ಐಪಿಎಲ್‍ಗಾಗಿ `ಲಂಬೋದರ’ ಚಿತ್ರತಂಡದಿಂದ ಪ್ರಮೋಷನ್ ವಿಡಿಯೋ

Published on

375 Views
Advertisement

ಐಪಿಎಲ್‍ಗಾಗಿ `ಲಂಬೋದರ’ ಚಿತ್ರತಂಡದಿಂದ ಪ್ರಮೋಷನ್ ವಿಡಿಯೋ

Advertisement

ಲೂಸ್‍ಮಾದ ಯೋಗಿ ನಾಯಕರಾಗಿ ನಟಿಸುತ್ತಿರುವ, ಕೆ.ಕೃಷ್ಣರಾಜ್ ನಿರ್ದೇಶನದ `ಲಂಬೋದರ’ ಚಿತ್ರತಂಡ ಐಪಿಎಲ್‍ಗಾಗಿ 30 ಸೆಕೆಂಡ್‍ನ ಪ್ರಮೋಷನ್ ವಿಡಿಯೋ ಬಿಡುಗಡೆ ಮಾಡಿದೆ. ಚಿತ್ರದ ನಾಯಕ ಯೋಗಿ, ಧರ್ಮಣ್ಣ ಮತ್ತು ಸಿದ್ದು ಈ ವೀಡಿಯೋದಲ್ಲಿ ಅಭಿನಯಿಸಿದ್ದಾರೆ. ಪೆನಿಸಿಯಾ ಸ್ಟೂಡಿಯೋದವರು ಈ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ರಘುಶಾಸ್ತ್ರಿ(ರನ್ ಆಂಟೋನಿ), ಪ್ರಶಾಂತ್(ರಂಗನ ಸ್ಟೈಲ್) ಹಾಗೂ ಕೋಲಾರ ಸೀನ(ಜಸ್ಟ್ ಮದ್ವೇಲಿ) ನಿರ್ದೇಶಕರ ಬಳಿ ಕೆಲಸ ಮಾಡಿ ಅನುಭವವಿರುವ ಕೃಷ್ಣರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೆಶಿಸುತ್ತಿರುವ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. `ಲಂಬೋದರ’ ಚಿತ್ರಕ್ಕೆ ಬಸವನಗುಡಿ ಬೆಂಗಳೂರು ಎಂಬ ಅಡಿಬರಹವಿದೆ.

Advertisement

ವೃಷಾಂಕ್ ಮೂವೀ ಮೇಕರ್ಸ್ ಲಾಂಛನದಲ್ಲಿ ವಿಶ್ವೇಶ್ವರ್ ಪಿ ಹಾಗೂ ರಾಘವೇಂದ್ರ ಭಟ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕಾರ್ತಿಕ್ ಶರ್ಮ ಸಂಗೀತ ನಿರ್ದೇಶನ, ಅರವಿಂದ್ ಎಸ್ ಕಶ್ಯಪ್ ಛಾಯಾಗ್ರಹಣ ಹಾಗೂ ಹರೀಶ್ ಗಿರಿಗೌಡ ಸಂಕಲನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ಜಯಂತ ಕಾಯ್ಕಿಣಿ ರಚಿಸಿದ್ದಾರೆ. ಕೆ.ಕೃಷ್ಣರಾಜ್ ಹಾಗೂ ಶೈಲೇಶ್ ರಾಜ್ ಸಂಭಾಷಣೆ ಬರೆದಿದ್ದಾರೆ.

ಲೂಸ್ ಮಾದ ಯೋಗಿ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಆಕಾಂಕ್ಷ. ಧರ್ಮಣ್ಣ, ಅಚ್ಯುತಕುಮಾರ್, ಅರುಣಾ ಬಾಲರಾಜ್, ಮಂಜುನಾಥ್ ಹೆಗ್ಡೆ, ಸಿದ್ದು ಮೂಲಿಮನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

Advertisement

More Buzz

Buzz 8 hours ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 1 day ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 days ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 days ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 5 days ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 5 days ago

Mr. X: Kannada Cinema’s New Enigma Unfolds!

Buzz 7 days ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 1 week ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 1 week ago

Assi: ZEE5 Film Tackles Stark Reality with Urgent Voice

Buzz 1 week ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 week ago

Ustaad Bhagat Singh Hits Netflix: Kannada Fans Rejoice!

Buzz 1 week ago

Do Deewane Seher Mein: Netflix Date Set!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com