ಗೆಳೆಯನ ಚೊಚ್ಚಲ ನಿರ್ದೇಶನದ ಚಿತ್ರದ ಶೀರ್ಷಿಕೆ ಅನಾವರಣಗೊಳಿಸುವ ಮೂಲಕ ಶುಭ ಹಾರೈಸಿದ ರೀಷಬ್ ಶೆಟ್ಟಿ

Published on

642 Views
Advertisement

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರೀಷಬ್ ಶೆಟ್ಟಿ ಸಾಥ್ ನೀಡಿದ್ದಾರೆ.

ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ ಸಿನಿಮಾ ಬಹುತೇಕ ಚಿತ್ರೀಕರಣ ಮುಗಿಸಿದ್ದು, ಚಿತ್ರದ ಟೈಟಲ್ ಬಿಡುಗಡೆಯ ವಿಚಾರದಲ್ಲಿ ಮೊದಲಿನಿಂದಲೂ ಕುತೂಹಲ ಹುಟ್ಟಿಸಿದ್ದ ಚಿತ್ರ ತಂಡ ಕೊನೆಗೂ ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದ ಉಡುಗೊರೆಯಾಗಿ ಪ್ಯಾನ್ ಇಂಡಿಯಾ ಮಟ್ಟದ ಆಕರ್ಷಕ ಟೈಟಲ್ ಬಿಡುಗಡೆ ಮಾಡಿ ಚಿತ್ರದ ಬಗ್ಗೆ ಇನ್ನಷ್ಟೂ ಕುತೂಹಲ ಮೂಡಿಸಿದೆ.

‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಟೈಟಲ್ನಲ್ಲಿಯೇ ಇದೊಂದು ದೊಡ್ಡ ಮಟ್ಟದ ಆಕ್ಷನ್ ಪ್ಯಾಕೇಜ್ ಸಿನಿಮಾ ಎನ್ನುವುದನ್ನು ರುಜು ಮಾಡಿದೆ. ಹಾಲಿವುಡ್ ಶೈಲಿಯ ಪೋಸ್ಟರ್ನಲ್ಲಿರುವ ನಾಯಕ ಕವೀಶ್ ಶೆಟ್ಟಿ ಖದರ್ರು ಅದಕ್ಕೆ ಪುಷ್ಟಿ ನೀಡಿದೆ.

Advertisement

ನುರಿತ ತಾಂತ್ರಿಕ ವರ್ಗ ಹಾಗೂ ಕನ್ನಡ, ಮರಾಠಿ ಮತ್ತು ಬಹುಭಾಷಾ ಕಲಾವಿದರನ್ನು ಹೊಂದಿರುವ ಲಂಡನ್ ಕೆಫೆಯ ಗುಟ್ಟು ಬಿಟ್ಟು ಕೊಡದ ನಿರ್ದೇಶಕ ಸಡಗರ ರಾಘವೇಂದ್ರ ಹೆಸರಿಗೆ ತಕ್ಕಂತೆ ಚಿತ್ರ ಪ್ರೇಕ್ಷಕರ ನಿರೀಕ್ಷೆಯನ್ನು ನಿರಾಸೆಗೊಳಿಸುವುದಿಲ್ಲ ಎನ್ನುತ್ತಾ ಚಿತ್ರದ ಟೈಟಲ್ ಬಿಡುಗಡೆಗೆ ಸಹಕರಿಸಿದ ಗೆಳೆಯ ರೀಷಬ್ ಶೆಟ್ಟಿಗೆ ಈ ಮೂಲಕ ಕೃತಜ್ಞತೆಯನ್ನು ಸೂಚಿಸಿದ್ದಾರೆ.

ಉಡುಪಿಯ ವಿಜಯ್ ಕುಮಾರ್ ಶೆಟ್ಟಿ ಹವರಾಲ್, ರಮೇಶ್ ಕೊಠಾರಿ ಮತ್ತು ಮರಾಠಿಯ ಹೆಸರಾಂತ ಡ್ರೀಮರ್ಸ್ ಪ್ರೊಡಕ್ಷನ್ ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು. ಚಿತ್ರದ ಬಗ್ಗೆ ಹೆಚ್ಚಿನ ನಿರೀಕ್ಷೆಯನ್ನು ಹೊಂದಿದ್ದಾರೆ.

Advertisement

ಕನ್ನಡದ ಮತ್ತೊಂದು ಚಿತ್ರ ಕರ್ನಾಟಕದ ಗಡಿ ಭಾಷೆಯನ್ನು ಮೀರಿ ಯಶಸ್ಸಿನ ಹಾದಿಯಲ್ಲಿ ಸಾಗಲಿ!

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 1 month ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 1 month ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com