ಗಜರಾಮ’ ನಾದ ರಾಜವರ್ಧನ್ ಗೆ ನಾಯಕಿಯಾದ ಕೊಡಗಿನ ಕುವರಿ ತಪಸ್ವಿನಿ ಪೂಣಚ್ಚ

Published on

482 Views
Advertisement

‘ಮ್ಯಾಸಿವ್ ಸ್ಟಾರ್’ ರಾಜವರ್ಧನ್ ‘ಗಜರಾಮ’ನಾಗಿ ಅಬ್ಬರಿಸಲು ರೆಡಿಯಾಗಿದ್ದಾರೆ. ಬಿಚ್ಚುಗತ್ತಿಯ ಮೂಲಕ ಸ್ಯಾಂಡಲ್ ವುಡ್ ಸಿನಿರಸಿಕರ ಮನಗೆದ್ದಿರುವ ಹ್ಯಾಂಡ್ಸಮ್ ನಟ ಇವರು. ಯುವ ನಿರ್ದೇಶಕ ಸುನೀಲ್ ಕುಮಾರ್ ವಿ.ಎ ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್ ಗಜರಾಮನಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಡ್ತಿರೋ ‘ಗಜರಾಮ’ನಿಗೆ ಈಗ ನಾಯಕಿಯೂ ಸಿಕ್ಕಿದ್ದಾರೆ.
ರಾಜವರ್ಧನ್ ಜೊತೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದಲ್ಲಿ ನಾಯಕಿಯಾಗಿ ಗಮನ ಸೆಳೆದಿದ್ದ ತಪಸ್ವಿನಿ ಪೂಣಚ್ಚ ಈಗ ‘ಗಜರಾಮ’ನ ಜೋಡಿಯಾಗಿದ್ದಾರೆ. ನಾಯಕಿಯಾಗಿ ತಪಸ್ವಿನಿಗಿದು ಎರಡನೇ ಸಿನಿಮಾ.

Advertisement

ಹರಿಕಥೆ ಅಲ್ಲ ಗಿರಿಕಥೆ ಚಿತ್ರಕ್ಕೆ ನಾನು ಸೆಲೆಕ್ಟ್ ಆಗಿದ್ದೇ ಆಕಸ್ಮಿಕವಾಗಿ. ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅನ್ನೋದು ನನ್ನ ಉದ್ದೇಶ ಆಗಿರಲಿಲ್ಲ. ಆದ್ರೆ ಇನ್ ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ನೋಡಿ ಚಿತ್ರತಂಡ ನನ್ನ ಸಂಪರ್ಕ ಮಾಡಿದ್ರು. ಕಥೆ ಕೇಳಿ ಇಷ್ಟ ಆಯ್ತು ಒಪ್ಪಿಕೊಂಡೆ ಇದೀಗ ‘ಗಜರಾಮ’ ಸಿನಿಮಾ ಅವಕಾಶ ಸಿಕ್ಕಿದೆ. ಹರಿಕಥೆ ಅಲ್ಲ ಗಿರಿಕಥೆ ಚಿತ್ರದ ನಂತರ ಸಾಕಷ್ಟು ಸಿನಿಮಾ ಆಫರ್ ಬರ್ತಿದೆ ಆದರೆ ಗಜರಾಮ ಸಿನಿಮಾ ಪಾತ್ರ ಇಷ್ಟ ಆಯ್ತು. ಹಳ್ಳಿ ಹುಡುಗಿ ಪಾತ್ರದಲ್ಲಿ ಈ ಸಿನಿಮಾದಲ್ಲಿ ನಾನು ಕಾಣಿಸಿಕೊಳ್ಳುತ್ತಿದ್ದೇನೆ ಎನ್ನುತ್ತಾರೆ ನಟಿ ತಪಸ್ವಿನಿ ಪೂಣಚ್ಚ.

ನಿರ್ದೇಶನ ವಿಭಾಗದಲ್ಲಿ ದುಡಿದ ಅನುಭವ ಇರುವ
ಸುನೀಲ್ ಕುಮಾರ್ ‘ಗಜರಾಮ’ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಆಕ್ಷನ್ ಮಾಸ್ ಎಂಟಟೈನರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ್ಕಕೆ ಮನೋಮೂರ್ತಿ ಸಂಗೀತ, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ. ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಸಿನಿಮಾ ಸೆಟ್ಟೇರಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com