ಲಂಕೆ ಗೆ ಒಂದು ವರುಷ.. ಚಿತ್ರತಂಡದಲ್ಲಿ ಮನೆಮಾಡಿದೆ ಹರುಷ.

Published on

537 Views
Advertisement

ಲಂಕೆ ಗೆ ಒಂದು ವರುಷ.. ಚಿತ್ರತಂಡದಲ್ಲಿ ಮನೆಮಾಡಿದೆ ಹರುಷ.
ಕೊರೋನ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದ ಸಮಯದಲ್ಲಿ ಬಿಡುಗಡೆಯಾದ ಚಿತ್ರ ಲೂಸ್ ಮಾದ ಯೋಗಿ ಅಭಿನಯದ “ಲಂಕೆ”. ಈ ಚಿತ್ರ ಬಿಡುಗಡೆಯಾಗಿ ಒಂದು ವರ್ಷಗಳಾಗಿದೆ. ಇತ್ತೀಚೆಗೆ ನೂರುದಿನಗಳು ಚಿತ್ರ ಓಡುತ್ತಿರುವುದೆ ಕಡಿಮೆ‌‌. ಅಂತಹುದರಲ್ಲಿ ಕನ್ನಡ ಚಿತ್ರವೊಂದು 365 ದಿನಗಳು ಪೂರೈಸಿರುವುದು ಖುಷಿಯ ವಿಚಾರ. ಈ ಖುಷಿಯನ್ನು ಹಂಚಿಕೊಳ್ಳಲು ಸಂತಸದ ಸಮಾರಂಭ ಆಯೋಜಿಸಲಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಪಕ ಟಿ.ಪಿ.ಸಿದ್ದರಾಜು, ಶಿಲ್ಪ ಶ್ರೀನಿವಾಸ್, ಚಾಮುಂಡೇಶ್ವರಿ ಸ್ಟುಡಿಯೋ ಮಾಲೀಕರಾದ ರಾಜಲಕ್ಷ್ಮಿ ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

Advertisement

ನನ್ನ ಮನೆಯಲ್ಲಿ ಐವತ್ತು, ನೂರು, ನೂರೈವತ್ತು ದಿನಗಳ ಫಲಕಗಳಿತ್ತು. 365 ದಿನಗಳ ಫಲಕ ಇದೇ ಮೊದಲು. ಈ ಯಶಸ್ಸಿನ ಬಹುಪಾಲು ನಿರ್ದೇಶಕ ರಾಮ್ ಪ್ರಾಸಾದ್ ಅವರಿಗೆ ಸಲ್ಲಬೇಕು. ಒಳ್ಳೆಯ ಸಿನಿಮಾದಲ್ಲಿ ಭಾಗಿಯಾಗಿರುವುದಕ್ಕೆ ಸಂತೋಷವಾಗಿದೆ ಎಂದರು ನಾಯಕ ಲೂಸ್ ಮಾದ ಯೋಗಿ.

Advertisement

ನಿಜಕ್ಕೂ ಈ ಸಂದರ್ಭದಲ್ಲಿ ನಮ್ಮ ಚಿತ್ರಕ್ಕೆ ಪ್ರೇಕ್ಷಕರು ನೀಡಿರುವ ಬೆಂಬಲಕ್ಕೆ ಮೊದಲು ಅವರಿಗೆ ಧನ್ಯವಾದ ಹೇಳಬೇಕು. ಇದು ನನ್ನೊಬ್ಬನ ಗೆಲುವಲ್ಲ. ತಂಡದ ಗೆಲುವು. ನಾಯಕ ಯೋಗಿ ಅವರನ್ನು ನಾನು ಬ್ರೋ ಎನ್ನುತ್ತೇನೆ. ಸಹೋದರನಂತೆ ನನಗೆ ಅವರು ಸಹಕಾರ ನೀಡಿದರು. ಚಿತ್ರ ಒಂದು ವರ್ಷ ಪ್ರದರ್ಶನ ಕಾಣಲು ವಿತರಕ ಮಾರ್ಸ್ ಸುರೇಶ್ ಅವರೆ ಪ್ರಮುಖ ಕಾರಣ. ಇನ್ನೂ ನಿರ್ಮಾಪಕರಾದ ಸುರೇಖ ರಾಮ್‌ ಪ್ರಸಾದ್ ಹಾಗೂ‌ ಪಟೇಲ್ ಶ್ರೀನಿವಾಸ್ ಅವರನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳಲೇ ಬೇಕು. ಸದ್ಯದಲ್ಲೇ ಹೊಸ ಚಿತ್ರ ಆರಂಭಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಆ ಕುರಿತು ಮಾಹಿತಿ ನೀಡುತ್ತೇನೆ . ನಿಮ್ಮ ಹಾರೈಕೆಯಿರಲಿ ಎಂದ ನಿರ್ದೇಶಕ ರಾಮ್ ಪ್ರಸಾದ್ ಎಂ.ಡಿ ಈ ಗೆಲುವನ್ನು ಚಿತ್ರದಲ್ಲಿ ನಟಿಸಿರುವ ಸಂಚಾರಿ ವಿಜಯ್ ಅವರಿಗೆ ಅರ್ಪಿಸುವುದಾಗಿ ಹೇಳಿದರು.

Advertisement

ನಾಯಕಿ ಕೃಷಿ ತಾಪಂಡ, ಚಿತ್ರದಲ್ಲಿ ನಟಿಸಿರುವ ಎಸ್ತರ್ ನರೋನ, ಡ್ಯಾನಿಯಲ್ ಕುಟ್ಟಪ್ಪ, ಸಂಗಮೇಶ್ ಉಪಾಸೆ, ಮಹಂತೇಶ್ ಮುಂತಾದ ಕಲಾವಿದರು ಹಾಗೂ ತಂತ್ರಜ್ಞರು “ಲಂಕೆ” ಯ ಗೆಲುವನ್ನು ಹಂಚಿಕೊಂಡರು.
ಇದು ಒಂದೇ ಚಿತ್ರಮಂದಿರದಲ್ಲಿ ಒಂದು ವರ್ಷ ಓಡಿಲ್ಲ. ಕರ್ನಾಟಕದ ಹಲವು ಕಡೆ ಒಂದು ವರ್ಷದಿಂದ ಪ್ರದರ್ಶನವಾಗುತ್ತಿದೆ. ಇದಕ್ಕೆ ಕಾರಣ ರಾಮ್ ಪ್ರಸಾದ್ ಅವರಿಗೆ ಸಿನಿಮಾ ಮೇಲಿರುವ ಪ್ರೀತಿ ಎಂದು ವಿತರಕ ಮಾರ್ಸ್ ಸುರೇಶ್ ತಿಳಿಸಿದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com