ಶುಗರ್‍ಲೆಸ್ ಚಿತ್ರೀಕರಣ ಮುಕ್ತಾಯ…

Published on

342 Views
Advertisement

ಡಾಟರ್ ಆಫ್ ಪಾರ್ವತಮ್ಮ ಖ್ಯಾತಿಯ ನಿರ್ಮಾಪಕ ಶಶಿಧರ ಕೆ.ಎಂ. ಅವರು ಇದೇ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಚಿತ್ರ ಶುಗರ್‍ಲೆಸ್. ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ಶಶಿಧರ್ ಕೆ.ಎಂ. ಅವರೇ ಮಾಡಿದ್ದು, ಲಾಕ್‍ಡೌನ್ ಕಾರಣದಿಂದ ತಡವಾದರೂ ಈಗ ಚಿತ್ರದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದ್ದಾರೆ. ಅವರ ಜೊತೆ ಸಹಾಯಕ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿ ಕೃಷ್ಣೇಗೌಡ ಸಾತ್ ನೀಡಿದ್ದಾರೆ. ಅಲ್ಲದೆ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ರಘುಸಿಂಗಂ ಹಾಗೂ ದಿವ್ಯ ಶಶಿಧರ್ ಕಾರ್ಯನಿರ್ವಹಿಸಿದ್ದಾರೆ.

ದಿಶಾ ಎಂಟರ್‍ಟೈನ್‍ಮೆಂಟ್ ಹಾಗೂ ಜಾಜಿ ಪ್ರೊಡಕ್ಷನ್ಸ್ ಸಹಕಾರದೊಂದಿಗೆ ನಿರ್ಮಾಣವಾಗಿರುವ ಶುಗರ್‍ಲೆಸ್ ಚಿತ್ರದ ಛಾಯಾಗ್ರಾಹಕರಾಗಿ ಲವಿತ್, ಸಂಗೀತ ನಿರ್ದೇಶಕರಾಗಿ ಅನೂಪ್ ಸೀಳಿನ್ ಕೆಲಸ ಮಾಡಿದ್ದು, ಡಾ|| ವಿ. ನಾಗೇಂದ್ರಪ್ರಸಾದ್ ಅವರ ಸಾಹಿತ್ಯ, ಗುರು ಕಶ್ಯಪ್ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಈ ಚಿತ್ರಕ್ಕೆ ಸಂಕಲನ ರವಿಚಂದ್ರನ್, ನೃತ್ಯ ಸಂಯೋಜನೆ ಮುರಳಿ ಮಾಸ್ಟರ್, ಕಲೆ ವಿನ್ಯಾಸ ರೂಪೇಂದ್ರ ಆಚಾರ್ ಅವರದಾಗಿದೆ.

Advertisement

ಈ ಚಿತ್ರಕ್ಕೆ ಕರ್ನಾಟಕದಾದ್ಯಂತ ನಲವತೈದು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಇದೀಗ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗಿದೆ. ಇದು ತುಂಬಾ ಹ್ಯೂಮರಸ್ ಆದ ನಿರೂಪಣೆ ಇರುವಂಥ ಚಿತ್ರ. ಈ ಕಥೆಯಲ್ಲಿ ಹಾಸ್ಯವೇ ಪ್ರಧಾನವಾಗಿರುತ್ತದೆ. ನಾನು ಸ್ಕ್ರಿಪ್ಟ್ ಮಾಡುವಾಗ ನನ್ನ ಸಿನಿಮಾದ ಹೀರೋ ಪಾತ್ರ ಹೇಗೆಲ್ಲ ಇರಬೇಕು ಎಂದುಕೊಂಡಿದ್ದೆ, ಅದೇ ರೀತಿಯ ಹುಡುಗನಾಗಿ ನಟ ಪೃಥ್ವಿ ಅಂಬರ್ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ನಮ್ಮ ಚಿತ್ರದ ಟೀಸರ್, ಟ್ರೈಲರ್ ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಹಾಗೂ ನಿರ್ದೇಶಕ ಶಶಿಧರ ಕೆ.ಎಂ. ಅವರು ತಿಳಿಸಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com