‘ಕಸ್ತೂರಿ ಮಹಲ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್
ನಿರ್ದೇಶಕ ದಿನೇಶ್ ಬಾಬು ಅವರ ನಿರ್ದೇಶನದ 50ನೇ ಚಿತ್ರ ಕಸ್ತೂರಿ ಮಹಲ್. ಇತ್ತೀಚಿಗೆ ಈ ಚಿತ್ರದ ಟೀಸರ್ ಅನ್ನು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಬಿಡುಗಡೆ ಮಾಡಿದರು. ಟೀಸರ್ ಬಿಡುಗಡೆಗೊಳಿಸಿದ ಪುನೀತ್ ರಾಜ್ ಕುಮಾರ್ ಟೀಸರ್ ಬಗ್ಗೆ ಮೆಚ್ಚುಗೆ ಮಾತನಾಡಿ, ‘ಶಿವಣ್ಣ ಮತ್ತು ನನ್ನ ಸಿನಿಮಾ ನಿರ್ದೇಶಿಸಿದ್ದ ದಿನೇಶ್ ಬಾಬುರವರು ಕನ್ನಡದಲ್ಲಿ ಉತ್ತಮ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ನಮ್ಮ ಕುಟುಂಬಕ್ಕೂ ಆತ್ಮೀಯರು, ಅವರ 50ನೇ ಸಿನಿಮಾ ಎಂದು ತಿಳಿದು ಸಂತೋಷವಾಯಿತು. ಅವರು 100 ಚಿತ್ರಗಳನ್ನು ನಿರ್ದೇಶನ ಮಾಡುವಂತಾಗಲಿ’ ಎಂದು ಶುಭ ಕೋರಿದರು.
‘ಕಸ್ತೂರಿ ಮಹಲ್’ ಫೆಬ್ರವರಿಯಲ್ಲಿ ತೆರೆಗೆ ಬರಲು ಸಜ್ಜಾಗಿದ್ದು, ಚಿತ್ರದಲ್ಲಿ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ರಂಗಾಯಣ ರಘು, ಶೃತಿ ಪ್ರಕಾಶ್, ಸ್ಕಂದ ಅಶೋಕ್, ನೀನಾಸಂ ಸತೀಶ್, ಅಕ್ಷರ್ ಮುಂತಾದವರ ತಾರಾಬಳಗವಿದೆ. ದಿನೇಶ್ ಬಾಬುರವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು, ನಿರ್ದೇಶನ ಮಾಡಿರುವ ‘ಕಸ್ತೂರಿ ಮಹಲ್’ ಚಿತ್ರ ಶ್ರೀಭವಾನಿ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್.ಸಿ ನಿರ್ಮಾಪಕರಾಗಿದ್ದು, ನವೀನ್ ಆರ್.ಸಿ. ಹಾಗೂ ಅಕ್ಷಯ್ ಸಿ.ಎಸ್ ಅವರು ಸಹ ನಿರ್ಮಾಪಕರಾಗಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನವಿದೆ.