಸ್ಸಿನ ನಾಯಕನ ಅಗತ್ಯವಿತ್ತು, ಹಾಗಾಗಿ ಭಾರ್ಗವ್ ಅವರನ್ನು ಆಯ್ಕೆ ಮಾಡಲಾಯಿತು. ಅವರ ಮೊದಲ ಪ್ರಯತ್ನದಲ್ಲಿ ಅವರು ಉತ್ತಮವಾಗಿ ಅಭಿನಯಿಸಿದ್ದಾರೆ.ಚಿತ್ರದಲ್ಲಿ ನಾಲ್ಕು ಹಾಡುಗಳು, ಅದ್ಭುತ ಸಾಹಸ ಸನ್ನಿವೇಶಗಳು ಸೇರಿವೆ.

Advertisement

ನಾಯಕ ಭಾರ್ಗವ್, “ನಾನು ನನ್ನ ತಂದೆಗೆ ಮತ್ತು ನಿರ್ದೇಶಕ ಆಲ್ವಿನ್ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಇದು ನನ್ನ ಮೊದಲ ಚಿತ್ರವಾಗಿದ್ದು, ಸಾಕಷ್ಟು ತಯಾರಿ ಮಾಡಿಕೊಂಡಿದ್ದೇನೆ” ಎಂದು ಹೇಳಿದರು.

ನಾಯಕಿ ವಿರಾಣಿಕ ಶೆಟ್ಟಿ ಅಂಜಲಿ ನನ್ನ ಪಾತ್ರದ ಹೆಸರು ಎಂದು ಹೇಳಿದರು. ನಟರಾದ ಕಾಕ್ರೋಜ್ ಸುಧೀ, ಯಶ್ ಶೆಟ್ಟಿ, ವರ್ಧನ್, ನಟಿಯರಾದ ಅಪೂರ್ವ, ಲಕ್ಷ್ಮೀ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ವಿಜಯ್ ಯಾರ್ಡ್ಲೆ, ಛಾಯಾಗ್ರಾಹಕ ವೀರೇಶ್ ಹಾಗೂ ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಸೇರಿದಂತೆ ಅನೇಕ ತಂತ್ರಜ್ಞರು ತಮ್ಮ ಕಾರ್ಯದ ಬಗ್ಗೆ ಮಾಹಿತಿ ನೀಡಿದರು

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 month ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 month ago

Assi: ZEE5 Film Tackles Stark Reality with Urgent Voice

Buzz 1 month ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 month ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com