ಜನವರಿಯಲ್ಲಿ ‘ಶುಗರ್ ಫ್ಯಾಕ್ಟರಿ’ ಆರಂಭ..

Published on

371 Views
Advertisement

ಲವ್ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಅಭಿನಯದ ನೂತನ ಚಿತ್ರಕ್ಕೆ ‘ಶುಗರ್ ಫ್ಯಾಕ್ಟರಿ’ ಎಂಬ ಹೆಸರಿಡಲಾಗಿದೆ. ಕೃಷ್ಣ ಅವರಿಗೆ ನಾಯಕಿಯಾಗಿ ಕರಾವಳಿ ಬೆಡಗಿ ಸೋನಾಲ್ ಮಾಂಟೆರೊ ಅಭಿನಯಿಸುತ್ತಿದ್ದಾರೆ.

ಫನ್ ರೊಮ್ಯಾಂಟಿಕ್ ಕಥಾಹಂದರ ಹೊಂದಿರುವ ಈ ಚಿತ್ರ ಚಿತ್ರವನ್ನು ದೀಪಕ್ ಅರಸ್ ನಿರ್ದೇಶಿಸುತ್ತಿದ್ದಾರೆ.
ಈ ಹಿಂದೆ ‘ಮನಸಾಲಜಿ’ ಎಂಬ ಚಿತ್ರ ನಿರ್ದೇಶಿಸಿದ್ದ ದೀಪಕ್ ಅರಸ್ ಅವರಿಗೆ ಇದು ಎರಡನೇಯ ನಿರ್ದೇಶನದ ಚಿತ್ರ.
ದೀಪಕ್ ಅರಸ್ ಕನ್ನಡದ ಖ್ಯಾತ ನಟಿ ಅಮೂಲ್ಯ ಅವರ ಸಹೋದರ.

Advertisement

ದೀಪಕ್ ಅರಸ್ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ಬಹದ್ದೂರ್ ಚೇತನ್ ಕುಮಾರ್ ಬರೆಯುತ್ತಿದ್ದಾರೆ.ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್ ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌

Advertisement

ಜನವರಿಯಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ನಂತರ ಹಂತಹಂತವಾಗಿ ಗೋವಾ, ಮೈಸೂರು ಹಾಗೂ ಅಬ್ರಾಡ್ ನಲ್ಲಿ ಚಿತ್ರೀಕರಣ ಸಾಗಲಿದೆ.

Advertisement

ಆರು ಹಾಡುಗಳಿದ್ದು, ಕಬೀರ್ ರಫಿ ಸಂಗೀತ ನೀಡುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ತಮ್ಮ ಕ್ಯಾಮೆರಾದಲ್ಲಿ ಶುಗರ್ ಫ್ಯಾಕ್ಟರಿ ಯನ್ನು ಸುಂದರವಾಗಿ ಸೆರೆಹಿಡಿಯಲಿದ್ದಾರೆ.‌
ಈ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಮೂರು ನಾಯಕಿಯರಿದ್ದು, ಸೋನಾಲ್ ಮಾಂಟೆರೊ ಮೊದಲ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇನ್ನಿಬ್ಬರು ನಾಯಕಿಯರು ಸೇರಿದಂತೆ ಉಳಿದ ತಾರಾಬಳಗದ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com