flixOye
Buzz

ಡಬ್ಬಿಂಗ್ ಮುಗಿಸಿದ ಅರ್ಜುನ್ ಗೌಡ

ಅದ್ದೂರಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾದವರು ನಿರ್ಮಾಪಕ ರಾಮು. ರಾಮು ಫಿಲಂಸ್ ಲಾಂಛನದಲ್ಲಿ ರಾಮು ಅವರು ನಿರ್ಮಿಸುತ್ತಿರುವ ಮತ್ತೊಂದು ಅಪಾರ ವೆಚ್ಚದ, ಅದ್ದೂರಿ ಸಿನಿಮಾ ಅರ್ಜುನ್ ಗೌಡ. ಡೈನಾಮಿಕ್ ಪ್ರಿನ್ಸ್‌ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್ ಸಹ ಮುಕ್ತಾಯವಾಗಿದೆ.

ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ.
ಮಾಸ್ ಮಾದ ಅವರ ಸಾಹಸ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಆಕ್ಷನ್ ಸನ್ನಿವೇಶಗಳು. ನೋಡುಗರ ಮೈ ಜುಂ ಎನಿಸುತ್ತದೆ.


ಈಗಾಗಲೇ ಈ ಚಿತ್ರದ ಆಕ್ಷನ್ ಟ್ರೇಲರ್ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅನ್ಯ ಭಾಷೆಯ ವಿತರಕರು ಹಾಗೂ ನಿರ್ಮಾಪಕರಿಂದಲೂ ಆಕ್ಷನ್ ಟ್ರೇಲರ್ ಗೆ ಪ್ರಶಂಸೆ ಸಿಕ್ಕಿರುವುದು ಸಂತಸದ ಸಂಗತಿ. ಸದ್ಯದಲ್ಲೇ ಮೇಕಿಂಗ್ ಟ್ರೇಲರ್ ಬಿಡುಗಡೆಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.
ಕೊರೋನ ಹಾವಳಿ ಇಲ್ಲದೇ ಹೋಗಿದ್ದರೆ, ಈ ಚಿತ್ರ ಏಪ್ರಿಲ್ ನಲ್ಲಿ ಬಿಡುಗಡೆಯಾಗಬೇಕಿತ್ತು. ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಸಿನಿಮಾವನ್ನು ನಿಗದಿತ ಸಮಯ ನೋಡಿಕೊಂಡು ಬಿಡುಗಡೆ ಮಾಡುವ ಆಶಯ ನಿರ್ಮಾಪಕರದು.
ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

ಸಂಬಂಧಿತ · Related