ತಾಯಂದಿರಿಂದ ಎಂಎಂಸಿಹೆಚ್ ಹಾಡುಗಳ ಅನಾವರಣ

Published on

336 Views
Advertisement

ದಶಕದ ನಂತರ ಮುಸ್ಸಂಜೆ ಮಾತು ಚಿತ್ರದ ಯಶಸ್ವೀ ಜೋಡಿ ನಿರ್ದೇಶಕ ಮುಸ್ಸಂಜೆ ಮಹೇಶ್ ಹಾಗೂ ಸಂಗೀತ ನಿರ್ದೇಶಕ ಶ್ರೀಧರ್ ವಿ.ಸಂಭ್ರಮ್ ಮತ್ತೊಂದು ಮ್ಯೂಸಿಕಲ್ ಹಿಟ್ ಚಿತ್ರವನ್ನು ಪ್ರೇಕ್ಷಕರಿಗೆ ನೀಡಲು ಅಣಿಯಾಗಿದ್ದಾರೆ. ಎಂಎಂಸಿಹೆಚ್ ಎಂಬ ವಿಷೇಶ ಶೀರ್ಷಿಕೆ ಹೊಂದಿರುವ ಈ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಪಂಚತಾರಾ ಹೋಟೆಲೊಂದರಲ್ಲಿ ನಡೆಯಿತು. ವಿಷೇಶವಾಗಿ ಈ ಚಿತ್ರದಲ್ಲಿ ಅಭಿನಯಿಸಿದ ನಾಲ್ವರು ನಾಯಕಿಯರ ತಾಯಂದಿರ ಕೈನಲ್ಲೇ ಈ ಚಿತ್ರದ ಹಾಡುಗಳ ಮೇಕಿಂಗ್‍ನ್ನು ಲೋಕಾರ್ಪಣೆ ಮಾಡಲಾಯಿತು. ಈ ಆಡಿಯೋ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಫಿಲಂ ಚೇಂಬರ್ ಅಧ್ಯಕ್ಷರಾದ ಸಾ.ರಾ. ಗೋವಿಂದು, ಉಮೇಶ್ ಬಣಕಾರ್ ಸೇರಿದಂತೆ ಹಲವರು ಗಣ್ಯರು ಆಗಮಿಸಿದ್ದರು.

Advertisement

Advertisement

ಇನ್ನು ಈ ಚಿತ್ರವನ್ನು ಎಸ್. ಪುರುಷೋತ್ತಮ್, ಜÁನಕಿರಾಮ್ ಹಾಗೂ ಅರವಿಂದ್ ಈ ಮೂವರೂ ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿ ರಜನಿಕಾಂತ್ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಜÁನಿ ಎಂಬ ಚಿತ್ರವನ್ನು ನಿರ್ಮಿಸಿದ್ದ ಈ ತಂಡ ಈಗ ತಮ್ಮ ಬ್ಯಾನರ್ ಮೂಲಕ ಎರಡನೇ ಚಿತ್ರವನ್ನು ಪ್ರೇಕ್ಷಕರ ಮಡಿಲಿಗೆ ಹಾಕಲು ಅಣಿಯಾಗಿದೆ. ಇದೇ ಮೊದಲಬಾರಿಗೆ ಕನ್ನಡ ಚಿತ್ರರಂಗದ ನಾಲ್ವರು ಹಿರಿಯ ಕಲಾವಿದೆಯರ ಪುತ್ರಿಯರು ಈ ಚಿತ್ರದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬರುವ ಪ್ಯಾಥೋಸಾಂಗ್ ಒಂದನ್ನು ಇಂಡಿಯನ್ ರೈಲ್ವೇಯಲ್ಲಿ ಜನರಲ್ ಮ್ಯಾನೇಜರ್ ಆಗಿರುವ ದಯಾನಂದ್ ಅವರು ಹಾಡಿದ್ದಾರೆ. ಸಾಹಿತಿ ಗೌಸ್ ಪೀರ್ ರಚಿಸಿದ ಗಾಳಿ ಬೀಸಿ ಗಾಳಿ ಬೀಸಿ ದೀಪ ಆರಿದೆ ಎಂಬ ಶೋಕಗೀತೆಗೆ ದಯಾನಂದ್ ಅವರು ದನಿಯಾಗಿದ್ದಾರೆ. ಈವರೆಗೆ ಹಲವಾರು ಭಾವಗೀತೆಗಳು ಭಕ್ತಿಗೀತೆಗೆಳನ್ನು ಹಾಡಿರುವ ಇವರು ಚಲನಚಿತ್ರಕ್ಕೆ ಹಾಡಿರುವುದು ಫಸ್ಟ್ ಟೈಮ್.

Advertisement

ಹಿರಿಯನಟಿ ಪ್ರಮೀಳಾ ಜೋಷಾಯ್ ಅವರ ಪುತ್ರಿ ಮೇಘನಾರಾಜ್, ವಿನಯಾ ಪ್ರಸಾದ್ ಅವರ ಪುತ್ರಿ ಪ್ರಥಮಾ ಪ್ರಸಾದ್, ಸುದಾ ಬೆಳವಾಡಿ ಅವರ ಪುತ್ರಿ ಸಂಯುಕ್ತಾ ಹೊರನಾಡು ಹಾಗೂ ಸುಮಿತ್ರಮ್ಮ ಅವರ ಪುತ್ರಿ ನಕ್ಷತ್ರ ಎಂ.ಎಂ.ಸಿ.ಹೆಚ್. ಚಿತ್ರದ ನಾಲ್ಕು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇವರ ಜೊತೆ ನಟಿ ರಾಗಿಣಿ ದ್ವಿವೇದಿ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಬ್ಬ ಪೆÇೀಲೀಸ್ ಕಾಪ್ ಗೆಟಪ್‍ನಲ್ಲಿ ಅವರು ಮಿಂಚಿದ್ದಾರೆ. ಈ ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ಶ್ರೇಯಾ ಘೋಷಾಲ್, ವಿಜಯ ಪ್ರಕಾಶ್‍ರಂಥ ಪ್ರಮುಖ ಗಾಯಕರು ಹಾಡಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com