ಮೊದಲ ಮಗುವಿನ ಸಂಭ್ರಮದಲ್ಲಿ ಪವನ್ ಒಡೆಯರ್

Published on

329 Views

ಇಂದು ನಿರ್ದೇಶಕ ಪವನ್ ಒಡೆಯರ್ ಗೆ ಜನ್ಮದಿನದ ಸಂಭ್ರಮ. ಈ ಸಂಭ್ರಮದ ಜೊತೆಗೆ ಮತ್ತೊಂದು ಸಂತಸದ ವಿಷಯವನ್ನು ಶೇರ್ ಮಾಡಿಕೊಂಡಿದ್ದಾರೆ ಪವನ್ ಒಡೆಯರ್. ಅವರ ಜನ್ಮದಿನದ ದಿನವೇ ಮೊದಲನೇಯ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ ಪವನ್. ಪುಟ್ಟ ಕಂದಮ್ಮನ ಆಗಮನದ ಸಂತಸವನ್ನು ಪವನ್ ಒಡೆಯರ್ ರವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಪೋಟೋ ವನ್ನು ತಮ್ಮ ಇನ್ ಸ್ಟಾ, ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿ, ನನ್ನ ಜನ್ನದಿನದಂದೇ ನನಗೆ ಅತ್ಯಂತ ‌ಅದ್ಭುತ ಉಡುಗೊರೆ ದೊರೆತಿದ್ದು, ಗಂಡು ಮಗುವಿನ ಜನನವಾಗಿದೆ. ಜೈ ಚಾಮುಂಡೇಶ್ವರಿ ಎಂದು‌ ಬರೆದುಕೊಂಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com