ತ್ರಿವಿಕ್ರಮ’ ಸೆನ್ಸಾರ್ ಪಾಸ್ ಇದೇ ವಾರ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ

Published on

600 Views
Advertisement

ತ್ರಿವಿಕ್ರಮ’ ಸೆನ್ಸಾರ್ ಪಾಸ್ ಇದೇ ವಾರ ರಾಜ್ಯಾದ್ಯಂತ ಅದ್ಧೂರಿ ಬಿಡುಗಡೆ
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಜೂನ್ 24ರಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಸೋಮವಾರ ಸೆನ್ದಾರ್ ಪ್ರಕ್ರಿಯೆ ಮುಗಿಸಿರುವ ಚಿತ್ರತಂಡಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಯು/ಎ ಅರ್ಹತಾ ಪತ್ರ ದೊರಕಿದೆ. ಅದಕ್ಕೂ ಮುನ್ನ ಜರುಗಿದ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಚಂದನವನದ ತಾರೆಯರ ಹಿಂಡು ಸಾಕ್ಷಿಯಾಗಿತ್ತು.

Advertisement

ಕ್ರೇಜಿ಼ಸ್ಟಾರ್ ರವಿಚಂದ್ರನ್, ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ‘ಡಾಲಿ’ ಧನಂಜಯ್, ಸುಮನ್, ಶೃತಿ, ನಿಶ್ವಿಕಾ ನಾಯ್ಡು ಹಾಗೂ ಮನುರಂಜನ್ ಸೇರಿದಂತೆ ಇನ್ನೂ ಅನೇಕರು ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಾವಿರಾರು ಪ್ರೇಕ್ಷಕರು ಹಾಗೂ ಅಭಿಮಾನಿಗಳು ಹಾಜರಾಗಿದ್ದರು.

Advertisement

ರವಿಚಂದ್ರನ್ ಹಾಗೂ ಶಿವರಾಜ್‌ಕುಮಾರ್ ‘ತ್ರಿವಿಕ್ರಮ’ ನೋಡಿ ಹರಸುವಂತೆ ಕೇಳಿಕೊಂಡರು. ಕಲರ್’ಫುಲ್ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಸಂಗೀತ ಸಂಜೆಯೂ ಹೈಲೈಟ್ ಆಗಿತ್ತು.
ಸಹನಾ ಮೂರ್ತಿ ‘ತ್ರಿವಿಕ್ರಮ’ನಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಪ್ಲೀಸ್ ಮಮ್ಮಿ’, ‘ಹನಿ ಬನಿ ಫೀಲ್ ಮೈ ಲವ್’ ಹಾಗೂ ‘ಶಕುಂತಲಾ ಶೇಕ್ ಯುವರ್ ಬಾಡಿ ಪ್ಲೀಸ್…’ ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಮಿಲಿಯನ್’ಗಟ್ಟಲೆ ಹಿಟ್ಸ್ ದಾಖಲಿಸಿರುವುದು ‘ತ್ರಿವಿಕ್ರಮ’ನ ಹೆಚ್ಚುಗಾರಿಕೆ.

Advertisement

ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com