ಮತ್ತೆ ಬಣ್ಣ ಹಚ್ಚುತ್ತಿದ್ದಾರೆ ಸುಪ್ರೀಂ ಹೀರೋ ಶಶಿಕುಮಾರ್
ಬಹಳ ದಿನಗಳ ನಂತರ ನಟ ಶಶಿಕುಮಾರ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. 2019 ರಲ್ಲಿ ‘ಕುರುಕ್ಷೇತ್ರ’ ಸಿನಿಮಾದಲ್ಲಿ ಅಭಿನಯಿಸಿದ ಶಶಿಕುಮಾರ್ ಈಗ ಶಂಕರ್ ಕೋನಮಾನಹಳ್ಳಿ ನಿರ್ದೇಶನದ ‘ಶಂಭೋ ಶಿವ ಶಂಕರ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು ನಿರ್ಮಿಸುತ್ತಿರುವ ‘ಶಂಭೋ ಶಿವ ಶಂಕರ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಬರೆದಿದ್ದಾರೆ. ಚಿತ್ರಕ್ಕೆ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಅವರೇ ಸಂಗೀತ ನೀಡುತ್ತಿದ್ದಾರೆ. ನಟರಾಜ್ ಮುದ್ದಾಲ ಛಾಯಾಗ್ರಹಣ ವಿದ್ದು, ಅಭಯ್ ಪುನೀತ್, ರೋಹಿತ್, ರಕ್ಷಕ್ ಮೂರು ನಾಯಕರುಗಳಿದ್ದು, ನಾಯಕಿಯಾಗಿ ಸೋನಾಲ್ ಮಾಂಥೆರೋ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್ 9 ರಿಂದ ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ.