ಶ್ಯಾನುಭೋಗರ ಮಗಳಾಗಿ ರಾಗಿಣಿ ಪ್ರಜ್ವಲ್.

Published on

415 Views

ಶ್ಯಾನುಭೋಗರ ಮಗಳಾಗಿ ರಾಗಿಣಿ ಪ್ರಜ್ವಲ್.
ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ “ಶ್ಯಾನುಭೋಗರ ಮಗಳು” ಚಿತ್ರ ಸ್ವತಂತ್ರ ಪೂರ್ವದ ಕಥೆ.
ಕನ್ನಡದಲ್ಲಿ ಅತೀ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಈ ಚಿತ್ರದ ನಿರ್ದೇಶಕರು. ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ.
ಭುವನ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

“ಶ್ಯಾನುಭೋಗರ ಮಗಳು” ಚಿತ್ರದ ಪ್ರಮುಖಪಾತ್ರದಲ್ಲಿ ರಾಗಿಣಿ ಪ್ರಜ್ವಲ್ ಅಭಿನಯಿಸುತ್ತಿದ್ದಾರೆ. ಮೇಘಶ್ರೀ, ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ‌ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರದಲ್ಲಿ ಟಿಪ್ಪಸುಲ್ತಾನ್ ಪ್ರಮುಖ ಪಾತ್ರವಾಗಿದ್ದು, ಆ ಪಾತ್ರಕ್ಕಾಗಿ ಆಯ್ಕೆ ಕಾರ್ಯ ನಡೆಯುತ್ತಿದೆ.
ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com