ಸಖತಾಗಿದೆ “ತ್ರಿಬಲ್ ರೈಡಿಂಗ್” ಹಾಡು.

Published on

581 Views
Advertisement

ಸಖತಾಗಿದೆ “ತ್ರಿಬಲ್ ರೈಡಿಂಗ್” ಹಾಡು. ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ತ್ರಿಬಲ್ ರೈಡಿಂಗ್” ಚಿತ್ರದ “ಯಟ್ಟಾ ಯಟ್ಟಾ” ಎಂಬ ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಜನಪ್ರಿಯವಾಗಿದೆ. ಚಂದನ್ ಶೆಟ್ಟಿ ಈ ಹಾಡನ್ನು ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಹಾಡಿದ್ದಾರೆ. ಅದ್ದೂರಿಯಾಗಿ ಮೂಡಿಬಂದಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು.

ನಾನು “ಮುಂಗಾರು‌ ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್” ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ಕಾಮಿಡಿ, ಸ್ವಲ್ಪ ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಇದೆ. ನಾಲ್ಕು ಹಾಡುಗಳಿದೆ‌. ಆದರಲ್ಲಿ ಒಂದು ಹಾಡು ಇಂದು ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ. ಸಾಯಿಕಾರ್ತಿಕ್ ಈ ಸಂಗೀತ ನಿರ್ದೇಶಕರು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಸುಮಧುರವಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಸಿನಿಮಾ‌
ಮಾಡಿದ್ದೇವೆ. ಅದಕ್ಕೆ ಕಾರಣರಾದ ನಿರ್ಮಾಪಕ ರಾಮ್ ಗೋಪಾಲ್ ಅವರಿಗೆ ಧನ್ಯವಾದ. ನಿಮ್ಮೆಲ್ಲರ ಹಾರೈಕೆಯಿರಲಿ ಎಂದರು ನಿರ್ದೇಶಕ ಮಹೇಶ್ ಗೌಡ.

Advertisement

ನಿರ್ದೇಶಕ ಮಹೇಶ್ ನನಗೆ “ಮುಂಗಾರು ಮಳೆ” ಯಿಂದ ಪರಿಚಯ. ಆ ಚಿತ್ರಕ್ಕೆ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗಲೇ ನನಗೆ ಒಂದು ಕಥೆ ಮಾಡುತ್ತೀನಿ ಎಂದಿದ್ದರು‌. ಹದಿನಾಲ್ಕು ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದರು. ಒಳ್ಳೆಯ ಪಾತ್ರ ಕೊಟ್ಟಿರುವುದಕ್ಕೆ ಧನ್ಯವಾದ. ಮೊದಲ ಬಾರಿ ನಿರ್ಮಾಣ ಮಾಡಿರುವ ರಾಮ್ ಗೋಪಾಲ್ ಅವರಿಗೆ ಒಳ್ಳೆಯದಾಗಲಿ. ಚಿತ್ರದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟು, ಟರ್ನ್ ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್” ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನ ಇದರಲ್ಲಿ ನೋಡಬಹುದು. ಈ ಚಿತ್ರದಲ್ಲಿ ಮೂವರು ನಾಯಕಿಯರು. ಅದಿತಿ ಪ್ರಭುದೇವ, ಮೇಘ ಶೆಟ್ಟಿ ಹಾಗೂ ರಚನಾ ಇಂದರ್. ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ನೋಡಿ ಹರಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

Advertisement

ನನ್ನದು ಈ ಚಿತ್ರದಲ್ಲಿ ಡಾಕ್ಟರ್ ಪಾತ್ರ. ಗಣೇಶ್ ಸರ್ ಜೊತೆ ನನ್ನ ಮೊದಲ ಸಿನಿಮಾ. ಹಾಡು ಹಾಗೂ ಸಿನಿಮಾ ಎರಡು ಚೆನ್ನಾಗಿದೆ ಎಂದು ಮೇಘ ಶೆಟ್ಟಿ ತಿಳಿಸಿದರು.
“ಲವ್ ಮಾಕ್ಟೇಲ್” ನಂತರ ನಾನು‌ ಒಪ್ಪಿಕೊಂಡ ಚಿತ್ರ ಇದು. ಹಠಮಾರಿ ಹೆಣ್ಣಿನ ಪಾತ್ರ ನನ್ನದು. ಏನಾದರೂ ಬೇಕೆಂದರೆ ಅದು ಬೇಕು ಎಂದು ಪಡೆದುಕೊಳ್ಳುತ್ತೇನೆ. ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ಎಂದರು ರಚನಾ ಇಂದರ್.
ಗಣೇಶ್ ಸರ್ ಗೆ ಈ ಹಿಂದೆ ಎರಡು ಹಾಡು ಹಾಡಿದೆ. ಇದು ಮೂರನೇ ಹಾಡು. ಸಾಯಿಕಾರ್ತಿಕ್ ತುಂಬಾ ಚೆನ್ನಾಗಿ ಸಂಗೀತ ನೀಡಿದ್ದಾರೆ. ಹಾಡು ಹಾಗೂ ಸಿನಿಮಾ ಎರಡೂ ಹಿಟ್ ಆಗಲಿ ಎಂದು ಚಂದನ್ ಶೆಟ್ಟಿ ಹಾರೈಸಿದರು.
ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಮ್ ಗೋಪಾಲ್ ವೈ.ಎಂ.
ಹಾಡುಗಳ ಹಾಗೂ ಹಾಡಿರುವವರ ಬಗ್ಗೆ ಸಂಗೀತ ನಿರ್ದೇಶಕ ಸಾಯಿಕಾರ್ತಿಕ್ ಮಾತನಾಡಿದರು.
ಚಿತ್ರತಂಡದ ಅನೇಕ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com