ಮತ್ತೆ ಒಂದಾದ ‘ಪಂಚರಂಗಿ’ ಜೋಡಿ..ದಿಗಂತ್ ’ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ನಿಧಿ ಮೋಡಿ

Published on

539 Views
Advertisement

ದೂದ್ ಪೇಡಾ ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಅಂಗಳದಿಂದ ಮತ್ತೊಂದು ಹೊಸ ಸಮಾಚಾರ ರಿವೀಲ್ ಆಗಿದೆ. ಇತ್ತೀಚೆಗಷ್ಟೇ ಸರಳವಾಗಿ ಮುಹೂರ್ತ ನೆರವೇರಿಸಿದ್ದ ಚಿತ್ರತಂಡ ಭರದಿಂದ ಶೂಟಿಂಗ್ ನಡೆಸುತ್ತಿದ್ದು, ಇದೀಗ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಬಳಗಕ್ಕೆ ಪಂಚರಂಗಿ ಬ್ಯೂಟಿ ನಿಧಿ ಸುಬ್ಬಯ್ಯ ಎಂಟ್ರಿ ಕೊಟ್ಟಿದ್ದಾರೆ.

Advertisement

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಪಂಚರಂಗಿಯಲ್ಲಿ ದಿಗಂತ್ ಹಾಗೂ ನಿಧಿ ಸುಬ್ಬಯ್ಯ ಜೋಡಿ ಮೋಡಿ ಮಾಡಿತ್ತು. ಈ ಸಿನಿಮಾ ಇವರಿಬ್ಬರು ಬ್ರೇಕ್ ನೀಡಿತ್ತು. ಈ ಚಿತ್ರದ ನಂತ್ರ ನಿಧಿ ದಿಗಂತ್ ಮತ್ತೆ ಯಾವುದೇ ಚಿತ್ರದಲ್ಲಿಯೂ ನಟಿಸಿರಲಿಲ್ಲ. ಇದೀಗ ಹತ್ತು ವರ್ಷದ ನಂತರ ದಿಗಂತ್ ನಾಯಕನಾಗಿ ನಟಿಸುತ್ತಿರುವ ಎಡಗೈ ಅಪಫಾತ ಚಿತ್ರದಲ್ಲಿ ನಿಧಿ ನಟಿಸುತ್ತಿದ್ದಾರೆ. ಈ ಪಾತ್ರದ ಬಗ್ಗೆ ಗುಟ್ಟುಬಿಟ್ಟು ಕೊಡದ ನಿರ್ದೇಶಕ ಸಮರ್ಥ್ ಕಡ್ಕೋಳ್ ನಿಧಿ ಪಾತ್ರ ಪ್ರೇಕ್ಷಕರಿಗೆ ಪಕ್ಕ ಮನರಂಜನೆ ನೀಡುತ್ತದೆ ಅಂತಾ ಹೇಳಿದ್ದಾರೆ.

Advertisement

ಸಮರ್ಥ್ ಕಡ್ಕೋಳ್‌ ನಿರ್ದೇಶನ ಮಾಡುತ್ತಿರುವ ಈ ಸಿನಿಮಾವನ್ನು ‘ಅಂಬಿ ನಿಂಗೆ ವಯಸ್ಸಾಯ್ತೋ’ ಖ್ಯಾತಿಯ ಗುರುದತ್‌ ಗಾಣಿಗ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಸಮರ್ಥ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ವಿಶೇಷವಾದ ಸಬ್ಜೆಕ್ಟ್ ಹೊಂದಿದೆ. ಯಲಹಂಕ ಬಳಿಯ ಲಕ್ಷುರಿ ಅಪಾರ್ಟ್‌ಮೆಂಟ್‌ ಒಂದರಲ್ಲಿ ಈ ಸಿನಿಮಾದ ಚಿತ್ರೀಕರಣ ಶುಕ್ರವಾರದಿಂದ ಆರಂಭವಾಗಿದೆ. ದಿಗಂತ್‌ ಜೋಡಿಯಾಗಿ ನಾಯಕಿ ಧನು ಹರ್ಷ ನಟಿಸುತ್ತಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ ಪಾರ್ತವಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com