“Shakeela – ಶಕೀಲಾ ತೆರೆಮೇಲೆ 5 ಭಾಷೆಗಳಲ್ಲಿ ಬರಲಿದ್ದಾಳೆ ನಿಜ ಬದುಕಿನ, ಸತ್ಯ ಘಟನೆಗಳ ಆಧಾರಿತ ಕಥೆ”

Published on

440 Views
Advertisement

ಶಕೀಲಾ ಎಂಬ ಮಾದಕ ನಟಿಯ ಜೀವನ ಆಧಾರಿತ ಕಥೆ ಚಿತ್ರದ ಮೂಲಕ ಬೆಳ್ಳಿತೆರೆಯ ಮೇಲೆ ಹಿಂದಿ, ಕನ್ನಡ ತಮಿಳು ಸೇರಿದಂತೆ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು.

ಇದು ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನ ಈ ಚಿತ್ರ ಇದೇ ತಿಂಗಳು ಬಿಡುಗಡೆಯಾಗಲು ಸಿದ್ದವಾಗಿದೆ. ಚಿತ್ರದ ಫಸ್ಟ್‍ಲುಕ್ ಹಾಗೂ ಟ್ರೈಲರ್ ಬಿಡುಗಡೆ ಬೆಂಗಳೂರಿನ ಸ್ಟಾರ್ ಹೋಟೆಲ್‍ವೊಂದರಲ್ಲಿ ನೆರವೇರಿತು.

Advertisement

ಹಿಂದಿ ಭಾಷೆಯಲ್ಲಿ ಶುರುವಾಗಿದ್ದ ಈ ಚಿತ್ರ ಈಗ ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ರಿಲೀಸಾಗುತ್ತಿದೆ. ಹೆಚ್ಚಾಗಿ ಗ್ಲಾಮರಸ್ ಪಾತ್ರಗಳಲ್ಲೇ ಅಭಿನಯಿಸುವ ಮೂಲಕ ಗುರ್ತಿಸಿಕೊಂಡ ಮಲಯಾಳಂನ ಮಾದಕ ನಟಿ, ಶಕೀಲಾ ಹೆಸರು ಕೇಳಿರದ ಪಡ್ಡೆ ಹುಡುಗರೇ ಇಲ್ಲವೆನ್ನಬಹುದು. 1990 ಹಾಗೂ 2000ದ ದಶಕದಲ್ಲಿ ಯಶಸ್ಸಿನ ಉತ್ತುಂಗದಲ್ಲಿದ್ದ ಶಕೀಲಾ ಅತ್ಯಂತ ಜನಪ್ರಿಯ ನಟಿಯಾಗಿದ್ದರು. ಒಂದೇ ವರ್ಷದಲ್ಲಿ ಅವರು ನಟಿಸಿದ ಹತ್ತಾರು ಸಿನಿಮಾಗಳು ಬಿಡುಗಡೆ ಆಗುತ್ತಿದ್ದವು. ಆರಂಭದಲ್ಲಿ ಈಕೆಯ ಬದುಕು ಅಷ್ಟು ಸುಲಭವಾಗಿರಲಿಲ್ಲ. ಅವರು ಕೂಡ ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿz್ದÁರೆ. ಅವರ ಹಿಂದಿನ ಬದುಕೇ ಈಗ ಸಿನಿಮಾ ಆಗಿ ತೆರೆಗೆ ಬರುತ್ತಿದೆ. ಶಕೀಲಾರ ಪಾತ್ರವನ್ನು ಬಾಲಿವುಡ್ ನಟಿ ರಿಚಾ ಛಡ್ಡಾ ನಿಭಾಯಿಸಿz್ದÁರೆ.

