ಈವಾರ ತೆರೆಮೇಲೆ ಪಂಪನ ‌ಮರ್ಡರ್ ಮಿಸ್ಟ್ರಿ

Published on

602 Views
Advertisement

ಈವಾರ ತೆರೆಮೇಲೆ ಪಂಪನ ‌ಮರ್ಡರ್ ಮಿಸ್ಟ್ರಿ
ಕನ್ನಡದ ಆದಿಕವಿ ಪಂಪ, ಇದೇ ಹೆಸರಿನಲ್ಲಿ ಹಿರಿಯ ನಿರ್ದೇಶಕ ಎಸ್.ಮಹೇಂದರ್ ಅವರು ಚಲನಚಿತ್ರವೊಂದನ್ನು ನಿರ್ದೇಶಿಸಿದ್ದಾರೆ. ಈ ಶುಕ್ರವಾರ (16) ಪಂಪ‌ ಚಿತ್ರವು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಟೋಟಲ್ ಕನ್ನಡ ಮಳಿಗೆಯ ವಿ.ಲಕ್ಷ್ಮಿಕಂತ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಪ್ರೊಫೆಸರ್ ಪಂಪ ಅವರ ಹತ್ಯೆಯ ನಂತರ ನಡೆಯುವ ಕುತೂಹಲಕಾರಿ ಘಟನೆಗಳೇ ಈ ಚಿತ್ರದ ಕಥಾವಸ್ತು. ಒಂದು ಮರ್ಡರ್ ಮಿಸ್ಟ್ರಿ ಜೊತೆಗೆ, ಹದಿಹರೆಯದ ಪ್ರೀತಿ-ಪ್ರೇಮ, ಭಾಷೆಯ ಮೇಲಿನ ಅಭಿಮಾನ ಮತ್ತು ದುರಭಿಮಾನ, ಹೋರಾಟ ಈ ಎಲ್ಲವನ್ನೂ ಹಿತಮಿತವಾಗಿ ಒಳಗೊಂಡಿರುವ ಪಕ್ಕಾ ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಚಿತ್ರ ಇದಾಗಿದೆ.

Advertisement

ಪಂಪ ಚಿತ್ರಕ್ಕೆ ಸಾಹಿತ್ಯ ರಚಿಸಿ ಸಂಗೀತ ಸಂಯೋಜನೆಯನ್ನು ಹಂಸಲೇಖ ಅವರು ಮಾಡಿದ್ದಾರೆ. ಅಲ್ಲದೆ ರಮೇಶ್‌ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಪ್ರೊಫೆಸರ್ ಪಂಪನ ಪಾತ್ರದಲ್ಲಿ ರಂಗಭೂಮಿ ಕಲಾವಿದ ಕೀರ್ತಿಭಾನು ನಟಿಸಿದ್ದಾರೆ. ಚಾರ್ಲಿ ಖ್ಯಾತಿಯ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದು, ರಾಘವ್ ನಾಯಕ್, ಅರವಿಂದ್, ಆದಿತ್ಯ ಶೆಟ್ಟಿ, ಭಾವನಾ ಭಟ್, ರೇಣುಕಾ, ರವಿಭಟ್, ಶ್ರೀನಿವಾಸಪ್ರಭು ಮುಂತಾದ ಕಲಾವಿದರು ಚಿತ್ರದ ಉಳಿದ ತಾರಾಗಣದಲ್ಲಿದ್ದಾರೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 month ago

Assi: ZEE5 Film Tackles Stark Reality with Urgent Voice

Buzz 1 month ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 month ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com