ಕುತೂಹಲ‌ ಮೂಡಿಸಿದೆ “ಸ್ಪೂಕಿ ಕಾಲೇಜ್” ನ ಟೀಸರ್.

Published on

584 Views
Advertisement

ಉತ್ಸಾಹಿ ಯುವ ನಿರ್ದೇಶಕ ಭರತ್ ಜಿ ನಿರ್ದೇಶಿಸಿರುವ “ಸ್ಪೂಕಿ ಕಾಲೇಜ್” ಚಿತ್ರದ ಟೀಸರ್ ಶ್ರೀದೇವಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.
ಬಿ.ಜಿ.ಎಸ್ ಮತ್ತು ಎಸ್ ಜೆ ಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಪರಮಪೂಜ್ಯ ಶ್ರೀ ಡಾ|| ಪ್ರಕಾಶನಾಥಸ್ವಾಮೀಜಿ ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ.
ಚಿತ್ರ ಆರಂಭದ ದಿನದಿಂದಲೂ ಪೋಸ್ಟರ್, ಫಸ್ಟ್ ಲುಕ್ ಸಾಕಷ್ಟು ಕುತೂಹಲ ಹುಟ್ಟಿಸಿತು. ಈಗ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಕುರಿತಾದ ಕುತೂಹಲ ಮತ್ತಷ್ಟು ಹೆಚ್ಚಿದೆ. ಈಗಾಗಲೇ ಅಧಿಕ ಸಂಖ್ಯೆಯಲ್ಲಿ ಟೀಸರ್ ವೀಕ್ಷಣೆಯಾಗುತ್ತಿದೆ. ನಟ ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಟೀಸರ್ ಬಗ್ಗೆ ಟ್ವಿಟ್ ಮಾಡಿ ಶುಭ ಕೋರಿದ್ದಾರೆ. “ಸ್ಪೂಕಿ” ಎಂದರೆ ಭಯ. ಟೀಸರ್ ನೋಡಿದವರಿಗೆ “ಸ್ಪೂಕಿ” ಪದದ ವಿಶ್ಲೇಷಣೆಯನ್ನು ನಿರ್ದೇಶಕರು ತಿಳಿಸುವ ಪ್ರಯತ್ನ ಮಾಡಿದ್ದಾರೆ.
ಹಿಂದೆ ಕನ್ನಡ ಚಿತ್ರರಂಗದ ಬ್ಲಾಕ್ ಬಾಸ್ಟರ್ ಹಿಟ್ ಸಿನಿಮಾಗಳಾದ “ನಾ ನಿನ್ನ ಬಿಡಲಾರೆ”, ” ಆಪ್ತಮಿತ್ರ ” ಸಿನಿಮಾಗಳ ರೀತಿ ಈ ಚಿತ್ರಕೂಡ ಪ್ರೇಕ್ಷಕರ ಮನಗೆಲುವುದರಲ್ಲಿ ಯಾವ ಸಂದೇಹವಿಲ್ಲ ಎಂಬ ಮಾತುಗಳು ಟೀಸರ್ ನೋಡಿದವರಿಂದ ಕೇಳಿ ಬರುತ್ತಿದೆ. ಕಾಲೇಜ್ ನಲ್ಲಿ ದೆವ್ವ ಇದೆ ಎನ್ನುವುದು ಈ ಚಿತ್ರದ ಹೈಲೆಟ್.

Advertisement

ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಧಾರಾವಾಡದ ನೂರಕ್ಕೂ ಹೆಚ್ಚಿನ ವರ್ಷ ಹಳೆಯದಾದ
ಕಾಲೇಜು ಹಾಗೂ ದಾಂಡೇಲಿ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ‌ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ನಿಮ್ಮ ಮುಂದೆ “ಸ್ಪೂಕಿ ಕಾಲೇಜ್” ಬರಲಿದೆ.
“ರಂಗಿತರಂಗ” , “ಅವನೇ ಶ್ರೀಮನ್ನಾರಾಯಣ” ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

Advertisement

ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ ಭರತ್ ಅವರೆ ಬರೆದಿದ್ದಾರೆ.
ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ.
“ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ. ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com