ರೆಬೆಲ್ ಸ್ಟಾರ್ ಜೀವನ ಚಿತ್ರಣ

Published on

2270 Views
Advertisement

ರೆಬೆಲ್ ಸ್ಟಾರ್ ಜೀವನ ಚಿತ್ರಣ

Advertisement

ಬೆಂಗಳೂರು: ಸ್ಯಾಂಡಲ್ ವುಡ್ ನ ರೆಬೆಲ್ ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ಹುಚ್ಚೇಗೌಡ ಅಮರನಾಥ್ (ಅಂಬರೀಶ್) ಅವರು ಭಾರತೀಯ ಚಿತ್ರರಂಗದ ನಟರು ಹಾಗೂ ರಾಜಕಾರಣಿಯು ಆಗಿದ್ದರು. ಇವರು ಜನಿಸಿದ್ದು 29 ಮೇ 1952 ಮಂಡ್ಯ ಜಿಲ್ಲೆಯ ದೊಡ್ದರೆಸಿಕೆರೆ ಗ್ರಾಮದಲ್ಲಿ. ತಂದೆ ಹುಚ್ಚೇಗೌಡ ತಾಯಿ ಪದ್ಮಮ್ಮ. ಇವರ ಬಾಲ್ಯ ವಿದ್ಯಾಬ್ಯಾಸ ಮುಗಿಸಿದ್ದು ಮಂಡ್ಯದಲ್ಲಿ.  ಪದವಿ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದುಕೊಂಡಿದ್ದಾರೆ. ಅಂಬರೀಶ್ 1991 ರಲ್ಲಿ ಕನ್ನಡದಖ್ಯಾತ ನಟಿ ಸುಮಲತಾ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿದ್ದರು.

1972 ರಲ್ಲಿ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರು ಅಂಬರೀಶ್ ಅವರನ್ನು ಗುರುತಿಸಿ ಕನ್ನಡ ಚಿತ್ರ ರಂಗಕ್ಕೆ ಕರೆತಂದರು. ಇವರು ಮೊಟ್ಟ ಮೊದಲ ಚಿತ್ರವಾದ “ನಾಗರಾಹಾವು” ಸಿನಿಮಾದಲ್ಲಿ ಖಳ ನಾಯಕನ ಪಾತ್ರಕ್ಕೆ ಬಣ್ಣ ಹಚ್ವುವ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು.

Advertisement

ಪಡುವಾರಳ್ಳಿ ಪಾಂಡವರು, ಮಸಣದ ಹೂವು, ಶುಭಮಂಗಳ, ರಂಗನಾಯಕಿ ಹೀಗೆ ನೂರಾರು ಕನ್ನಡ ಚಿತ್ರಗಳಲ್ಲಿ ನಾಯಕನ ನಟಿಸಿ ಅಭಿಮಾನಿಗಳ ಪಾಲಿಗೆ ರೆಬೆಲ್ ಸ್ಟಾರ್ ಆಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು. ಕನ್ನಡ ಚಿತ್ರ ರಂಗದ ರೆಬೆಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ಅಂಬರೀಶ್ ಅವರಿಗೆ ಮಂಡ್ಯದ ಗಂಡು, ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ ಹೀಗೆ ಹತ್ತು ಹಲವು ಬಿರುದುಗಳನ್ನು ಪಡೆದು ಕನ್ನಡ ಚಿತ್ರ ರಂಗದಲ್ಲಿ ಮಿಂಚಿದ್ದರು.

ಕನ್ನಡ ಸಿನಿಮಾರಂಗದಲ್ಲಿ ವಿವಿಧ ಪಾತ್ರಗಳಲ್ಲಿ ನಟಿಸಿ ಸಾಧನೆ ಮಾಡಿರುವ ಅಂಬರೀಶ್ ಅವರಿಗೆ 2013 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

