ಪುಸ್ತಕವಾದ ಸಂಚಾರಿ ವಿಜಯ್ ಅವರ ಜೀವನ ಕಥನ | ಅವರ ಹುಟ್ಟುಹಬ್ಬದ ದಿನ ಬಿಡುಗಡೆ.

Published on

742 Views
Advertisement

ನಮ್ಮ ನಿಮ್ಮೆಲ್ಲರ ನೆಚ್ಚಿನ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರ ಹುಟ್ಟು ಹಬ್ಬವನ್ನು ಜುಲೈ 17 ಕ್ಕೆ ಅರ್ಥಪೂರ್ಣವಾಗಿ ಆಚರಿಸಲು ಹೊರಟಿದ್ದಾರೆ ಇಲ್ಲೊಂದು ತಂಡ. ವಿಜಯ್ ಅವರು ಸಿನಿಮಾದಷ್ಟೇ ಪುಸ್ತಕವನ್ನು ಪ್ರೀತಿಸುತ್ತಿದ್ದರು. ಆ ಪುಸ್ತಕಗಳ ಕುರಿತು ಇತರರ ಜತೆ ಹಂಚಿಕೊಳ್ಳುತ್ತಿದ್ದರು. ಹಾಗಾಗಿ ಅವರ ಕುರಿತಾದ ಜೀವನ ಕಥನವನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ, ಅದನ್ನು ಈ ಬಾರಿಯ ಹುಟ್ಟು ಹಬ್ಬಕ್ಕೆ ಉಡುಗೊರೆಯಾಗಿ ನೀಡುತ್ತಿದ್ದಾರೆ ಶರಣ ಹುಲ್ಲೂರು.

ಇದೊಂದು ಬಯೋಗ್ರಫಿ ಮಾದರಿಯಲ್ಲೇ ರೂಪಗೊಂಡ ಪುಸ್ತಕ. ವಿಜಯ್ ಅವರ ಬಾಲ್ಯ ಮತ್ತು ಜೀವನದ ಬಗ್ಗೆ ವಿಜಯ್ ಸಹೋದರರು ಮತ್ತು ಕುಟುಂಬ ಮಾತನಾಡಿದ್ದರೆ, ಅವರ ಬಾಲ್ಯದ ಗೆಳೆಯರು, ಶಾಲಾ ಗೆಳೆಯರು, ಜತೆಗಿದ್ದವರು ನೆನೆಪುಗಳನ್ನು ಹಂಚಿಕೊಂಡಿದ್ದಾರೆ. ರಂಗಭೂಮಿ, ಕಿರುತೆರೆ, ಸಿನಿಮಾ, ಸಂಗೀತ ಹೀಗೆ ವಿಜಯ್ ಅವರು ಸಾಗಿ ಬಂದ ನಾನಾ ಕ್ಷೇತ್ರಗಳ ಬಗ್ಗೆ ಅವರ ಒಡನಾಡಿಗಳು, ಸಿನಿಮಾ ನಿರ್ದೇಶಕರು, ರಂಗಭೂಮಿ ಗೆಳೆಯರು, ಸಂಗೀತದ ಸಹಪಾಠಿಗಳು ನೆನಪಿಸಿಕೊಂಡಿದ್ದಾರೆ. ವಿಜಯ್ ಅವರ ಮೊದಲುಗಳಿಗೆ ಸಾಕ್ಷಿಯಾದವರು ಕೂಡ ಈ ಪುಸ್ತಕದ ಜತೆಗಿರುವುದು ಮತ್ತೊಂದು ವಿಶೇಷ.