ಚಿತ್ರದ ಕುರಿತಂತೆ ಮಾತನಾಡಿದ ಶಕೀಲಾ ನಾನು ಬದುಕಿನಲ್ಲಿ ಎದುರಿಸಿದ ಕಷ್ಟ, ಸುಖದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸುತ್ತಿದ್ದಾರೆ. ಆರಂಭದಲ್ಲಿ ನಿರ್ದೇಶಕರು ನನ್ನ ಬಳಿ ಚರ್ಚಿಸಿ ಒಂದಷ್ಟು ಬದಲಾವಣೆ ಕೂಡ ಮಾಡಿಕೊಂಡಿದ್ದಾರೆ. ಸಿನಿಮಾದಲ್ಲಿ ಎಷ್ಟು ಕಾಲ್ಪನಿಕ, ಎಷ್ಟು ವಾಸ್ತವ ಇದೆ ಎಂಬುದನ್ನು ಪ್ರೇP್ಷÀಕರು ಚಿತ್ರಮಂದಿರದಲ್ಲಿಯೇ ನೋಡಲಿ. ಈ ಸಂದಭರ್Àದಲ್ಲಿ ನನ್ನ ಫ್ಯಾಮಿಲಿಯೇ ನನ್ನ ಜೊತೆಗಿಲ್ಲ. ನಾನು ಎಲ್ಲಿz್ದÉೀನೆ, ಏನು ಮಾಡುತ್ತಿz್ದÉೀನೆ ಎಂಬುದೆಲ್ಲವೂ ಅವರಿಗೆ ಗೊತ್ತಿದೆ. ಆದರೆ ನನ್ನ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ನಾನು ನನ್ನ ಫ್ಯಾಮಿಲಿಗಾಗಿಯೇ ಇಷ್ಟೆಲ್ಲ ಮಾಡಿದೆ. ಆದರೆ ನನ್ನವರೇ ನನಗೆ ಮೋಸ, ದ್ರೋಹ ಮಾಡಿದರು. ನೀಲಿಚಿತ್ರಗಳನ್ನು ಮಾಡಿದ ಬಗ್ಗೆ ನನಗೆ ವಿಷಾದವಿಲ್ಲ. ಅದರ ಬಗ್ಗೆ ನನಗೆ ಖುಷಿ ಇದೆ. ನಾನು ದೇವರ ಮಗಳು. ಇಂದು ನಾನು ನಿಮ್ಮ ಜೊತೆ ಮಾತನಾಡುತ್ತಿz್ದÉೀನೆ, ನನ್ನ ಬಗ್ಗೆ ಸಿನಿಮಾ ಆಗುತ್ತಿದೆ ಎಂದರೆ ಅದಕ್ಕೆ ಆ ಚಿತ್ರಗಳೇ ಕಾರಣ. ನಾನೊಬ್ಬ ಪೆÇೀಷಕನಟಿ ಮಾತ್ರ ಆಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಆದರೆ ಇಂಥ ಕುಟುಂಬಕ್ಕಾಗಿ ಮಾಡಿದೆನಲ್ಲ ಎಂಬ ಬೇಸರವಿದೆ ಎಂದು ಶಕೀಲಾ ತನ್ನ ಕುಟುಂಬದ ಬಗ್ಗೆ ತುಂಬ ಬೇಸರದಿಂದ ಹೇಳಿಕೊಂಡರು.

