ಪದವಿಪೂರ್ವ ಚಿತ್ರದ ಮುಹೂರ್ತ…

Published on

310 Views
Advertisement

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಮುಹೂರ್ತವು ಕಳೆದ ಸೋಮವಾರ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ.

Advertisement

ಖ್ಯಾತ ನಿರ್ದೇಶಕ ಹಾಗು ಸಾಹಿತಿ ಯೋಗರಾಜ್ ಭಟ್ ಕ್ಯಾಮೆರಾ ಚಾಲನೆ ಮಾಡಿದರೆ, ಚಿತ್ರದ ನಿರ್ಮಾಪಕರಾದ ರವಿ ಶಾಮನೂರು ಪುತ್ರಿ ಸೃಷ್ಠಿ ಶಾಮನೂರ್ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇನ್ನುಳಿದಂತೆ ಚಿತ್ರದ ನಾಯಕ ಪೃಥ್ವಿ ಶಾಮನೂರ್, ನಾಯಕಿಯರಾದ ಅಂಜಲಿ ಅನೀಶ್ ಹಾಗು ಯಶಾ ಶಿವಕುಮಾರ್ ಜೊತೆಗೆ ಚಿತ್ರದ ಪ್ರಮುಖ ಪಾತ್ರದಾರಿಗಳು ಹಾಗು ತಂತ್ರಜ್ಞರು ಉಪಸ್ಥಿತರಿದ್ದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಚೊಚ್ಚಲ ನಿರ್ದೇಶನಕ್ಕೆ ಶುಭ ಹಾರೈಸಿದರು.

Advertisement

ಚಿತ್ರದ ಮೊದಲ ಹಂತದ ಚಿತ್ರೀಕರಣ ಈಗಾಗಲೇ ಬೆಂಗಳೂರಿನಲ್ಲಿ ಶುರುವಾಗಿದ್ದು, ಚಿತ್ರದ ಎರಡನೇ ಹಂತದ ಚಿತ್ರೀಕರಣವನ್ನು ಮಲೆನಾಡಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸಲು ಚಿತ್ರತಂಡ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಚಿತ್ರಕ್ಕೆ ‘ಅರ್ಜುನ್ ಜನ್ಯ’ ಸಂಗೀತ, ‘ಮಧು ತುಂಬಕೆರೆ’ ಸಂಕಲನ ಹಾಗು ‘ಸಂತೋಷ್ ರೈ ಪತಾಜೆ’ ಅವರ ಛಾಯಾಗ್ರಹಣ ಇರಲಿದೆ.

Advertisement

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com