ಇಂದು ಡಾ. ರಾಜ್‌ಕುಮಾರ್ ಹುಟ್ಟುಹಬ್ಬ
ನಟಸಾರ್ವಭೌಮ ಡಾ. ರಾಜ್‌ಕುಮಾರ್ (ಜನನ: ಏಪ್ರಿಲ್ ೨೪, ೧೯೨೯ – ಮರಣ: ಏಪ್ರಿಲ್ ೧೨, ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗು ಹ೦ಪಿ ವಿಶ್ವವಿದ್ಯಾಲಯದಿ೦ದ ನಾಡೋಜ ಪದವಿಯನ್ನು ಪಡೇದಿದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು.
ಬೆಂಗಳೂರಿನ ಬಸವನಗುಡಿಯಲ್ಲಿರುವ ವಿಜಯ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾದ ಡಿ.ಗುರುಮೂರ್ತಿ ಹಾರೋಹಳ್ಳಿ ಅವರು “ಕನ್ನಡ ರಂಗಭೂಮಿ ಮತ್ತು ಸಿನೆಮಾಕ್ಕೆ ಡಾ.ರಾಜ್ ಕೊಡುಗೆ” ಕುರಿತ ಸಂಶೋಧನಾತ್ಮಕ ಪ್ರಬಂಧ ಮಂಡಿಸಿ, ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಈ ಸಂಶೋಧನೆಯ ಸಮಯದಲ್ಲಿ, ಡಾ.ರಾಜ್ ಅವರನ್ನು ಹಲವಾರು ಬಾರಿ ಸಂದರ್ಶಿಸಿದ್ದಾರೆ. ೧೯೯೭ರಲ್ಲಿ ಪ್ರಾರಂಭಿಸಿದ ಸಂಶೋಧನೆಯನ್ನು ನಾಲ್ಕುವರ್ಷಗಳ ಕಾಲ ಡಾ.ಮಳಲಿ ವಸಂತಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆಸಿದ ಗುರುಮೂರ್ತಿ ೨೦೦೧ರಲ್ಲಿ ಪಿ.ಹೆಚ್.ಡಿ ಪದವಿ ಪಡೆದರು.
1954ರಲ್ಲಿಯೇ ಮೊದಲನೇ ಚಿತ್ರ ‘ಬೇಡರ ಕಣ್ಣಪ್ಪ’ ಉತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ,ಅಂದಿನ ರಾಷ್ಟ್ರಪತಿಗಳಾದ ‘ಶ್ರೀ ಸರ್ವಪಲ್ಲಿ ರಾಧಾಕೃಷ್ಣನ್’ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ #ಕರ್ನಾಟಕ_ರತ್ನ #ನಟಸಾರ್ವಭೌಮ