ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ವೆಟ್ರಿಮಾರನ್​ ನಿರ್ದೇಶನದ ‘ವಿಡುದಲೈ’

Published on

529 Views
Advertisement

ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುದಲೈ’ ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ.ಈ ಚಿತ್ರವನ್ನು ರೆಡ್​ ಜಯಂಟ್​ ಮೂವಿಸ್​ನಡಿ ಉದಯನಿಧಿ ಸ್ಟಾಲಿನ್​ ಅರ್ಪಿಸಿದರೆ, ಆರ್​.ಎಸ್​. ಇನ್ಫೋಟೈನ್​ಮೆಂಟ್​ನಡಿ ಎಲ್ರೆಡ್​ ಕುಮಾರ್​ ನಿರ್ಮಿಸುತ್ತಿದ್ದಾರೆ.

ಕಾಲಿವುಡ್​ನ ಜನಪ್ರಿಯ ನಿರ್ದೇಶಕರಲ್ಲಿ ವೆಟ್ರಿಮಾರನ್​ ಪ್ರಮುಖರು. ಕೆಲವು ತಿಂಗಳುಗಳ ಹಿಂದೆ ಅವರು ‘ವಿಡುದಲೈ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಘೋಷಿಸಿದಾಗಲೇ, ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ನರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ, ಈ ಚಿತ್ರದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ.

Advertisement

ಸದ್ಯ, ‘ವಿಡುದಲೈ’ ಚಿತ್ರದ ಭಾಗ ಒಂದರ ಚಿತ್ರೀಕರಣ ಸಂಪೂರ್ಣವಾಗಿದ್ದು, ಪೋಸ್ಟ್​ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ. ಎರಡನೆಯ ಭಾಗದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು ಸಿರುಮಲೈ, ಕೊಡೈಕೆನಾಲ್​ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಈ ಎರಡು ಚಿತ್ರಗಳು ದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿದ್ದು, ತಮಿಳಿನ ಕಾಸ್ಟ್ಲಿ ಚಿತ್ರಗಳ ಪೈಕಿ ‘ವಿಡುದಲೈ’ ಸಹ ಸೇರ್ಪಡೆಯಾಗಲಿದೆ.

Advertisement

ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್​ ನಿರ್ಮಾಣ ಮಾಡಲಾಗಿದೆ. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್​ ನಿರ್ಮಾಣಕ್ಕೂ ಬಳಸಲಾಗಿರುವುದು ವಿಶೇಷ. ಇದಲ್ಲದೆ, ಸಿರುಮಲೈ ಬಳಿ ಜಾಕಿ ಅವರ ಕಲಾ ನಿರ್ದೇಶನದಲ್ಲಿ ಒಂದು ಹಳ್ಳಿಯನ್ನು ನಿರ್ಮಿಸಲಾಗಿದೆ.
ಸದ್ಯ ಕೊಡೈಕೆನಾಲ್​ನಲ್ಲಿ ಪೀಟರ್​ ಹೇನ್ಸ್​ ನಿರ್ದೇಶನದಲ್ಲಿ ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುವುದಕ್ಕೆ ತಯಾರಿ ನಡೆಸಲಾಗಿದ್ದು, ಇದಕ್ಕಾಗಿ ಬಲ್ಗೇರಿಯಾದಿಂದ ಸಾಹಸ ಕಲಾವಿದರನ್ನು ಕರೆಸಲಾಗಿದೆ. ಈ ಆಕ್ಷನ್​ ದೃಶ್ಯಗಳಲ್ಲಿ ಬಲ್ಗೇರಿಯಾದ ಸಾಹಸ ಕಲಾವಿದರು ಸಹ ಭಾಗವಹಿಸುತ್ತಿರುವುದು ವಿಶೇಷ.

