ಭಾರಿ ಸದ್ದು ಮಾಡುತ್ತಿದೆ ಮನೋರಂಜನ್ ರವಿಚಂದ್ರನ್ ಅಭಿನಯದ “ಪ್ರಾರಂಭ” ಚಿತ್ರದ ಟ್ರೇಲರ್

Published on

552 Views

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ `ಪ್ರಾರಂಭ` ಚಿತ್ರದ ಟ್ರೇಲರ್ ಬಿಡುಗಡೆಯಾದ ಕೇವಲ ಒಂದೇ ದಿನದಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು, ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ.

ನಾಯಕ ಮನೋರಂಜನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪ್ರಾರಂಭ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿತ್ತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈ ಟ್ರೇಲರ್ ಗೆ ಧ್ವನಿ ನೀಡಿದ್ದಾರೆ. ‌ ಟ್ರೇಲರ್ ಗೆ ಪ್ರದ್ಯೋತನ್ ಅವರ ಸಂಗೀತ ಹೆಚ್ಚಿನ ಮೆರಗು ನೀಡಿದೆ. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ‘ಪ್ರಾರಂಭ’ ರಾರಾಜಿಸಲಿದೆ.
ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸಿದ್ದಾರೆ.

ಪ್ರಾರಂಭ ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.

5ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೇಶಗಳಿದ್ದು , ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‍ಬಾಬು ಛಾಯಾಗ್ರಹಣ, ವಿಜಯ್.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಈ ಚಿತ್ರದಲ್ಲಿ ಮನೋರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಅಭಿನಯಿಸಿದ್ದಾರೆ. ಉಳಿದಂತೆ ಕಡ್ಡಿಪುಡ್ಡಿ ಚಂದ್ರು, ಹನುಮಂತೇಗೌಡ ರಾಘು ಶ್ರೀವಾಸ್ತವ್, ಶಾಂಭವಿ, ಸೂರಜ್(ಕಾಮಿಡಿ ಕಿಲಾಡಿಗಳು) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Copyright ©2026 . All Rights Reserved. privacy | terms Whatsapp: 9538193653 Email: hello@flixoye.com