ಅಂಬರೀಶ್, ಸುದೀಪ್ ಅವರ ಬಯೋಗ್ರಫಿ ಬರೆದಿರುವ ರಾಜ್ಯ ಪ್ರಶಸ್ತಿ ವಿಜೇತ ಬರಹಗಾರ ಮತ್ತು ಪತ್ರಕರ್ತ ಡಾ.ಶರಣು ಹುಲ್ಲೂರು ಅವರ ಸಂಪಾದಕತ್ವದಲ್ಲಿ ಈ ಕೃತಿ ಬರುತ್ತಿದೆ. ಖ್ಯಾತ ಲೇಖಕರಾದ ವಸುಧೇಂದ್ರ, ಜೋಗಿ, ಸಂಧ್ಯಾರಾಣಿ, ನಿರ್ದೇಶಕರಾದ ಬಿ.ಎಸ್. ಲಿಂಗದೇವರು, ಮಂಸೋರೆ, ಅರವಿಂದ್ ಕುಪ್ಳಿಕರ್, ಎಂ.ಎಸ್ ರಮೇಶ್, ರಂಗ ನಿರ್ದೇಶಕಿ ಮಂಗಳಾ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ರಾಷ್ಟ್ರ ಪ್ರಶಸ್ತಿ ವಿಜೇತ ಲೇಖಕ ಕೆ. ಪುಟ್ಟಸ್ವಾಮಿ ಹೀಗೆ ಸಿನಿಮಾ ರಂಗದ ಹಾಗೂ ವಿಜಯ್ ಅವರನ್ನು ಬಲ್ಲ 32. ಕ್ಕೂ ಹೆಚ್ಚು ಲೇಖಕರು ಬರೆದ ಬರಹಗಳು ಇದರಲ್ಲಿವೆ. ಜಿ.ಎನ್. ಮೋಹನ್ ಈ ಪುಸ್ತಕಕ್ಕೆ ಹಿನ್ನುಡಿ ಬರೆದಿದ್ದಾರೆ. ಬೆಂಗಳೂರಿನ ಕಾಯಕ ಪ್ರಕಾಶನದಿಂದ ಈ ಕೃತಿ ಹೊರಬರುತ್ತಿದೆ. ಜು.17 ರಂದು ಪುಸ್ತಕ ಬಿಡುಗಡೆ ಆಗಲಿದೆ.

Advertisement

More Buzz

Buzz 2 weeks ago

Balaramana Dinagalu: Gangster Love Story Teaser Drops!

Buzz 3 weeks ago

ಅಣ್ಣ ಫ್ರಂ ಮೆಕ್ಸಿಕೋ ಟೀಸರ್: ಡಾಲಿ ಧನಂಜಯ್‌ರಿಂದ ವಿಶ್ವವಿಖ್ಯಾತ ಅಸ್ತ್ರ!

Buzz 3 weeks ago

KD ಟ್ರೇಲರ್ ಬಿಡುಗಡೆ: ಧ್ರುವ ಸರ್ಜಾ, ಸಂಜಯ್ ದತ್ ರಬ್ಬರ್ smashing!

Buzz 4 weeks ago

ರುದ್ರತಾಂಡವ: ‘Ruthless’ ಕನ್ನಡ ಕಿರುಚಿತ್ರ | ಧನು ಹರ್ಷರ ವೀರೋಚಿತ ನಟನೆ!

Buzz 4 weeks ago

ದೇವ್ ದಾಸ್ ನಾ ಲೀಲಾ: ತುಳು ಚಿತ್ರದ ಟ್ರೇಲರ್ ಬಿಡುಗಡೆ!

Buzz 4 weeks ago

ಮಿಸ್ಟರ್ ಎಕ್ಸ್: 90ರ ದಶಕದ ಮರೆಯಲಾಗದ ಥ್ರಿಲ್ಲರ್!

Buzz 4 weeks ago

Mr. X: Kannada Cinema’s New Enigma Unfolds!

Buzz 4 weeks ago

ಅಚ್ಯುತ ಅವತಾರಂ: ಮೂರನೇ ಲುಕ್ ಬಿಡುಗಡೆ, 2026ರ വിഷುಗೆ ಸ್ಯಾಂಡಲ್‌ವುಡ್‌ಗೆ ಲಗ್ಗೆ!

Buzz 4 weeks ago

ಸೀತಾರಾಮ್’ ಎರಡನೇ ಪ್ರಕರಣ: ಥ್ರಿಲ್ಲರ್ ಸಿನೆಮಾ ಈಗ OTTಯಲ್ಲಿ!

Buzz 4 weeks ago

Assi: ZEE5 Film Tackles Stark Reality with Urgent Voice

Buzz 4 weeks ago

ಕೆಂಡದ ಸೆರಗು: ನಾಳೆ ತೆರೆಗೆ, ಮನಸ್ಸಲ್ಲಿ ಉಳಿಯುವ ಕಥೆಯಿದು!

Buzz 4 weeks ago

Ustaad Bhagat Singh Hits Netflix: Kannada Fans Rejoice!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com