Advertisement


‘ವಿಡುದಲೈ’ ಚಿತ್ರದಲ್ಲಿ ವಿಜಯ್​ ಸೇತುಪತಿ, ಸೂರಿ, ಭವಾನಿ ಶ್ರೀ, ಪ್ರಕಾಶ್​ ರಾಜ್​, ಗೌತಮ್​ ವಾಸುದೇವ ಮೆನನ್, ರಾಜೀವ್​ ಮೆನನ್​ ಮುಂತಾದವರು ನಟಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ‘ಇಸೈಜ್ನಾನಿ’ ಇಳಯರಾಜ ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದು, ವೇಲ್​ರಾಜ್​ ಛಾಯಾಗ್ರಹಣ ಮಾಡುತ್ತಿದ್ದಾರೆ.
ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ರೆಡ್​ ಜೈಂಟ್​ ಮೂವೀಸ್​ ವಹಿಸಿಕೊಂಡಿದ್ದು, ಸದ್ಯದಲ್ಲೇ ‘ವಿಡುದಲೈ’ ಮೊದಲ ಭಾಗದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ.

More Buzz

Trailers 4 days ago

ಬಾಲನ್ – ದಿ ಬಾಯ್ ಟ್ರೇಲರ್: ಭಯಾನಕ ಕಥೆಯ ಸುಳಿವು!

Trailers 4 days ago

ನೀ ನಂಗೆ ಅಲ್ಲವ ಟೀಸರ್: ರಾಹುಲ್ ಆರ್ಕೋಟ್ ಡೆಬ್ಯೂಟ್ novità

Buzz 2 weeks ago

ಪೀಬೊ ಬ್ರೈಸನ್ ನಿಧನ: ಡಿಸ್ನಿ ಗೀತೆಗಳ ಗಾಯಕನಿಗೆ 75ನೇ ವಯಸ್ಸಿನಲ್ಲಿ ಅಂತಿಮ ನಮನ

Buzz 2 weeks ago

Avengers: Doomsday ಕಾಫಿ ಶಾಪ್? ಅಭಿಮಾನಿಗಳ ನಿರಾಸೆ!

Buzz 2 weeks ago

ಕಲಾ ಹಿರನ್: ಸಲ್ಮಾನ್ ಖಾನ್‌ರ ಕಾನೂನು ನೋಟಿಸ್, ನಿರ್ಮಾಪಕ ಪ್ರತಿಕ್ರಿಯೆ!

Trailers 2 weeks ago

‘ಭಾರತ್ ಭಾಗ್ಯ ವಿಧಾತ’ ಟ್ರೇಲರ್: ಕಂಗನಾ 26/11 ವೀರ ನರ್ಸ್ ಪಾತ್ರದಲ್ಲಿ

Buzz 2 weeks ago

ಗೌರವ ಗೇರಾ: 84 ರೂ. ಜೊತೆಗಿದ್ದ ದಿನಗಳ ನೆನಪು!

Buzz 2 weeks ago

ತ್ರಿಶಾ ಕೃಷ್ಣನ್ ಟ್ವೀಟ್: ವಿಜಯ್‌ ಗೂಳಿಬಿರಿದು ವಿವಾದಕ್ಕೆ ಪ್ರತಿಕ್ರಿಯೆ!

Trailers 2 weeks ago

Massa Massa Lyrical Video Drops: Ram Charan & Janhvi Ignite Screens for Peddi

Short Films 2 weeks ago

ಜಾನು ಪಾಪ ನಾನು ಕಿರುಚಿತ್ರ: Bhaava Frames ನಿಂದ ನಗುವಿನ ಧಮಾಕಾ!

Short Films 2 weeks ago

KARAVATIKE ಕನ್ನಡ ಕಿರುಚಿತ್ರ ಟ್ರೇಲರ್: ಭಾವನೆಗಳ ಅದ್ಭುತ ಜರ್ನಿ!

Short Films 2 weeks ago

ಶಂಕರಶಾಸ್ತ್ರಿ ಮತ್ತು ಭಟ್ಟನ ಕೀಟ್ಲೆಗಳು: KGF ಬಾಯ್ಸ್‌ನ ಹೊಸ ಕಾಮಿಡಿ ವೈರಲ್!

Copyright ©2026 . All Rights Reserved. privacy | terms Whatsapp: 9538193653 Email: hello@flixoye.com