ಕಬ್ಜ : ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ*

Published on

598 Views
Advertisement

ಕಬ್ಜ : ಕನ್ನಡದ ಹೆಮ್ಮೆಯ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ”ದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 17 ರ ಸಂಜೆ 5 ಗಂಟೆಗೆ ಆನಂದ್ ಆಡಿಯೋ ಮೂಲಕ ಬಹು ನಿರೀಕ್ಷಿತ ಈ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.

Advertisement

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಈ ಚಿತ್ರ ಆರಂಭದಿಂದಲೂ ಭಾರತದಾದ್ಯಂತ ಮನೆಮಾತಾಗಿದೆ.
ಈ ಚಿತ್ರದ ಟೀಸರ್ ಯಾವಾಗ ಬರಬಹುದೆಂದು ಕರ್ನಾಟಕ ಮಾತ್ರವಲ್ಲದೆ, ದೇಶದೆಲ್ಲೆಡೆಯಿರುವ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿತ್ತು. ಈಗ ಆ ಸಮಯ ನಿಗದಿಯಾಗಿದೆ. ಚಿತ್ರದ ನಾಯಕ ಉಪೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ “ಕಬ್ಜ” ಚಿತ್ರದ ಟೀಸರ್ ಬಿಡುಗಡೆಯಾಗುತ್ತಿದೆ.

ಎಂ.ಎಸ್ ಅಕ್ಷರ್ – ರೀಷ್ಮಾ ನಾಣಯ್ಯ ಅಭಿನಯದಲ್ಲಿ ಬಂತು “ಛೀ ಕಳ್ಳ” ಆಲ್ಬಂ ಸಾಂಗ್.

Advertisement

ಕನ್ನಡಿಗರ ಹೆಮ್ಮೆಯ “ಕೆ.ಜಿ.ಎಫ್ 2” ಚಿತ್ರ ಈಗಾಗಲೇ ವಿಶ್ವದಾದ್ಯಂತ ವಿಜಯ ಪತಾಕೆ ಹಾರಿಸಿದೆ‌. ಕನ್ನಡಿಗರ ಮತ್ತೊಂದು ಹೆಮ್ಮೆಯ “ಕಬ್ಜ” ಚಿತ್ರ ಕೂಡ ಗೆಲ್ಲಲೇಬೇಕು. ಚಿತ್ರತಂಡದ ಅಪಾರ ಶ್ರಮದಿಂದ ನಿರ್ಮಾಣವಾಗಿರುವ “ಕಬ್ಜ” ಚಿತ್ರ ಗೆದ್ದರೆ ಕನ್ನಡ ಚಿತ್ರ ಗೆದ್ದಂತೆ. ಈ ಚಿತ್ರ ಗೆದ್ದರೆ ಮತ್ತೊಮ್ಮೆ ಬಾಲಿವುಡ್ ನಲ್ಲಿ ನಾವೇ ನಂಬರ್ ಒನ್ ಆಗಲಿದ್ದೇವೆ ಎನ್ನುತ್ತಿರುವ ಕನ್ನಡ ಕಲಾಭಿಮಾನಿಗಳು, “ಕಬ್ಜ” ಪ್ಯಾನ್ ಇಂಡಿಯಾ ಚಿತ್ರ ಪ್ರಪಂಚದಾದ್ಯಂತ ಪ್ರಚಂಡ ಯಶಸ್ಸು ಸಾಧಿಸಲಿ ಎಂದು ತುಂಬು ಮನಸ್ಸಿನಿಂದ ಹಾರೈಸುತ್ತಿದ್ದಾರೆ.

ಆರ್ ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. .
ಸೆಪ್ಟೆಂಬರ್ ಹದಿನೇಳರಂದು ಟೀಸರ್ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಚಿತ್ರದ
ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡುವುದಾಗಿ ಆರ್ ಚಂದ್ರು ಹೇಳಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com