ಎದುರಾಳಿಗಳಾದ ವಸಿಷ್ಠ ಸಿಂಹ ಹಾಗೂ ಕಿಶೋರ್…!!

Published on

384 Views
Advertisement

ಟಗರು ಚಿಟ್ಟೆ ವಸಿಷ್ಠ ಸಿಂಹ ಹಾಗೂ ಡಿಫರೆಂಟ್ ಪಾತ್ರದ ಮೂಲಕ ಖ್ಯಾತಿ ಗಳಿಸಿದ ಕಿಶೋರ್ ಇಬ್ಬರು ಎದುರಾಳಿಗಳಾಗಿದ್ದಾರೆ. ಇಲ್ಲಿ ಇಬ್ಬರು ಖಡಕ್ ಪೋಲಿಸ್ ಅಧಿಕಾರಿಗಳು. ಈ ಇಬ್ಬರು ಅಧಿಕಾರಿಗಳ ನಡುವೆ ಶೀತಲ ಸಮರ ನಡೆಯುತ್ತದೆ. ನೈಜ ಘಟನೆಯನ್ನು ಒಳಗೊಂಡ ಈ ಚಿತ್ರದಲ್ಲಿ ಎರಡು ಪಾತ್ರಗಳಿಗೂ ತೂಕವಿರಲಿದೆ.

Advertisement

ಇನ್ನು ಹೆಸರಿಡದ ಈ‌ ಚಿತ್ರಕ್ಕೆ ಹಲವು‌ ಸಿನಿಮಾಗಳಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವವಿರುವ ವಚನ್‌ ಈ ಚಿತ್ರದ ಮೂಲಕ ಸ್ವಾತಂತ್ರ್ಯ ನಿರ್ದೇಶಕರಾಗುತ್ತಿದ್ದಾರೆ. ಸಿನಿಮಾ ಮುಹೂರ್ತದ ಸಮಯದಲ್ಲಿ‌ ಮಾತನಾಡಿದ ನಿರ್ದೇಶಕ ವಚನ್ ” ಪವನ್ ಕುಮಾರ್ ಅವರೊಂದಿಗೆ ಲೂಸಿಯಾ ಸಿನಿಮಾದಲ್ಲಿ ಕೆಲಸ ಮಾಡುವಾಗ ಛಾಯಾಗ್ರಾಹಕ ನವೀನ್ ಕುಮಾರ್ ಜೊತೆ ಕಥೆಯ ಬಗ್ಗೆ ಚರ್ಚೆ ಮಾಡಿದ್ದೆ. ಅವರಿಂದ ವಸಿಷ್ಠ ರವರನ್ನು ಭೇಟಿಯಾದೆ. ವಸಿಷ್ಠರವರು‌ ಒಪ್ಪಿದ ಮೇಲೆ ಸಿನಿಮಾಕ್ಕೆ ಹಣ ಹೂಡಲು‌ ನಿರ್ಮಾಪಕ ಜನಾರ್ಧನ್ ಸಿಕ್ಕಿದರು. ಇದೀಗ ಸಿನಿಮಾ ಸೆಟ್ಟೇರಿದೆ” ಎಂದರು. ನಂತರ ಮಾತನಾಡಿದ ವಸಿಷ್ಠ “ಇಬ್ಬರು ಪೋಲಿಸ್ ಅಧಿಕಾರಿಗಳ ನಡುವಿನ ಶೀತಲ ಯುದ್ಧ ಕುತೂಹಲ ಮೂಡಿಸುತ್ತದೆ.

ಕಥೆ ಕೇಳಿದಾಗಲೇ ನನಗೆ ತುಂಬಾ ಇಷ್ಟವಾಯಿತು ಅದಕ್ಕೆ ಒಪ್ಪಿಕೊಂಡೆ. ಅನೂಪ್ ಸೀಳಿನ್ ರವರ ಸಂಗೀತದಲ್ಲಿ ಈ ಮೊದಲು ‘ದಯವಿಟ್ಟು ಗಮನಿಸಿ’ ಸಿನಿಮಾ ಮಾಡಿದ್ದೆ. ಈಗ ಅವರ ಜೊತೆ ಮತ್ತೊಂದು ಅವಕಾಶ ಸಿಕ್ಕಿದೆ” ಎಂದರು. ಈ ಸಿನಿಮಾಕ್ಕಾಗಿ ಒಂದಷ್ಟು ಪೋಲಿಸ್ ಅಧಿಕಾರಿಗಳನ್ನು ಭೇಟಿಯಾಗಿ‌ ಮಾಹಿತಿ ಸಂಗ್ರಹಿಸಿರುವ ನಿರ್ದೇಶಕ ವಚನ್ ಸದ್ಯ ನಾಯಕಿಯ ಹುಡುಕಾಟದಲ್ಲಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಬೆಂಗಳೂರು, ತುಮಕೂರು, ಮೈಸೂರು, ಮಡಿಕೇರಿ‌ ಸುತ್ತಮುತ್ತ ಹಾಗೂ ವಿದೇಶದಲ್ಲಿ ನಡೆಯಲಿದೆಯಂತೆ. ಚಿತ್ರದಲ್ಲಿ ಧರ್ಮಣ್ಣ ಕಡೂರು, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಕಾಮಿಡಿ‌ ಕಿಲಾಡಿ ಖ್ಯಾತಿಯ ಸೂರ್ಯ ಮತ್ತು ಮುತ್ತುರಾಜ್ ತಾರಾಗಣದಲ್ಲಿದ್ದಾರೆ. ಹಾಸ್ಯ ನಟ ಚಿಕ್ಕಣ್ಣ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Advertisement

More Buzz

Trailers 3 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 3 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 1 week ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com