ಉದಯ ಟಿವಿಯ ಹೊಸ ಧಾರಾವಾಹಿ ಕನ್ಯಾದಾನ ನವೆಂಬರ್ 15 ರಿಂದ ಸೋಮವಾರದಿಂದ ಶನಿವಾರ ರಾತ್ರಿ 8.30ಕ್ಕೆ

Published on

628 Views
Advertisement

ಕಳೆದ 27 ವರ್ಶಗಳಿಂದ ನಿರಂತರವಾಗಿ ಕನ್ನಡಿಗರಿಗೆ ತನ್ನ ವಿಶಿಷ್ಟ ಶೈಲಿಯ ಮನರಂಜನಾ ಕಾರ್ಯಕ್ರಮಗಳಿಂದ ಅತ್ಯಂತ ಜನಪ್ರಿಯ ವಾಹಿನಿ ಉದಯ ಟವಿ. ಈ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗೌರಿಪುರದ ಗಯ್ಯಾಳಿಗಳು, ನೇತ್ರಾವತಿ, ಸುಂದರಿ, ಕಾವ್ಯಾಂಜಲಿ, ನಯನತಾರ, ಸೇವಂತಿ, ಕಸ್ತೂರಿ ನಿವಾಸ ಧಾರಾವಾಹಿಗಳು ಕನ್ನಡಿಗರ ದೈನಂದಿನ ಮನರಂಜನೆಯ ಭಾಗವಾಗಿ ಯಶಸ್ವಿಯಾಗಿವೆ.

ಸದಾ ಹೊಸ ರೂಪದ ಕಥೆಗಳನ್ನು ಕೊಡುತ್ತಿರುವ ಉದಯ ಟಿವಿ ಹೊಸತನದ ಮೆರುಗನ್ನು ನೀಡಲು ಈಗ ವೀಕ್ಷಕರಿಗೆ ಮತ್ತೊಂದು ಹೊಸ ಧಾರಾವಾಹಿ “ಕನ್ಯಾದಾನ”ವನ್ನು ಅರ್ಪಿಸುತ್ತಿದೆ
ಬೆಂಗಳೂರು ಪಕ್ಕದ ಹಳ್ಳಿಯಲ್ಲಿ ವಾಸಿಸುತ್ತಿರುವ ಅಶ್ವತ್ನಿಗೆ 5 ಜನ ಹೆಣ್ಣು ಮಕ್ಕಳು. ಅಶ್ವತ್ಮೌಲ್ಯಗಳಿಗೆ ಬೆಲೆ ಕೊಡುವ ಮನುಷ್ಯ.. ತಾಯಿ ಇಲ್ಲದ ಮಕ್ಕಳಿಗೆ ಯಾವುದೇ ಕೊರತೆ ಇಲ್ಲದ ಹಾಗೆ ಅಕ್ಕರೆಯಿಂದ ಸಂಸ್ಕಾರವಂತರಾಗಿ ಬೆಳೆಸಿರುತ್ತಾನೆ. ತನ್ನ ಮಕ್ಕಳಿಗೆ ಮದುವೆ ಮಾಡಿ ಅವರಿಗೆ ಹೊಸ ಜೀವನ ಕೊಡುವ ಭರದಲ್ಲಿದ್ದಾನೆ. ಅವನ ಇಚ್ಚೆಯಂತೆ ತನ್ನಿಬ್ಬರ ಮಕ್ಕಳಿಗೆ ಮದುವೆ ಮಾಡುತ್ತಾನೆ ಆದರೆ ಮದುವೆ ಮಾಡಿ ಕಳುಹಿಸಿದ ತಕ್ಷಣ ಒಬ್ಬ ತಂದೆಯ ಜವಾಬ್ದಾರಿ ಮುಗಿಯುವುದಿಲ್ಲ ಎಂಬುದರ ಅರಿವಿದೆ. ಹೇಗೆ ಮಕ್ಕಳ ಮೇಲಿನ ಜವಾಬ್ದಾರಿ ತಂದೆಗೆ ಕೊನೆ ಉಸಿರಿನವರೆಗು ಇರುತ್ತದೆ ಎನ್ನುವ ಕಥೆ “ಕನ್ಯಾದಾನ”.

Advertisement

ಹಿರಿಯ ನಟ ಮೈಕೊ ಮಂಜು ತಂದೆಯ ಪಾತ್ರ ವಹಿಸಿದ್ದಾರೆ. 5 ಜನ ಮುದ್ದು ಹೆಣ್ಣು ಮಕ್ಕಳ ಪಾತ್ರವನ್ನು ಮಾನಸ ನಾರಾಯಣ್, ಕೀರ್ತಿ ವೆಂಕಟೇಶ್, ಯಶಸ್ವಿನಿ, ವಿದ್ಯಾ ರಾಜ್ ಹಾಗು ಪ್ರಾರ್ಥನ ಕಿರಣ್ ನಿರ್ವಹಿಸಿದ್ದಾರೆ. ಇನ್ನುಳಿದಂತೆ ಅರುಣ್ ಹರಿಹರನ್ ನಿರ್ದೇಶನ, ಅಂಜಲಿ ವೆಂಚರ್ಸ್ ನಿರ್ಮಾಣದಲ್ಲಿ ಈ ಧಾರಾವಾಹಿ ವೀಕ್ಷಕರ ಮುಂದೆ ಬರಲಿದೆ.

“ಈ ಧಾರಾವಾಹಿಯ ವಿಷಯ ಬೇರೆ ಕಥೆಗಳಿಗಿಂತ ಭಿನ್ನವಾಗಿದ್ದು, ಅಪರೂಪವಾದ ಜೋಡಿಗಳು ನಮ್ಮ ಧಾರಾವಾಹಿಯಲ್ಲಿದ್ದು ಒಂದು ಜೋಡಿ ಅಪ್ಪ ಹಾಗು ಅವರ 5 ಜನ ಹೆಣ್ಣುಮಕ್ಕಳಾದರೆ ಮತ್ತೊಂದು ಜೋಡಿ ಕಥೆ ಮತ್ತು ಚಿತ್ರಕಥೆ. ಈ ಕಥೆ ಕನ್ನಡ ವೀಕ್ಷಕರಿಗೆ ತುಂಬಾ ಇಷ್ಟವಾಗಲಿದೆ” ಎಂದು ಧಾರಾವಾಹಿಯ ನಿರ್ದೇಶಕ ಅರುಣ್ ತಮ್ಮ ಅಭಿಪ್ರಾಯ ಪಟ್ಟಿದ್ದಾರೆ.

Advertisement

ʻಕನ್ಯಾದಾನʼ ಇದೇ ನವೆಂಬರ್ 15 ರಿಂದ ಸೋಮವಾರದಿಂದ ಶನಿವಾರ ರಾತ್ರಿ 8:30 ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com