ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ.

Published on

476 Views
Advertisement

ಬೆಂಗಳೂರು( ನ. 13) ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ಇನ್ನಿಲ್ಲ. ಕನ್ನಡ ಓದುಗರು,ವೀಕ್ಷಕರು ಈ ಸುದ್ದಿ ಅರಗಿಸಿಕೊಳ್ಳಲೇಬೇಕಾಗಿದೆ.

ಹೃದಯಾಘಾತದಿಂದ ಹಿರಿಯ ಪತ್ರಕರ್ತ ರವಿ ಬೆಳಗೆರೆ ನಿಧನರಾಗಿದ್ದಾರೆ. ಗುರುವಾರ ತಡರಾತ್ರಿ ಹಾಯ್ ಬೆಂಗಳೂರ್ ಕಚೇರಿಯಲ್ಲೇ ಅವರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

Advertisement

ರಾತ್ರಿ 12 ಗಂಟೆ ಹಾಯ್ ಬೆಂಗಳೂರು ಆಫೀಸ್ ನಲ್ಲಿ ಹೃದಯಾಘಾತವಾಗಿದೆ. ನಂತರ ಅಪೋಲೋ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದೆ.

ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನನಿಸಿದ ಬೆಳಗೆರೆ ಪತ್ರಿಕಾರಂಗದ ಹಲವು ವಿಭಾಗದಲ್ಲಿ ಕೆಲಸ ಮಾಡಿದವರು
ಅಪರಾಧ ಜಗತ್ತಿನ ಬಗ್ಗೆ ಅವರು ಬರೆದ ಪುಸ್ತಕಗಳು ಲೆಕ್ಕವೇ ಇಲ್ಲ.

Advertisement

ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ರವಿ ಬೆಳಗೆರೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶುಕ್ರವಾರ ಬೆಳ್ಳಗ್ಗೆ 9 ,ಗಂಟೆಯಿಂದ ರವಿ ಬೆಳಗೆರೆ ಅಂತಿಮ‌ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸರ್ಪ ಸಂಬಂಧ, ಭೀಮಾತೀರದ ಹಂತಕರು, ನೀ ಹಿಂಗ ನೋಡಬೇಡ ನನ್ನ,ಡಿ ಕಂಪನಿ, ರಾಜ್ ಲೀಲಾ ವಿನೋದ ಸೇರಿದಂತೆ ಹಲವು ಕೃತಿಗಳು ಬೆಳಗೆರೆ ಕೊಡುಗೆ.

Advertisement

ಶಿಕ್ಷಣವನ್ನ ಬಳ್ಳಾರಿಯಲ್ಲಿ ಮುಗಿಸಿದ್ದ ರವಿಬೆಳಗೆರೆ ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಲಂಕೇಶ್ ಪತ್ರಿಕೆಯಲ್ಲಿ ಕೆಲಸ ಆರಂಭ ಮಾಡುತ್ತಾರೆ

1995 ರಲ್ಲಿ ಹಾಯ್ ಬೆಂಗಳೂರು ವಾರ ಪತ್ರಿಕೆ ಪ್ರಾರಂಭ ಮಾಡುತ್ತಾರೆ. ಕ್ರೈಂ ಡೈರಿ ಕಾರ್ಯಕಮದ ನಿರೂಪಕರಾಗಿದ್ದ ರವಿ ಬೆಳಗೆರೆ ದೊಡ್ಡ ಹೆಸರು ಸಂಪಾದಿಸಿದ್ದರು.

ಯುವ ಮನಸುಗಳಿಗಾಗಿ ಅವರು ಆರಂಭಿಸಿದ್ದ ಓ ಮನಸೆ ಪಾಕ್ಷಿಕ ಸಹ ಜನಮನ್ನಣೆಗೆ ಪಾತ್ರವಾಗಿತ್ತು.

Advertisement

ಕರ್ಮವೀರ, ಕಸ್ತೂರಿ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ರವಿಬೆಳಗೆರೆ ಭಾವನ ಆಡಿಯೋ , ಭಾವನ ಪ್ರಕಾಶನ , ಪ್ರರ್ಥಾನ ಶಾಲೆಯ ಸಂಸ್ಥಾಪಕರು .

ಕಿರುತೆರೆಯಲ್ಲಿಯೂ ಬೆಳಗೆರೆ ಕಾಣಿಸಿಕೊಂಡಿದ್ದು ಅವರ ನಿರೂಪಣೆ ಮೆಚ್ಚುಗೆಗೆ ಪಾತ್ರವಾಗಿತ್ತು. ಬಿಗ್ ಬಾಸ್ ನ ಕೊನೆಯ ಸೀಸನ್ ನಲ್ಲಿಯೂ ಬೆಳಗೆರೆ ಭಾಗವಹಿಸಿದ್ದರು..

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com