ಓ ಮೈ ಲವ್‌ಗೆ ಉಪೇಂದ್ರ ಸಾಥ್

Published on

516 Views
Advertisement

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಸಿದ್ದಗೊಂಡಿರುವ ಹೊಸ ಥರದ ನಿರೂಪಣೆ ಒಳಗೊಂಡ ’ಓ ಮೈ ಲವ್’ ಚಿತ್ರದ ’ಏನಾಯ್ತೋ ನಾ ಕಾಣೆ’ ಲಿರಿಕಲ್ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಸ್ಮೈಲ್‌ಶ್ರೀನು ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಸಂಗೀತ ನಿರ್ದೇಶಕರು ಹಾಡಿನ ಟ್ಯೂನ್ ಕಳುಹಿಸಿಕೊಟ್ಟರು. ಅದನ್ನು ಕೇಳುತ್ತಿದ್ದ ಹಾಗೆ ರೋಮಾಂಚನವಾಯಿತು. ಪಲ್ಲವಿ ಚೆನ್ನಾಗಿದೆ. ಚರಣ ಬದಲಾವಣೆ ಮಾಡೋಣವೆಂದು ಹೇಳಲಾಯಿತು.


ನಂತರ ಎರಡು ದಿವಸದಲ್ಲೆ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ಚರಣ ಕೊಟ್ಟರು. ಅನುರಾಧಭಟ್-ನಿಚರಾಜನ್ ಧ್ವನಿಯಾಗಿದ್ದಾರೆ. ಗೀತೆಗೆ ಎಲ್ಲಾ ಕಡೆಯಿಂದ ಸಕರಾತ್ಮಕ ಸ್ಪಂದನೆ ಸಿಕ್ಕಿದೆ. ಹಾಡಿನ ಪ್ರೋಮೋ ನೋಡಿ ಎಲ್ಲರು ಖುಷಿಯಾಗಿದ್ದಾರೆ. ಪೂರ್ತಿ ಹಾಡನ್ನು ಬಿಡುಗಡೆ ಮಾಡಿಲ್ಲ. ಈಗ ನೋಡಿದ್ದು ಶೇಕಡ ಐದರಷ್ಟು ಮಾತ್ರ. ಬಾಕಿ ಶೇಕಡ 95ರಷ್ಟು ಚಿತ್ರಮಂದಿರದಲ್ಲಿ ನೋಡಿದರೆ ಅದರ ಮಜಾನೇ ಬೇರೆ ಇರುತ್ತದೆ. ಹಾಡನ್ನು ಬೂಸ್ಟ್ ಮಾಡಿಲ್ಲ. ನಿಜವಾಗಿ ನೋಡಲೆಂದು ಬಿಡಲಾಗಿದೆ. ಗೀತೆಯನ್ನು ಅನಾವರಣಗೊಳಿಸಿದ್ದಕ್ಕೆ ವಿಶೇಷವಾಗಿ ಉಪ್ಪಿ ಸರ್‌ಗೆ ಥ್ಯಾಂಕ್ಸ್ ಹೇಳಬೇಕು ಎಂದರು.

Advertisement

ಚಿಕ್ಕಂದಿನಿಂದಲೂ ಚಿತ್ರ ಮಾಡಬೇಕೆಂಬ ಬಯಕೆ ಇತ್ತು. ಅದು ಈಗ ಈಡೇರಿದೆ ಎಂದು ಕಥೆ ಬರೆದು ಬಂಡವಾಳ ಹೂಡಿರುವ ಜಿ.ರಾಮಾಂಜಿನಿ ಹೇಳಿದರು. ಉಪ್ಪಿ ಸರ್ ಅಭಿಮಾನಿಯಾಗಿ ಅವರಿಂದಲೇ ಬಿಡುಗಡೆ ಮಾಡಬೇಕೆಂಬ ಆಸೆ ಇತ್ತು. ನಾವು ಕೇಳಿದ ತಕ್ಷಣ ’ಕಬ್ಜಾ’ ಶೂಟಿಂಗ್‌ದಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ಹಾಡನ್ನು ವೀಕ್ಷಿಸಿ ಶುಭ ಹಾರೈಸಿದರು ಎಂದು ನಾಯಕ ಅಕ್ಷಿತ್‌ಶಶಿಕುಮಾರ್ ಹೇಳಿಕೊಂಡರು.

Advertisement

ನಾಯಕಿ ಕೀರ್ತಿಕಲ್ಕರೆ, ಮತ್ತೋಂದು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡರುವ ಕಿರುತೆರೆ ನಟ ಪೃಥ್ವಿರಾಜ್, ನಿರ್ಮಾಪಕರ ಗೆಳಯರುಗಳಾದ ರಾಘವೇಂದ್ರ, ರಾಮಕೃಷ್ಣ ಉಪಸ್ತಿತರಿದ್ದು ಕಡಿಮೆ ಸಮಯ ತೆಗೆದುಕೊಂಡರು. ತಾರಗಣದಲ್ಲಿ ದೇವಗಿಲ್,ಎಸ್.ನಾರಾಯಣ್, ಸಾಧುಕೋಕಿಲ, ಪವಿತ್ರಲೋಕೇಶ್, ಪೃಥ್ವಿ, ಲಿಂಗರಾಜ್, ಸುವೇದ, ಅಕ್ಷತ, ಟೆನ್ನಿಸ್‌ಕೃಷ್ಣ ಮುಂತಾದವರು ಅಭಿನಯಿಸಿದ್ದಾರೆ. ಸಂಗೀತ ಚರಣ್‌ಅರ್ಜುನ್, ಛಾಯಾಗ್ರಹಣ ಹಾಲೇಶ್.ಎಸ್, ಸಂಕಲನ ಡಿ.ಮಲ್ಲಿ, ನೃತ್ಯ ಮುರಳಿ ಅವರದಾಗಿದೆ. ಬೆಂಗಳೂರು, ಓರ್ಚ, ಭೂಪಾಲ್, ಕಜರಾಬ್ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com