ರಾಧಿಕ ಕುಮಾರಸ್ವಾಮಿ ನಿರ್ಮಾಣದ `ಭೈರಾದೇವಿ’ ಚಿತ್ರ ಆರಂಭ

Published on

684 Views
Advertisement

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕ ಕುಮಾರಸ್ವಾಮಿ ಅವರು ನಿರ್ಮಿಸುತ್ತಿರುವ `ಭೈರಾದೇವಿ` ಚಿತ್ರದ ಮುಹೂರ್ತ ಸಮಾರಂಭ ಫೆಬ್ರವರಿ 12ರಂದು ಗವಿಪುರಂನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು.

ಈ ಹಿಂದೆ ಆರ್ ಎಕ್ಸ್ ಸೂರಿ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀಜೈ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಮೇಶ್ ಆರವಿಂದ್, ರಾಧಿಕ ಕುಮಾರಸ್ವಾಮಿ, ಅನು ಪ್ರಭಾಕರ್, ಸ್ಕಂದ ಅಶೋಕ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ರಮೇಶ್ ಅರವಿಂದ್, ರಾಧಿಕ ಕುಮಾರಸ್ವಾಮಿ ಹಾಗೂ ಸ್ಕಂದ ಅಶೋಕ್ ಅವರು ಅಭಿನಯಿಸಿದ ಚಿತ್ರದ ಮೊದಲ ಸನ್ನಿವೇಶಕ್ಕೆ ಶಮಿಕ ಕುಮಾರಸ್ವಾಮಿ ಆರಂಭಫಲಕ ತೋರಿದರು.
ನಿರ್ದೇಶಕ ಶ್ರೀಜೈ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಸಹ ಮಾಡಿದ್ದಾರೆ. ಸೂರಜ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಹೆಚ್.ಸಿ.ವೇಣುಗೋಪಾಲ್ ಛಾಯಾಗ್ರಹಣ, ರವಿಚಂದ್ರನ್ ಸಿ ಸಂಕಲನ, ರವಿ ನಾಯರ್ ಕಲಾ ನಿರ್ದೇಶನ, ಮೋಹನ್ ನೃತ್ಯ ನಿರ್ದೇಶನ ಹಾಗೂ ಮಾಸ್‍ಮಾದ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಮೋಹನ್ ಹಾಗೂ ಶಶಿಧರ್ ಅವರ ನಿರ್ಮಾಣ ನಿರ್ವಹಣೆಯಿದೆ.

Advertisement

ಹರಿದ್ವಾರ, ಬೆಂಗಳೂರು, ಊಟಿ, ಸಕಲೇಶಪುರ, ವಾರಣಾಸಿ(ಕಾಶಿ), ಮೈಸೂರು ಮುಂತಾದ ಕಡೆ ಚಿತ್ರಕ್ಕೆ 80ದಿನಗಳ ಚಿತ್ರೀಕರಣ ನಡೆಯಲಿದೆ. ಈ ಚಿತ್ರ ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ನಿರ್ಮಾಣವಾಗಲಿದೆ.

Advertisement

More Buzz

Trailers 2 weeks ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 2 weeks ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 3 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 3 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 3 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 3 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 3 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 3 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 3 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 3 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 3 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 3 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com