ಆರೆಂಜ್ ಆರಂಭ

Published on

459 Views
Advertisement

ನಿಮ್ಮ ಸಿನಿಮಾ ಲಾಂಛನದಲ್ಲಿ ನವೀನ್ ಅವರು ನಿರ್ಮಿಸುತ್ತಿರುವ `ಆರೆಂಜ್` ಚಿತ್ರದ ಮುಹೂರ್ತ ಸಮಾರಂಭ ಫೆಬ್ರವರಿ 11ರಂದು ರಾಜರಾಜೇಶ್ವರಿ ನಗರದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನೆರವೇರಿತು.

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರಶಾಂತ್ ರಾಜ್ ನಿರ್ದೇಶಿಸುತ್ತಿದ್ದಾರೆ. ಗಣೇಶ್ ಅವರು ಅಭಿನಯಿಸಿದ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶಿಲ್ಪ ಗಣೇಶ್ ಆರಂಭ ಫಲಕ ತೋರಿದರು. ಗಣೇಶ್ ಹಾಗೂ ಶಿಲ್ಪ ಗಣೇಶ್ ಅವರ ಹತ್ತನೇ ವಿವಾಹ ವಾರ್ಷಿಕೋತ್ಸವದ ದಿನದಂದೇ ಈ ಚಿತ್ರದ ಮುಹೂರ್ತ ನೆರವೇರಿರುವುದು ವಿಶೇಷ. ವಿತರಕ, ನಿರ್ಮಾಪಕ ನಿರಂಜನ್ ಹಾಗೂ ಪ್ರಶಾಂತ್ ಸಂಬರ್ಗಿ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

Advertisement

ನಿರ್ದೇಶಕ ಪ್ರಶಾಂತ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಸಂತೋಷ್ ರೈ ಪತಾಜೆ ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಮುರಳಿ ನೃತ್ಯ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ನಟರಾಜ್ ಸಂಭಾಷಣೆ ಬರೆದಿದ್ದಾರೆ. ಗಣೇಶ್, ಸಾಧುಕೋಕಿಲ, ರಂಗಾಯಣ ರಘು, ರವಿಶಂಕರ್ ಗೌಡ, ಸುಧಾ ಬೆಳವಾಡಿ, ಪದ್ಮಜಾರಾವ್, ಅಶೋಕ್, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Buzz 4 hours ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 4 hours ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 4 hours ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 6 hours ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 6 hours ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 7 hours ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 days ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 days ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 days ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Trailers 2 days ago

Patriot ಕನ್ನಡ ಟ್ರೇಲರ್: Mammootty-Mohanlal ಡಬಲ್ ಧಮಾಕಾ ZEE5 ನಲ್ಲಿ!

Short Films 2 days ago

ಅನುಪಮ ಕನ್ನಡ ಕಿರುಚಿತ್ರ: ಸಸ್ಪೆನ್ಸ್ ಭರಿತ ಪೂರ್ಣ ಸರಣಿ ಈಗ ಲಭ್ಯ!

Short Films 2 days ago

ಗದಗ ಜವಾರಿ ಮಂದಿ ಕಾಮಿಡಿ: ಹಳ್ಳಿ ಹೆಂಗಸರ ಜಗಳ ವೈರಲ್! | Flixoye

Copyright ©2026 . All Rights Reserved. privacy | terms Whatsapp: 9538193653 Email: hello@flixoye.com