51ನೇ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಚ್ಚ ಸುದೀಪ್ ಚಾಲನೆ

Published on

549 Views
Advertisement

ಗೋವಾದಲ್ಲಿ ಇಂದಿನಿಂದ ನಡೆಯಲಿರುವ ‌ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು,
ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ‌ ಸುದೀಪ್ ಈ‌ ಪ್ರತಿಷ್ಠಿತ ಚಿತ್ರೋತ್ಸವಕ್ಕೆ‌ ಚಾಲನೆ‌ ನೀಡಲಿದ್ದಾರೆ. ನವೆಂಬರ್ ನಲ್ಲಿ ನಡೆಸಲಾಗುತ್ತಿದ್ದ ಚಿತ್ರೋತ್ಸವ ಈ ಬಾರಿ ಕೋವಿಡ್‌ ನಿಂದಾಗಿ ಮುಂದೂಡಿಕೆಯಾಗಿದ್ದು ಈಗ ಜನವರಿ 16 ರಿಂದ 24 ರವರೆಗೆ ಚಿತ್ರೋತ್ಸವ‌‌ ನಡೆಯಲಿದೆ. ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವನ್ನು ಉದ್ಘಾಟಿಸುವ ಗೌರವ ಇದೇ ಮೊದಲು‌ ಕನ್ನಡದ‌ ನಟನಿಗೆ ಸಿಕ್ಕಿದೆ.

1980 ರಲ್ಲಿ ಬೆಂಗಳೂರಿನಲ್ಲಿ ನಡೆದ ಚಿತ್ರೋತ್ಸವವನ್ನು ಬೆಂಗಳೂರಿನಲ್ಲಿ‌ ನೆಲೆಸಿದ್ದ ಬಾಲಿವುಡ್ ನಟಿ ದೇವಿಕಾರಾಣಿ ಉದ್ಘಾಟಿಸಿದರು. 1992 ರಲ್ಲಿ ಡಾ.ರಾಜ್ ಕುಮಾರ್ ರವರು‌ ಉದ್ಘಾಟನೆ ಮಾಡ್ಬೇಕಿತ್ತು ಅದರೆ ಆ ಸಮಯದಲ್ಲಿ ಕಾವೇರಿ ವಿವಾದ ಭುಗಿಲೆದ್ದ ಕಾರಣ ಚಿತ್ರೋತ್ಸವದಲ್ಲಿ ಭಾಗವಹಿಸಿರಲಿಲ್ಲ. ಇಂದು ಪಣಜಿಯ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕಿಚ್ಚ ಸುದೀಪ್ ಚಿತ್ರೋತ್ಸವಕ್ಕೆ ಚಾಲನೆ‌ ನೀಡಲಿದ್ದಾರೆ. ಕೇಂದ್ರ ಮಾಹಿತಿ ಮತ್ತು‌ ಪ್ರಸಾರ ಖಾತೆಯ‌ ಸಚಿವ ಪ್ರಕಾಶ್ ಜಾವಡೇಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವಿಶ್ವದ 60 ದೇಶಗಳು ಈ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡಿದ್ದು, ಪಣಜಿಯ ನಾಲ್ಕು ಆಡಿಟೋರಿಯಂ ನಲ್ಲಿ ಪ್ರಶಸ್ತಿ ವಿಜೇತ ಚಲನಚಿತ್ರಗಳ‌ ಪ್ರದರ್ಶನ ನಡೆಯಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com