ನಟ, ನಿರ್ದೇಶಕ ಕಾಶಿನಾಥ್ ವಿಧಿವಶ

Published on

672 Views

ನಟ, ನಿರ್ದೇಶಕ ಕಾಶಿನಾಥ್ ವಿಧಿವಶ

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ. ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಟ ಕಾಶಿನಾಥ್ ಕೊನೆಯುಸಿರೆಳೆದಿದ್ದಾರೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ. ಕಳೆದ ಎರಡು ದಿನಗಳಿಂದ ಕಾಶಿನಾಥ್ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ವಿಧಿವಶವಾಗಿದ್ದಾರೆ..

ಕಳೆದ ವರ್ಷ ಕಾಶಿನಾಥ್ ಚೌಕಾ ಸಿನಿಮಾದಲ್ಲಿ ಅಭಿನಯಿಸಿದ್ದರು. ಆ ಸಮಯದಲ್ಲೇ ಕಾಶಿನಾಥ್ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು. ಕಾಶಿನಾಥ್ ಅವರಿಗೆ ಇಬ್ಬರು ಮಕ್ಕಳಿದ್ದು ಮಗ ಅಭಿಮನ್ಯು ಸಿನಿಮಾರಂಗದಲ್ಲಿ ನಾಯಕನಾಗಿ ಗುರುತಿಸಿಕೊಂಡಿದ್ದರು. ಅನೇಕ ದಿನಗಳಿಂದ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿದ್ದರು ಕಾಶಿನಾಥ್.

ಕಾಶಿನಾಥ್ ಅಗಲಿಕೆ ಕನ್ನಡ ಸಿನಿಮಾರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟು ಮಾಡಿದೆ. ಸದ್ಯ ಚಿತ್ರರಂಗದ ಗಣ್ಯರು ಶಂಕರ ಆಸ್ಪತ್ರೆಯ ಬಳಿ ಆಗಮಿಸುತ್ತಿದ್ದು, ಸಂತಾಪವನ್ನು ಸೂಚಿಸಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com