ಇದೇ 13 ಕ್ಕೆ ಶಾನ್ವಿ ಶ್ರೀವಾತ್ಸವ್ ಅಭಿನಯದ ಕಸ್ತೂರಿ ಮಹಲ್ ಟ್ರೈಲರ್ ಬಿಡುಗಡೆ

Published on

401 Views
Advertisement

ಹಿರಿಯ ನಿರ್ದೇಶಕ ದಿನೇಶ್‌ ಬಾಬು ಅವರ 50ನೇ ಸಿನಿಮಾ ‘ಕಸ್ತೂರಿ ಮಹಲ್’ ಇದೇ ಶುಕ್ರವಾರ ಟ್ರೈಲರ್ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ ನಟಿಸಿದ್ದು, ಅವರ ಲುಕ್ ಗಮನಸೆಳೆಯುತ್ತಿದ್ದು, ಟ್ರೈಲರ್ ನಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Advertisement

ಕಸ್ತೂರಿ ಮಹಲ್’ ಚಿತ್ರಕ್ಕೆ ಆರಂಭದಲ್ಲಿ ರಚಿತಾ ರಾಮ್ ನಾಯಕಿ ಎಂದು ಹೇಳಲಾಗಿತ್ತು. ಗ್ರ್ಯಾಂಡ್ ಆಗಿಯೇ ಸಿನಿಮಾವನ್ನು ಲಾಂಚ್ ಮಾಡಲಾಗಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಶೂಟಿಂಗ್ ಶುರುವಾಗಲಿದೆ ಎನ್ನುವಾಗಲೇ ಅವರು ಸಿನಿಮಾದಿಂದ ಹೊರನಡೆದರು. ಅದಕ್ಕೆ ಡೇಟ್ಸ್‌ ಹೊಂದಾಣಿಕೆ ಆಗುತ್ತಿಲ್ಲ ಎಂಬ ಕಾರಣ ನೀಡಲಾಗಿತ್ತು. ಆನಂತರ ಅವರ ಜಾಗಕ್ಕೆ ನಟಿ ಶಾನ್ವಿ ಅವರ ಆಗಮನ ಆಗಿದೆ. ಅಷ್ಟೇ ಅಲ್ಲ, ಸಿನಿಮಾ ಪೂರ್ತಿ ಚಿತ್ರೀಕರಣ ಮಾಡಿದೆ ಚಿತ್ರತಂಡ. ಇದೊಂದು ಹಾರರ್‌ ಮಾದರಿಯ ಸೈಕಾಲಾಜಿಕಲ್‌ ಥ್ರಿಲ್ಲರ್‌ ಸಿನಿಮಾವಾಗಿದೆ. ಮೊದಲ ಸಿನಿಮಾ ‘ಚಂದ್ರಲೇಖಾ’ ನಂತರ, ಶಾನ್ವಿ ಮತ್ತೊಮ್ಮೆ ಹಾರರ್ ಸಿನಿಮಾ ಒಪ್ಪಿಕೊಂಡಿದ್ದಾರೆ.

Advertisement

ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ದಿನೇಶ್ ಬಾಬು. ರವೀಶ್‌ ನಿರ್ಮಾಣದ ಹೊಣೆ ಹೊತ್ತುಕೊಂಡಿದ್ದರೆ, ಅಕ್ಷಯ್‌-ನವೀನ್‌ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ. ಛಾಯಾಗ್ರಹಣವನ್ನು ಪಿಕೆಎಚ್ ದಾಸ್ ಮಾಡಿದ್ದು, ಗೌತಮ್ ಶ್ರೀವತ್ಸ ಸಂಗೀತ ಸಂಯೋಜನೆ ಮಾಡಿದ್ದಾರೆ. ಶಾನ್ವಿ ಜೊತೆಗೆ ಶ್ರುತಿ ಪ್ರಕಾಶ್, ಸ್ಕಂದ ಅಶೋಕ್, ರಂಗಾಯಣ ರಘು ಮುಂತಾದವರು ನಟಿಸಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com