ಮಾರ್ಚ್ 3 ರಿಂದ ಆರಂಭವಾಗಲಿದೆ 13 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ
ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟದಲ್ಲಿ ಬೆಳಗಿಸುವ ಉದ್ದೇಶದಿಂದ ಆಯೋಜಿಸಲಾಗುವ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಮಾರ್ಚ್ 3 ರಿಂದ ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಮಿತಿ (ಬಿಐಎಫ್ಎಫ್) ಆಯೋಜಿಸುವ ಮಹಾನ್ ಚಿತ್ರೋತ್ಸವಕ್ಕೆ ರೂಪುರೇಷೆಗಳನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರು ಲೋಗೋ ಬಿಡುಗಡೆ ಮಾಡುವ ಮೂಲಕ, ಸಭೆಯಲ್ಲಿ ಹಾಜರಿದ್ದು ರೂಪುರೇಷೆಗಳನ್ನು ಸೂಚಿಸಿದ್ದಾರೆ.
ಬರೋಬ್ಬರಿ 10 ದಿನಗಳ ಕಾಲ ನಡೆಯಲಿರುವ ಚಿತ್ರೋತ್ಸವದಲ್ಲಿ ಅಂತರಾಷ್ಟ್ರೀಯ ಮಟ್ಟದ ಚಿತ್ರಗಳನ್ನು ಸೆಳೆಯುವ ಉದ್ದೇಶವನ್ನು ಹೊಂದಿದ್ದೇವೆ ಎನ್ನುವ ವಿಶ್ವಾಸವನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ.
ಬಿಐಎಫ್ಎಫ್ ಈಗಾಗಲೇ ಅಂತರಾಷ್ಟ್ರೀಯ ಚಲನಚಿತ್ರ ನಿರ್ಮಾಪಕರ ಒಕ್ಕೂಟ ಫೆಡರೇಷನ್ ನ ಮಾನ್ಯತೆಯನ್ನು ಹೊಂದಿದೆ. ಹಾಗಾಗಿ ಈ ಚಿತ್ರೋತ್ಸವವು ವಿಶ್ವಮಟ್ಟದಲ್ಲಿ ಸದ್ದು ಮಾಡಲಿದೆ. ವಿಶ್ವದ ಕೇವಲ 45 ಜಾಗತಿಕ ಚಿತ್ರೋತ್ಸವಗಳಲ್ಲಿ ಬಿಐಎಫ್ಎಫ್ ಒಂದಾಗಿರುವುದು ಕರ್ನಾಟಕಕ್ಕಷ್ಟೇ ಅಲ್ಲದೆ, ದೇಶಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದ ಸಿಎಂ, ಕನ್ನದ ಚಿತ್ರರಂಗವು ಜಗತ್ತಿನಾದ್ಯಂತ ವಿಶೇಷ ಮೌಲ್ಯವನ್ನು ಹೊಂದಿವೆ. ಕನ್ನಡದ ಅತ್ಯುತ್ತಮ ಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುವುದು. ಈ ಚಿತ್ರೋತ್ಸವವು ಒಂದು ಮಾದರಿ ಚಿತ್ರೋತ್ಸವವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಂಕ್ರಾಂತಿ ಪೋಸ್ಟರ್ ಬಿಡುಗಡೆ
ಸಮಾಜಕ್ಕೆ ಸಂದೇಶ ನೀಡುವಂತಹ ಚಲನಚಿತ್ರಗಳಿಗೆ ಚಿತ್ರೋತ್ಸವದಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಸಭೆಯಲ್ಲಿ ತೋಟಗಾರಿಕಾ ಸಚಿವರೂ, ಚಲನಚಿತ್ರ ನಿರ್ಮಾಪಕರೂ ಆಗಿರುವ ಶ್ರೀ ಮುನಿರತ್ನ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿರುವ ಸುನಿಲ್ ಪುರಾಣಿಕ್ ಮುಂತಾದ ಗಣ್ಯರು ಉಪಸ್ಥಿತರಿದ್ಧರು.