ಸಿನಿ ಪ್ರೇಕ್ಷಕರ ಮನಗೆದ್ದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ – ಕಾರ್ತಿಕ್ ಮಾರಲಭಾವಿ ಚಿತ್ರಕ್ಕೆ ಎಲ್ಲೆಡೆ ಉತ್ತಮ ರೆಸ್ಪಾನ್ಸ್

Published on

621 Views
Advertisement

ಕಳೆದ ವಾರ ಬಿಡುಗಡೆಯಾದ ಕಾರ್ತಿಕ್ ಮಾರಲಭಾವಿ ನಿರ್ದೇಶನದಲ್ಲಿ ಮೂಡಿ ಬಂದ ‘ಥಗ್ಸ್ ಆಫ್ ರಾಮಘಡ’ ಸಿನಿಮಾ ಪ್ರೇಕ್ಷಕ ಮಹಾ ಪ್ರಭುಗಳ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದು, ಬಿಡುಗಡೆಯಾದ ಎಲ್ಲಾ ಕಡೆಗಳಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಚಿತ್ರದ ಬಗ್ಗೆ ಕೇಳಿ ಬರ್ತಿರುವ ಉತ್ತಮ ವಿಮರ್ಶೆ ಹಾಗೂ ಪ್ರತಿಕ್ರಿಯೆ ಕಂಡು ಚಿತ್ರತಂಡ ಕೂಡ ಖುಷಿಯಾಗಿದೆ.


ಟ್ರೇಲರ್ ಹಾಗೂ ಹಾಡುಗಳ ಮೂಲಕ ಭರವಸೆ ಮೂಡಿಸಿದ್ದ ‘ಥಗ್ಸ್ ಆಫ್ ರಾಮಘಡ’ ಚಿತ್ರ ಕಾರ್ತಿಕ್ ಮಾರಲಭಾವಿ ನಿರ್ದೇಶನದ ಮೊದಲ ಸಿನಿಮಾ. ಸಾಕಷ್ಟು ನಿರೀಕ್ಷೆಯೊಂದಿಗೆ ಜನವರಿ 6ರಂದು ಪ್ರೇಕ್ಷಕರೆದುರು ಬಂದ ಈ ಚಿತ್ರ ಉತ್ತರ ಕರ್ನಾಟಕ ಭಾಗದಲ್ಲಿ1995ರಲ್ಲಿ ನಡೆದ ಸತ್ಯ ಘಟನೆ ಆಧರಿಸಿದೆ. ನೈಜ ಘಟನೆಗೆ ಒಂದಿಷ್ಟು ಸಿನಿಮ್ಯಾಟಿಕ್ ಟಚ್ ಕೊಟ್ಟು ಕ್ರೈಂ ಕಲ್ಟ್ ಕಥಾಹಂದರದ ಜೊತೆ ತೆರೆ ಮೇಲೆ ಬಂದ ಈ ಚಿತ್ರ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಚಂದನ್ ರಾಜ್, ಅಶ್ವಿನ್ ಹಾಸನ್, ಮಹಾಲಕ್ಷ್ಮೀ ಅಭಿನಯಕ್ಕೆ ಪ್ರೇಕ್ಷಕರು ಮನ ಸೋತಿದ್ದಾರೆ. ಮೊದಲ ವಾರ ಸಿನಿಮಾಗೆ ಸಿಕ್ಕಿರೋ ರೆಸ್ಪಾನ್ಸ್ ಚಿತ್ರತಂಡದ ಸಂಭ್ರಮವನ್ನು ಹೆಚ್ಚಿಸಿದ್ದು, ಎರಡನೇ ವಾರದತ್ತ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ.

Advertisement

ಭಾರತ್ ಟಾಕೀಸ್ ನಡಿ ಜೈ ಕುಮಾರ್, ಕೀರ್ತಿ ರಾಜ್ ಥಗ್ಸ್ ಆಫ್ ರಾಮಘಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮನು ದಾಸಪ್ಪ ಛಾಯಾಗ್ರಹಣ, ಶ್ರೀಧರ್ ಸಂಕಲನ, ವಿವೇಕ್ ಚಕ್ರವರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Advertisement

More Buzz

Trailers 5 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 5 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com