ಜನವರಿ 5ಕ್ಕೆ ಹಾಡುಗಳು ಫೆಬ್ರವರಿ 07 ಸಿನಿಮಾ ತೆರೆಗೆ

Published on

251 Views

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸಾರ್ವಭೌಮ
ಚಿತ್ರದ ಟೀಸರ್ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ
ಸಂಖ್ಯೆಯಲ್ಲಿ ವೀಕ್ಷಣೆ ಯಾಗುತ್ತಿದೆ.‌ ರಾಕ್ ಲೈನ್ ವೆಂಕಟೇಶ್ ನಿರ್ಮಾಣ
ಮಾಡಿರುವ ಈ ಚಿತ್ರವನ್ನು ಪವನ್ ಒಡೆಯರ್ ಅವರು ನಿರ್ದೇಶನ ಮಾಡಿದ್ದಾರೆ.
ಪುನೀತ್ ಹಾಗೂ ಪವನ್ ಒಡೆಯರ್ ಕಾಂಬಿನೇಷನ್ ನಲ್ಲಿ ಬರುತ್ತಿರುವ
2ನೇ ಚಿತ್ರ ಇದಾಗಿದ್ದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.


ಡಿ.ಇಮಾನ್ ಅವರು ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು ಈ
ಚಿತ್ರದ ಹಾಡುಗಳು ಜನವರಿ 05ಕ್ಕೆ ಬಿಡುಗಡೆಯಾಗಲಿವೆ‌. ಚಿತ್ರವು ಫೆಬ್ರವರಿ
07ಕ್ಕೆ ತೆರೆಗೆ ಬರಲಿದೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಮ್ಮ ಟ್ವಿಟ್ಟರ್
ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com