ರೆಬೆಲ್ ಸ್ಟಾರ್ ಜೀವನ ಚಿತ್ರಣ
ರೆಬೆಲ್ ಸ್ಟಾರ್ ಜೀವನ ಚಿತ್ರಣ
ಬೆಂಗಳೂರು: ಸ್ಯಾಂಡಲ್ ವುಡ್ ನ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ಹುಚ್ಚೇಗೌಡ ಅಮರನಾಥ್ (ಅಂಬರೀಶ್) ಅವರು ಭಾರತೀಯ ಚಿತ್ರರಂಗದ ನಟರು ಹಾಗೂ ರಾಜಕಾರಣಿಯು ಆಗಿದ್ದರು. ಇವರು ಜನಿಸಿದ್ದು 29 ಮೇ 1952 ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆ ಗ್ರಾಮದಲ್ಲಿ. ತಂದೆ ಹುಚ್ಚೇಗೌಡ ತಾಯಿ ಪದ್ಮಮ್ಮ. ಇವರ ಬಾಲ್ಯ ವಿದ್ಯಾಬ್ಯಾಸ ಮುಗಿಸಿದ್ದು ಮಂಡ್ಯದಲ್ಲಿ. ಪದವಿ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದಾರೆ. ಅಂಬರೀಶ್ 1991 ರಲ್ಲಿ ಕನ್ನಡದಖ್ಯಾತ ನಟಿ ಸುಮಲತಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದರು.
1972 ರಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಅಂಬರೀಶ್ ಅವರನ್ನು ಗುರುತಿಸಿ ಕನ್ನಡ ಚಿತ್ರ ರಂಗಕ್ಕೆ ಕರೆತಂದರು. ಇವರು ಮೊಟ್ಟ ಮೊದಲ ಚಿತ್ರವಾದ “ನಾಗರಾಹಾವು” ಸಿನಿಮಾದಲ್ಲಿ ಖಳ ನಾಯಕನ ಪಾತ್ರಕ್ಕೆ ಬಣ್ಣ ಹಚ್ವುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು.
ಪಡುವಾರಳ್ಳಿ ಪಾಂಡವರು, ಮಸಣದ ಹೂವು, ಶುಭಮಂಗಳ, ರಂಗನಾಯಕಿ ಹೀಗೆ ನೂರಾರು ಕನ್ನಡ ಚಿತ್ರಗಳಲ್ಲಿ ನಾಯಕನ ನಟಿಸಿ ಅಭಿಮಾನಿಗಳ ಪಾಲಿಗೆ ರೆಬೆಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಕನ್ನಡ ಚಿತ್ರ ರಂಗದ ರೆಬೆಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ಅಂಬರೀಶ್ ಅವರಿಗೆ ಮಂಡ್ಯದ ಗಂಡು, ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ ಹೀಗೆ ಹತ್ತು ಹಲವು ಬಿರುದುಗಳನ್ನು ಪಡೆದು ಕನ್ನಡ ಚಿತ್ರ ರಂಗದಲ್ಲಿ ಮಿಂಚಿದ್ದರು.
ಕನ್ನಡ ಸಿನಿಮಾರಂಗದಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಸಾಧನೆ ಮಾಡಿರುವ ಅಂಬರೀಶ್ ಅವರಿಗೆ 2013 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಅಂಬರೀಶ್ ಅವರ ರಾಜಕೀಯ ಕ್ಷೇತ್ರ
ಕನ್ನಡ ಚಿತ್ರರಂಗದಲ್ಲಿ ಹಲವು ಪಾತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ರೆಬೆಲ್ ಸ್ಟಾರ್ ಅಂಬರೀಶ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡು ರಾಜಕೀಯ ರಂಗವನ್ನು ಪ್ರವೇಶ ಮಾಡಿದರು. ಇವರು ಸಿನಿಮಾ ಕ್ಷೇತ್ರದಲ್ಲಿ ಗಳಿಸಿದ್ದ ಅಭಿಮಾನಿಗಳನ್ನು ರಾಜಕೀಯ ಕ್ಷೇತ್ರದಲ್ಲೂ ಸಹ ಅಭಿಮಾನಿಗಳನ್ನು ಹೊಂದಿದ್ದರು.
ಅಂಬರೀಶ್ ಅವರು ಸಂಸದರು, ಕೇಂದ್ರ , ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
೨೦೧೮ ವಿಧಾಸಭೆ ಚುನಾವಣಾಯಲ್ಲಿ ಪಕ್ಷ ಟಿಕೆಟ್ ನೀಡಿದರು ಕಣದಿಂದ ಹಿಂದೆ ಸರಿದಿದ್ದರು.
* 1998-99: 12ನೇ ಲೋಕಸಭಾ ಸದಸ್ಯರು.
* 1999-04: 13ನೇ ಲೋಕಸಭಾ ಸದಸ್ಯರು.
* 2004-09: 14ನೇ ಲೋಕಸಭಾ ಸದಸ್ಯರು.
* 2006-08: ಕರ್ನಾಟಕ ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರು.
* 2008 ರಲ್ಲಿ ಕಾವೇರಿ ನೀರಿನ ವಿವಾದದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
* 2012: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು.
* 2013 ರ ಚುನಾವಣೆಯಲ್ಲಿ ಗೆದ್ದು ಕರ್ನಾಟಕ ರಾಜ್ಯ ವಸತಿ ಸಚಿವರಾಗಿದ್ದರು.
ಇವರಿಗೆ ಲಭಿಸಿದ ಪ್ರಶಸ್ತಿಗಳು:
* ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ನಟ – 1982.
* ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ಸಹಾಯ ನಟ – ಮಸಣದ ಹೂವು(1985-86)
* ಫಿಲ್ಮ್ ಫೇರ್ ಪ್ರಶಸ್ತಿ – ಅತ್ಯುತ್ತಮ ನಟ – ಒಲವಿನ ಉಡುಗೊರೆ.
* ಎನ್.ಟಿ.ಆರ್ ನ್ಯಾಷನಲ್ ಪ್ರಶಸ್ತಿ – 2005.
* ಜೀವಮಾನ ಫಿಲ್ಮ್ ಫೇರ್ ಪ್ರಶಸ್ತಿ – 2009.
* ನಂದಿ ಪ್ರಶಸ್ತಿ( ಆಂದ್ರಸರ್ಕಾರ) – 2009.
* ಟಿವಿ9 ಸ್ಯಾಂಡಲ್ ವುಡ್ ಸ್ಟಾರ್ ಪ್ರಶಸ್ತಿ – 2012.
* ವಿಷ್ಣುವರ್ದನ್ ಪ್ರಶಸ್ತಿ (ಕರ್ನಾಟಕ ಸರ್ಕಾರ) – 2011.
* ಗೌರವ ಡಾಕ್ಟರೇಟ್ ಕರ್ನಾಟಕ ವಿವಿ) – 2013.
ಅಪಾರ ಸಾಧನೆ ಮಾಡಿ ಕನ್ನಡದ ಚಿತ್ರರಂಗದ ಹಿರಿಮೆಗೆ ಕಾರಣರಾದ ಅಂಬಿ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗ ನಾವಿಕನಿಲ್ಲದ ದೋಣಿಯಂತಾಗಿದೆ.