ಇಂದ್ರಜಿತ್ ಅವರ ಜೊತೆ ನಾನು ಲವ್‍ಯೂ ಆಲಿಯಾ ಸಿನಿಮಾ ಮಾಡುತ್ತಿz್ದÁಗ ನಿರ್ದೇಶಕಿಯೊಬ್ಬರು ನನ್ನನ್ನು ಭೇಟಿಮಾಡಿ ನನ್ನ ಆತ್ಮಚರಿತ್ರೆಯನ್ನು ಸಿನಿಮಾ ಮಾಡಬೇಕೆಂದಿದ್ದೇನೆ ಎಂದರು. ಆ ವಿಷಯ ಇಂದ್ರಜಿತ್‍ರಿಗೂ ತಿಳಿಯಿತು. ಎರಡು ದಿನ ಸಮಯ ತೆಗೆದುಕೊಂಡು ಇಂದ್ರಜಿತ್ ಕೂಡ ನನ್ನ ಆತ್ಮಚರಿತ್ರೆಯನ್ನು ಓದಿದರು. ತಾವೇ ಈ ಚಿತ್ರ ಮಾಡುವುದಾಗಿ ತಿಳಿಸಿದರು. ನನಗೂ ಖುಷಿ ಆಯಿತು. ನನ್ನ ಕಥೆಯನ್ನು ಅವರು ಚೆನ್ನಾಗಿ ತೆರೆಮೇಲೆ ತರುತ್ತಾರೆ ಎಂಬ ನಂಬಿಕೆಯಿತ್ತು. ನಾನು ಈ ಬಯೋಪಿಕ್ ಪುಸ್ತಕ ಬರೆದು 10 ವರ್ಷಗಳಾಗಿವೆ. ಆನಂತರ ಏನೆಲ್ಲ ನಡೆಯಿತು ಎಂಬುದನ್ನು ಈ ಸಿನಿಮಾದಲ್ಲಿ ವಿವರಿಸಿz್ದÉೀವೆ. ನನ್ನ ಹುಟ್ಟಿನಿಂದ ಹಿಡಿದು 42ನೇ ವಯಸ್ಸಿನವರೆಗೆ ಅನೇಕ ವಿಷಯಗಳ ಬಗ್ಗೆ ಈ ಚಿತ್ರ ಮಾತನಾಡುತ್ತದೆ ಎಂದೂ ಸಹ ಶಕೀಲಾ ಹೇಳಿಕೊಂಡರು.

Advertisement

ನಂತರ ಮಾತನಾಡಿದ ಇಂದ್ರಜಿತ್ ಲಂಕೇಶ್ ಒಂದರ್ಥದಲ್ಲಿ ನಿಜವಾದ ಪ್ಯಾನ್ ಇಂಡಿಯಾ ಸಿನಿಮಾವಿದು, ಕನ್ನಡದ ಸುಚೇಂದ್ರ ಪ್ರಸಾದ್, ಸಂಗೀತ ನಿರ್ದೇಶಕ ವೀರಸಮರ್ಥ್ ಸೇರಿದಂತೆ ಎಲ್ಲಾ ಭಾಷೆಯ ತಂತ್ರಜ್ಞರು ಈ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಐದೂ ಭಾಷೆ ಸೇರಿ ಎರಡರಿಂದ ಎರಡೂವರೆ ಸಾವಿರ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ ಎಂದು ಹೇಳಿದರು.

ಸಾಮಿ ನಾನ್ವಾನಿ ಹಾಗೂ ಶರವಣಪ್ರಸಾದ್ ಈ ಚಿತ್ರದ ನಿರ್ಮಾಪಕರು. ಅಲ್ಲದೆ ನಟ, ನಿರ್ದೇಶಕ ಸಂದೀಪ್ ಮಲಾನಿ ಚಿತ್ರದ ಸಹನಿರ್ಮಾಪಕರಾಗಿದ್ದಾರೆ. ಸಂತೋಷ್ ರೈ ಪಾತಾಜೆ ಕ್ಯಾಮೆರಾವರ್ಕ್ ನಿಭಾಯಿಸಿದ್ದಾರೆ. ರೀಚಾ ಛಡ್ಡಾ, ಪಂಕಜ್‍ತ್ರಿಪಾಠಿ, ರಾಜೀವ್ ಪಿಳ್ಳೈ, ಸಮರ್ಜಿತ್ ಲಂಕೇಶ್, ಸಂದೀಪ್ ಮಲಾನಿ ಹಾಗೂ ಎಸ್ಟರ್ ನರೋನಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸಮಾರಂಭದಲ್ಲಿ ನಿರ್ಮಾಪಕ ಸೂರಪ್ಪಬಾಬು, ಜಾಕ್‍ಮಂಜು, ವಿತರಕ ಭಾಷಾ ಸೇರಿದಂತೆ ಚಿತ್ರರಂಗದ ಇತರೆ ಗಣ್ಯರು ಭಾಗವಹಿಸಿದ್ದರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com