ಸೈಕೋ ಥ್ರಿಲ್ಲರ್ “ಮೇನಿಯಾ” ಸಿನ್ಸ್ 1999 ಚಿತ್ರ ಜುಲೈನಲ್ಲಿ ಆರಂಭ.

Published on

711 Views
Advertisement

ನಾಯಕನ ಹುಟ್ಟುಹಬ್ಬಕ್ಕೆ ಶೀರ್ಷಿಕೆ ಅನಾವರಣ ಮಾಡಿದ ಚಿತ್ರತಂಡ.

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾವಸ್ತುವುಳ್ಳ ಚಿತ್ರಗಳು ಹೆಚ್ಚುತ್ತಿದೆ. ಪ್ರೇಕ್ಷಕರಿಗೆ ಅದನ್ನು ಮೆಚ್ಚಿಕೊಳ್ಳುತ್ತಿದ್ದಾರೆ.

Advertisement

ಸೈಕೋ ಥ್ರಿಲ್ಲರ್ ಕಥಾಹಂದರವಿರುವ “ಮೇನಿಯಾ” ಸಿನ್ಸ್ 1999 ಚಿತ್ರ ಕೂಡ ವಿಭಿನ್ನ ಕಥಾವಸ್ತು ಹೊಂದಿರುವ ಚಿತ್ರ. ಜುಲೈನಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಅದಕ್ಕೂ ಮುನ್ನ ನಾಯಕ ಸ್ವಸ್ತಿಕ್ ಆರ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡಿದೆ.

Advertisement

ಮಧು.ಎಸ್ ಈ ಚಿತ್ರದ ನಿರ್ದೇಶಕರು.
ಲೂಸ್ ಮಾದ ಯೋಗಿ ಅಭಿನಯದ “ಲಂಕೆ” ಸೇರಿದಂತೆ ಕನ್ನಡದ ಕೆಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಮಧು ಎಸ್, ದೊರೆ – ಭಗವಾನ್ ಅವರ ಇನ್ಸ್ಟಿಟ್ಯೂಟ್ ನಲ್ಲಿ ನಿರ್ದೇಶನ ತರಭೇತಿ ಸಹ ಪಡೆದಿದ್ದಾರೆ. ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ‌.
ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಮಧು ಅವರೆ ಬರೆಯುತ್ತಿದ್ದಾರೆ. ಇದು ಮಧು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ.

Advertisement

ಸ್ಚಸ್ತಿಕ್ ಆರ್ಯ ಈ ಚಿತ್ರದ ನಾಯಕ. “ರಂಗನಾಯಕಿ” ಧಾರಾವಾಹಿಯಲ್ಲಿ ನಟಿಸುರುವ ಇವರು, ವಿಜಯ್ ಪ್ರಕಾಶ್ ಹಾಡಿರುವ “ಜಿಯಾ” ಆಲ್ಬಂ ನಲ್ಲೂ ಅಭಿನಯಿಸಿದ್ದಾರೆ. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಈ ಆಲ್ಬಂ ಸಾಂಗ್ ಮೂಡಿ ಬಂದಿತ್ತು. ನೀನಾಸಂ ನಲ್ಲಿ ಅಭಿನಯಕ್ಕೆ ಬೇಕಾದ ತರಭೇತಿಯನ್ನು ಸ್ವಸ್ತಿಕ್ ಆರ್ಯ ಪಡೆಯುತ್ತಿದ್ದಾರೆ‌.

ಸ್ವಸ್ತಿಕ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಯಕ ಸ್ವಸ್ತಿಕ್ ಆರ್ಯ ಅವರು ಅರುಣ್ ಭಟ್ ಅವರೊಡಗೂಡಿ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ‌.

ಬೆಂಗಳೂರು- ಮಂಗಳೂರಿನಲ್ಲಿ ನಲವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ಎರಡು ಹಾಡುಗಳಿರುತ್ತದೆ. ವಿಶಾಲ್ ಕುಮಾರ್ ಗೌಡ ಛಾಯಾಗ್ರಾಹಕರಾಗಿ ಹಾಗೂ ಮಧು ತುಂಬಕೆರೆ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಾಯಕಿ ಸೇರಿದಂತೆ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com