ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್…!!!

Published on

452 Views

ಶ್ರೀಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಚಿತ್ರನಟ ಯಶ್ ಭಾನುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ, ಶ್ರೀದೇವಿಯ ದರ್ಶನ ಪಡೆದರು.

ನಟ ಯಶ್ ಮತ್ತು ಚಿತ್ರತಂಡ ಬೆಂಗಳೂರಿನಿಂದ ಹೊರಟು ಮೊದಲು ಕೊಲ್ಲೂರು ದೇವಸ್ಥಾನ, ನಂತರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಟ ಯಶ್ ಹೆಲಿಕಾಫ್ಟರ್ ನಿಂದ ಕೊಲ್ಲೂರಿಗೆ ಬಂದಿಳಿದು. ನೇರವಾಗಿ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಮೂಕಾಂಬಿಕೆಗೆ ಯಶ್ ವಿಶೇಷ ಪೂಜೆ ಸಲ್ಲಿಸಿ ತೆರಳಿದ್ದಾರೆ.

ಬಳಿಕ ದೇವಳದ ಕಾರ್ಯನಿರ್ವಾಹಣಾಧಿಕಾರಿ ಎಚ್.ಹಾಲಪ್ಪ, ಅವರು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ದೇವಳದ ಸಹಾಯ ಕಾರ್ಯನಿರ್ವಾಹಣಾಧಿಕಾರಿ ಕೃಷ್ಣಮೂರ್ತಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಅಭಿಲಾಷ್ ವಿ.ಪಿ. ರಾಜೇಶ್ ಕಾರಂತ್, ನರಸಿಂಹ ಹಳಗೇರಿ, ಇದ್ದರು. ಧರ್ಮಸ್ಥಳಕ್ಕೆ ಭೇಟಿಕೊಟ್ಟ ಯಶ್ ನಂತರ ಡಾ.ವೀರೇಂದ್ರ ಹೆಗ್ಗಡೆ ಯವರ ಜೊತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com