Advertisement

ಅಂಬರೀಶ್ ಅವರ ರಾಜಕೀಯ ಕ್ಷೇತ್ರ
ಕನ್ನಡ ಚಿತ್ರರಂಗದಲ್ಲಿ ಹಲವು ಪಾತ್ರಗಳಲ್ಲಿ ನಟಿಸಿ ಜನಪ್ರಿಯತೆ ಗಳಿಸಿರುವ ರೆಬೆಲ್ ಸ್ಟಾರ್ ಅಂಬರೀಶ್ ಅವರು ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡು ರಾಜಕೀಯ ರಂಗವನ್ನು ಪ್ರವೇಶ ಮಾಡಿದರು. ಇವರು ಸಿನಿಮಾ ಕ್ಷೇತ್ರದಲ್ಲಿ ಗಳಿಸಿದ್ದ ಅಭಿಮಾನಿಗಳನ್ನು ರಾಜಕೀಯ ಕ್ಷೇತ್ರದಲ್ಲೂ ಸಹ ಅಭಿಮಾನಿಗಳನ್ನು ಹೊಂದಿದ್ದರು.
ಅಂಬರೀಶ್ ಅವರು ಸಂಸದರು, ಕೇಂದ್ರ , ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
೨೦೧೮ ವಿಧಾಸಭೆ ಚುನಾವಣಾಯಲ್ಲಿ ಪಕ್ಷ ಟಿಕೆಟ್ ನೀಡಿದರು ಕಣದಿಂದ ಹಿಂದೆ ಸರಿದಿದ್ದರು.

* 1998-99: 12ನೇ ಲೋಕಸಭಾ ಸದಸ್ಯರು.
* 1999-04: 13ನೇ ಲೋಕಸಭಾ ಸದಸ್ಯರು.
* 2004-09: 14ನೇ ಲೋಕಸಭಾ ಸದಸ್ಯರು.
* 2006-08: ಕರ್ನಾಟಕ ರಾಜ್ಯ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರು.
* 2008 ರಲ್ಲಿ ಕಾವೇರಿ ನೀರಿನ ವಿವಾದದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.
* 2012: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು.
* 2013 ರ ಚುನಾವಣೆಯಲ್ಲಿ ಗೆದ್ದು ಕರ್ನಾಟಕ ರಾಜ್ಯ ವಸತಿ ಸಚಿವರಾಗಿದ್ದರು.


ಇವರಿಗೆ ಲಭಿಸಿದ ಪ್ರಶಸ್ತಿಗಳು:

* ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ನಟ – 1982.
* ಕರ್ನಾಟಕ ರಾಜ್ಯ ಪ್ರಶಸ್ತಿ – ಅತ್ಯುತ್ತಮ ಸಹಾಯ ನಟ – ಮಸಣದ ಹೂವು(1985-86)
* ಫಿಲ್ಮ್ ಫೇರ್ ಪ್ರಶಸ್ತಿ – ಅತ್ಯುತ್ತಮ ನಟ – ಒಲವಿನ ಉಡುಗೊರೆ.
* ಎನ್.ಟಿ.ಆರ್ ನ್ಯಾಷನಲ್ ಪ್ರಶಸ್ತಿ – 2005.
* ಜೀವಮಾನ ಫಿಲ್ಮ್ ಫೇರ್ ಪ್ರಶಸ್ತಿ – 2009.
* ನಂದಿ ಪ್ರಶಸ್ತಿ( ಆಂದ್ರಸರ್ಕಾರ) – 2009.
* ಟಿವಿ9 ಸ್ಯಾಂಡಲ್ ವುಡ್ ಸ್ಟಾರ್ ಪ್ರಶಸ್ತಿ – 2012.
* ವಿಷ್ಣುವರ್ದನ್ ಪ್ರಶಸ್ತಿ (ಕರ್ನಾಟಕ ಸರ್ಕಾರ) – 2011.
* ಗೌರವ ಡಾಕ್ಟರೇಟ್ ಕರ್ನಾಟಕ ವಿವಿ) – 2013.
ಅಪಾರ ಸಾಧನೆ ಮಾಡಿ ಕನ್ನಡದ ಚಿತ್ರರಂಗದ ಹಿರಿಮೆಗೆ ಕಾರಣರಾದ ಅಂಬಿ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗ ನಾವಿಕನಿಲ್ಲದ ದೋಣಿಯಂತಾಗಿದೆ.

Advertisement

More Buzz

Buzz 7 days ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 1 week ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 1 week ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 1 week ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 1 week ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 1 week ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 1 week ago

Massa Massa Lyrical Video Drops: Ram Charan & Janhvi Ignite Screens for Peddi

Short Films 1 week ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 1 week ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 1 week ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 1 week ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 1 week ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com