`ಗ್ರಾಮ` ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

Published on

379 Views
Advertisement

ಯಶ್‍ದೀಪ್ ಪ್ರೊಡಕ್ಶನ್ಸ್ ಲಾಂಛನದಲ್ಲಿ ಹೇಮಂತಕುಮಾರ್ ಅವರು ನಿರ್ಮಿಸುತ್ತಿರುವ `ಗ್ರಾಮ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಾಸಾಂತ್ಯಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ. ಕರ್ನಾಟಕ- ಆಂದ್ರ ಪ್ರದೇಶ ಗಡಿಯ, ಚಿಂತಾಮಣಿ ಬಳಿಯ ಹಳ್ಳಿಯೊಂದರಲ್ಲೇ ಚಿತ್ರಕ್ಕೆ 23 ದಿನಗಳ ಚಿತ್ರೀಕರಣ ನಡೆದಿದೆ. ಮಾತಿನ ಭಾಗದ ಚಿತ್ರೀಕರಣದೊಂದಿಗೆ, ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಈ ಹಂತದಲ್ಲಿ ನಡೆದಿದೆ. ಲಿಖಿತ್ ಸೂರ್ಯ, ಲಹರಿ, ಸತ್ಯಪ್ರಕಾಶ್, ಸುಧಾರಾಣಿ, ಶಿಪ್ರ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

Advertisement

ಹರಿ ಕಿರಣ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ತೆಲುಗಿನಲ್ಲಿ ಒಂದು ಚಿತ್ರ ನಿರ್ದೇಶಿಸಿ, ಹತ್ತಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಒದಗಿಸಿರುವ ಹರಿ ಕಿರಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ.

ಕೃಷ್ಣಪ್ರಸಾದ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರವಿಕಲ್ಯಾಣ್ ಸಂಗೀತ ನೀಡಿದ್ದಾರೆ. ಬಾಬಿ ಸಂಕಲನ, ವಿಜಯ್ ಕೃಷ್ಣ ಕಲಾ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು, ಶಿವು, ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ವಿಜಯ್ ಭರಮಸಾಗರ ಗೀತರಚನೆ ಮಾಡಿ, ಸಂಭಾಷಣೆಯನ್ನು ಬರೆದಿದ್ದಾರೆ.

Advertisement

ಲಿಖಿತ್ ಸೂರ್ಯ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಲಹರಿ. ಶಿಪ್ರ, ಸತ್ಯಪ್ರಕಾಶ್, ಸುಧಾರಾಣಿ, ಸುಮನ್, ಗಾಂಧಿ, ಸಾಧುಕೋಕಿಲ, ಗೋಟುರಿ, ಶ್ರೇಯಸ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com