“ಹಗ್ಗ” ಚಿತ್ರದ ಟೀಸರ್: ನಿಮ್ಮನ್ನು ರಹಸ್ಯ ಮತ್ತು ಕುತೂಹಲದ ಲೋಕಕ್ಕೆ ಕೊಂಡೊಯ್ಯುವ ಥ್ರಿಲ್ಲರ್ ಚಿತ್ರ!

Published on

639 Views
Advertisement

“ಹಗ್ಗ” ಅವಿನಾಶ್ ಎನ್ ನಿರ್ದೇಶನದ ಕನ್ನಡ ಚಲನಚಿತ್ರ, ಅನು ಪ್ರಭಾಕರ್ ಮುಖ್ಯ ಭೂಮಿಕೆಯಲ್ಲಿರುವ ಚಿತ್ರದಲ್ಲಿ ಹರ್ಷಿಕಾ ಪೂಣಚ್ಛ, ತಬಲಾ ನಾಣಿ, ಭವಾನಿ ಪ್ರಕಾಶ್, ಸಂಜು ಬಸಯ್ಯ ಸೇರಿದಂತೆ ಅನೇಕರು ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ರಾಜ್ ಭಾರದ್ವಾಜ್ ನಿರ್ಮಿಸಿದ್ದಾರೆ.

Advertisement

ಹಗ್ಗ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು, ಖ್ಯಾತ ನಿರ್ದೇಶಕ ಆರ್. ಚಂದ್ರು ಟೀಸರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ಮಾಪಕರಾದ ಕೆ. ಮಂಜು, ದಯಾಳ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಟೀಸರ್ ಬಿಡುಗಡೆ ನಂತರ ಮಾತನಾಡಿದ ನಿರ್ದೇಶಕ ಅವಿನಾಶ್, “ನಾನು ಮೂಲತಃ ಮೆಕಾನಿಕಲ್ ಎಂಜಿನಿಯರ್. ಸಿನಿಮಾ ನಿರ್ದೇಶನ ನನ್ನ ಕನಸು. ಆ ಕನಸು ಹಗ್ಗ ಚಿತ್ರದ ಮೂಲಕ ಈಡೇರಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ ಹಗ್ಗವೇ ನಮ್ಮ ಚಿತ್ರದ ನಾಯಕ. ಹಾರರ್ ಜಾನರ್‌ನ ಚಿತ್ರವಾದರೂ, ಚಿತ್ರದಲ್ಲಿ ಒಂದು ಪ್ರಮುಖ ಸಂದೇಶ ಸಹ ಇದೆ,” ಎಂದರು.

Advertisement

ನಿರ್ಮಾಪಕ ರಾಜ್ ಭಾರದ್ವಾಜ್, “ಚಿತ್ರಕ್ಕೆ ನಾನೇ ಕಥೆ‌ ಬರೆದು ನಿರ್ಮಾಣ ಮಾಡಿದ್ದೇನೆ.‌ ಅವಿನಾಶ್ ನಿರ್ದೇಶನ ಮಾಡಿದ್ದಾರೆ. ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ. ಈಗಾಗಲೇ ಮೋಷನ್ ಪೋಸ್ಟರ್ ಮೂಲಕ ಹಗ್ಗ ಜನರ ಮನಸ್ಸಿಗೆ ಹತ್ತಿರವಾಗಿದೆ. ಈಗ ಟೀಸರ್ ಬಿಡುಗಡೆಯಾಗಿದೆ. ಆಗಸ್ಟ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ,” ಎಂದು ಹೇಳಿದರು.

Advertisement

 

ಅವಿನಾಶ್ ಅವರು ಚಿತ್ರದ ಕುರಿತು ಹೇಳಿದಾಗ ನಟಿ ಅನು ಪ್ರಭಾಕರ್, “ನನ್ನ ಪಾತ್ರ ಬಹಳ ಇಷ್ಟವಾಯಿತು. ನನ್ನನ್ನು ಸೂಪರ್ ಹೀರೋ ಎಂದು ತೋರಿಸಿದ್ದಾರೆ. ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಹಾಗೂ ನಿರ್ಮಾಪಕರಿಗೆ ಧನ್ಯವಾದ,” ಎಂದು ಹೇಳಿದರು.

Advertisement

 

ಹರ್ಷಿಕಾ ಪೂಣಚ್ಛ, “ನನ್ನದು ಈ ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ. ಯಾವುದೋ ಒಂದು ವಿಷಯದ ಅನ್ವೇಷಣೆಗಾಗಿ ಹಳ್ಳಿಗೆ ಹೋಗುತ್ತೇನೆ. ಈ ಚಿತ್ರದಲ್ಲಿ ಜೀಪ್ ಕೂಡ ಡ್ರೈವ್ ಮಾಡಿದ್ದೇನೆ,” ಎಂದು ವಿವರಿಸಿದರು.

ನಾಯಕ ವೇಣು, “ನನ್ನ ಮೊದಲ ಚಿತ್ರ. ನಟನೆಗೆ ತಬಲ ನಾಣಿ ಅವರು ಬಹಳ ಸಹಾಯ ಮಾಡಿದರು. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ,” ಎಂದರು. ನಟ ತಬಲ ನಾಣಿ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಈ ಚಿತ್ರದ ಕಥೆ ರಾಜ್ ಭಾರದ್ವಾಜ್ ಬರೆದಿದ್ದು, ಚಿತ್ರಕಥೆ ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಅವರದು. ಮ್ಯಾಥ್ಯೂಸ್ ಮನು ಸಂಗೀತ ನಿರ್ದೇಶನ, ಸಿನಿಟೆಕ್ ಸೂರಿ ಛಾಯಾಗ್ರಹಣ ಹಾಗೂ ಎನ್ ಎಂ ವಿಶ್ವ ಅವರ ಸಂಕಲನವಿರುವ ಈ ಚಿತ್ರಕ್ಕೆ ಮನೋಹರ್ ಎಸ್ ಪಿ ಸಂಭಾಷಣೆ ಬರೆದಿದ್ದಾರೆ.

ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

More Buzz

Trailers 5 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 5 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com