ಸದ್ದು ಮಾಡದೆ ದಾರಿ ಬಿಡಿ ಬರ್ತಿದ್ದಾನೆ ವರದ

Published on

513 Views
Advertisement

ನಿಯತ್ತಿಗೆ ತಲೆ ಬಾಗ್ತಾನೆ ನಿಯತ್ತಿಲ್ಲದವರ ಎದೆ ಬಗಿತಾನೆ ಈ ವರದ
ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ವರದ” ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
“ರಾಬರ್ಟ್” ಸಿನಿಮಾ ನಂತರ ವಿನೋದ್ ಅಭಿನಯದ “ವರದ” ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.
ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ ದೃಶ್ಯಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ.

ತಂದೆ-ಮಗನ ಬಾಂಧವ್ಯ ಈ ಚಿತ್ರದ ಹೈಲೆಟ್. ನನ್ನ ತಂದೆ ಪಾತ್ರದಲ್ಲಿ ಖ್ಯಾತ ನಟ ಚರಣ್ ರಾಜ್ ಅಭಿನಯಿಸಿದ್ದಾರೆ ಎಂದು ತಿಳಿಸಿದ, ವಿನೋದ್ ಪ್ರಭಾಕರ್ ಈ ಚಿತ್ರದ ಚಿತ್ರೀಕರಣ ಸಮಯದಲ್ಲಿ ತಮ್ಮ ಕಾಲಿಗೆ ಪೆಟ್ಟಾದ ವಿಚಾರವನ್ನು ಹಂಚಿಕೊಂಡರು.

Advertisement

ಚಿತ್ರರಂಗದಲ್ಲಿ ಸುಮಾರು 25 ವರ್ಷಗಳ ಅನುಭವ ವಿರುವ ನಿರ್ದೇಶ ಉದಯ ಪ್ರಕಾಶ್ ನಿರ್ದೇಶನ ಹಾಗೂ ನಿರ್ಮಾಣದ ಜವಾಬ್ಧಾರಿಯನ್ನು ಹೊತ್ತಿದ್ದಾರೆ.
ವಿನೋದ್ ಪ್ರಭಾಕರ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ಅಮಿತ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರು ಅಭಿನಯ ಚೆನ್ನಾಗಿದೆ .‌ ತಂತ್ರಜ್ಞರ ಕಾರ್ಯವಂತು ಅದ್ಭುತ. ಇದೇ ಹದಿನೆಂಟರಂದು ನಮ್ಮ ಚಿತ್ರ ರಾಜ್ಯಾದ್ಯಂತ ಸುಮಾರು ನೂರೈವತ್ತಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ದೇಶಕ ಹಾಗೂ ನಿರ್ಮಾಪಕ ಉದಯ ಪ್ರಕಾಶ್.
ಚಿತ್ರದ ಟ್ರೇಲರ್ ನೋಡಿ ಖುಷಿಯಾಗಿದೆ. ಚಿತ್ರವನ್ನು ನೋಡುವ ಕಾತುರದಲ್ಲಿದ್ದೀನಿ. ನಾನು ಈ ಚಿತ್ರದಲ್ಲಿ “ವರದ” ನ ಪ್ರೇಯಸಿಯಾಗಿ ಕಾಣಿಸಿಕೊಂಡಿದ್ದೀನಿ. ಚಿತ್ರ‌ ನೋಡಿ ಹರಸಿ ಎಂದರು‌ ನಾಯಕಿ ಅಮಿತ.
ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅನಿಲ್ ಸಿದ್ದು, ಎಂ.ಕೆ.ಮಠ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತ ನಿರ್ದೇಶಕ ಪ್ರದೀಪ್ ವರ್ಮ ಸೇರಿಯ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿರುವ ಈ ಚಿತ್ರದ ಸಹ ನಿರ್ಮಾಪಕರು ಸುನಿತಾ ಪ್ರಕಾಶ್.

Advertisement

ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಬರೆದಿದ್ದಾರೆ. ಭಜರಂಗಿ ಆನಂದ್ ಛಾಯಾಗ್ರಹಣ, ವೆಂಕಿ ಯು ಡಿ ವಿ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್(ಕೆ ಜಿ ಎಫ್), ಅಶ್ರಫ್ ಗುರ್ಕಲ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ವಿನೋದ್ ಪ್ರಭಾಕರ್, ಚರಣ್ ರಾಜ್, ಅಮಿತ, ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಚಿತ್ರ ಇದೇ ಫೆಬ್ರವರಿ18ರಂದು ಚಿತ್ರ ತೆರೆಯ ಮೇಲೆ ಬರಲಿದೆ ನೋಡಿ ಆಶೀರ್ವದಿಸಿ.

Advertisement

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com