‘ಕನ್ನಡಿಗ’ ಕ್ಕೆ‌ ಎಂಟ್ರಿ ಕೊಟ್ಟ ರಾಕ್ ಲೈನ್ ವೆಂಕಟೇಶ್

Published on

403 Views
Advertisement

ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ಬಿ ಎಂ ಗಿರಿರಾಜ್ ನಿರ್ದೇಶನದ ‘ಕನ್ನಡಿಗ’ ಸಿನಿಮಾದ ಚಿತ್ರೀಕರಣ ಭರ್ಜರಿ ಯಾಗಿ ನಡೆಯುತ್ತಿದ್ದು, ಈಗಾಗಲೇ 80%ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರವೂ 1858ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಆ ಕಾಲವನ್ನು ಮರುಸೃಷ್ಟಿ ಮಾಡಿ ಕಥೆಗೆ ತಕ್ಕಂತೆ ಸಿನಿಮಾವನ್ನು ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ರವರು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದರಂತೆ. ಈ ಚಿತ್ರದಲ್ಲಿ ನಾಯಕಿಯಾಗಿ ಪಾವನ ಕಾಣಿಸಿಕೊಂಡಿದ್ದಾರೆ.

ಸಂಕಮ್ಮಬ್ಬೆಯಾಗಿ ಸ್ವಾನಿ ಚಂದ್ರಶೇಖರ್ ‌ಕಾಣಿಸಿಕೊಂಡಿದ್ದು ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ಚಿತ್ರತಂಡದಿಂದ ಈಗ ಮತ್ತೊಂದು‌ ಸುದ್ದಿ ಹೊರ ಬಿದ್ದಿದ್ದು ಚಿತ್ರದಲ್ಲಿ ನಿರ್ಮಾಪಕ, ನಟ ರವಿಚಂದ್ರನ್ ರವರ ಸ್ನೇಹಿತ ರಾಕ್ ಲೈನ್ ವೆಂಕಟೇಶ್ ಕ್ರೇಜಿ‌ಸ್ಟಾರ್ ಜೊತೆ ನಟಿಸಲಿದ್ದಾರೆ. ಈ ಹಿಂದೆ ಇಬ್ಬರು ‘ರಸಿಕ’, ‘ಪ್ರಿತ್ಸೋದ್ ತಪ್ಪಾ’ ಚಿತ್ರದಲ್ಲಿ ನಟಿಸಿದ್ದರು. ಈಗ ಮತ್ತೆ ಒಂದಾಗಿದ್ದಾರೆ. ಇನ್ನು ಚಿತ್ರದ ಪ್ರಮುಖ ಪಾತ್ರದಲ್ಲಿ‌ ನಿರ್ದೇಶಕ ಗುರುದತ್ ನಟಿಸುತ್ತಿದ್ದಾರೆ. ಇತ್ತೀಚಿಗೆ ‘ಕನ್ನಡಿಗ’ ಕ್ಕೆ ಜೇಮಿ ಆಲ್ಟರ್ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದರು ಅವರು ಕನ್ನಡದ ಮೊದಲ ನಿಘಂಟು ಸಂಪಾದಿಸಿದ ರೆವರೆಂಡ್ ಫರ್ನಾಂಡೀಸ್ ಕಿಟ್ಟೆಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರವಿಚಂದ್ರನ್ ‌ಜೊತೆ ಜೇಮಿ ಆಲ್ಟರ್ ಇರುವ ಪೋಟೋ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com